ರಷ್ಯಾದ ತೈಲ ಹಡಗು ವಶಕ್ಕೆ ಪಡೆದ ಅಮೆರಿಕ!
ಅಟ್ಲಾಂಟಿಕ್ ಮಹಾಸಾಗರದಲ್ಲಿ ರಷ್ಯಾದ ಧ್ವಜ ಹೊಂದಿದ್ದ ತೈಲ ಹಡಗನ್ನು ಅಮೆರಿಕದ ಸೇನೆ ಸಿನಿಮಯ ಶೈಲಿಯಲ್ಲಿ ಬೆನ್ನಟ್ಟಿ ವಶಕ್ಕೆ ಪಡೆದಿದೆ. ಉತ್ತರ ಸಮುದ್ರದಲ್ಲಿ ಕಳೆದೆರಡು ವಾರಗಳಿಂದ ಅನುಮಾನಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಹಡಗಿನ ಚಲನವಲನಗಳ ಮೇಲೆ ಕಣ್ಗಾವಲು ಇರಿಸಿದ್ದ ಅಮೆರಿಕ ಗುರುವಾರ ಹಡಗನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಹಡಗನ್ನು ರಕ್ಷಿಸಿಕೊಳ್ಳಲು ರಷ್ಯಾ ನೌಕಾಪಡೆಯನ್ನು ರವಾನಿಸುತ್ತಿರುವ ಸುಳಿವು ಪಡೆದ ಅಮೆರಿಕ ಸೇನೆ ಏಕಾಏಕಿ ದಾಳಿ ನಡೆಸಿ ಹಡಗನ್ನು ಬೆನ್ನಟ್ಟಿ ವಶಕ್ಕೆ ಪಡೆದಿದೆ. ರಷ್ಯಾದ ಸುದ್ದಿ
ಬೆಳಗಾವಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: 3 ಸಾವು
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಬಾಯ್ಲರ್ ಸ್ಫೋಟದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಕನಿಷ್ಠ 6 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಭವಿಸಿದೆ. ಅಕ್ಷಯ ತೋಪಡೆ (45), ದೀಪಕ್ ಮುನವಳ್ಳಿ (31),
ಅಕ್ಕ-ಪಕ್ಕದ ಮನೆಯವರ ಜಗಳ 6 ವರ್ಷದ ಬಾಲಕಿ ಕೊಲೆಯಲ್ಲಿ ಅಂತ್ಯ
ಕ್ಷುಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತಾಯಿಗೆ ಬುದ್ದಿ ಕಲಿಸಲು ಆಕೆಯ 6 ವರ್ಷದ ಮಗಳನ್ನು ಬರ್ಬರವಾಗಿ ಕೊಂದು ಶವವನ್ನು ಚರಂಡಿಗೆ ಎಸೆದ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್‌ಫೀಲ್ಡ್ ಸಮೀಪದ ನಲ್ಲೂರಳ್ಳಿಯಲ್ಲಿ ಮಂಗಳವಾರ ನೆರೆಹೊರೆಯವರ ನಡುವಿನ ದ್ವೇಷಕ್ಕೆ ಪಶ್ಚಿಮ ಬಂಗಾಳ
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ
ಅರಸು ಆಡಳಿತಕ್ಕೆ ಸಿದ್ದರಾಮಯ್ಯ ಹೋಲಿಕೆ ಬೇಡ: ಯಡಿಯೂರಪ್ಪ ಕಿಡಿ
ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು
ರಾಷ್ಟ್ರೀಯ ನಾಟಕೋತ್ಸವ ಭಿತ್ತಿಪತ್ರ ಬಿಡುಗಡೆಗೊಳಿಸಿದ ರಂಗಾಯಣ ನಿರ್ದೇಶಕ ಸತೀಶ್ ತಿಪಟೂರ್
ಮೈಸೂರು: ಮೈಸೂರು ರಂಗಾಯಣದ ಪ್ರತಿಷ್ಠಿತ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಬಹುರೂಪಿ ಬಾಬಾ ಸಾಹೇಬ್- ಸಮತೆಡೆಗೆ ನಡಿಗೆ ಆಶಯದಲ್ಲಿ ಜ. 11ರಿಂದ 18ರವರೆಗೆ ನಡೆಸಲಾಗುವುದು. ನಾಟಕ, ಸಂಗೀತ, ಜಾನಪದ, ಕಲೆ, ಚಲನಚಿತ್ರಗಳಲ್ಲಿ ಅಂಬೇಡ್ಕರರ ಸಮಗ್ರ ವ್ಯಕ್ತಿತ್ವ ಪ್ರದರ್ಶಿಸಲಾಗುತ್ತಿದೆ ಎಂದು ರಂಗಾಯಣ ನಿರ್ದೇಶಕ ಸತೀಶ್
ಐಜಿ ವರ್ತಿಕಾ ಕಟಿಯಾರ್ ವರ್ಗ: ಬಳ್ಳಾರಿ ಘರ್ಷಣೆಗೆ ಮತ್ತೊಂದು ತಲೆದಂಡ
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ
ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ
ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿ ಖಜಾನೆಯಿಂದ ಹಣ ಎತ್ತಿಕೊಂಡು ಹೋಗುತ್ತಿದ್ದರು. ಅದು ತಪ್ಪಲಿದೆ ಎಂದರು.
ರಾಜ್ಯಾದ್ಯಂತ 19,000 ಪ್ರಕರಣಗಳು ಬಾಕಿ: ತ್ವರಿತ ಇತ್ಯರ್ಥಕ್ಕೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಬೆಂಗಳೂರು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ರಾಮನಗರ ಜಿಲ್ಲೆ ಉಪ ವಿಭಾಗಾಧಿಕಾರಿಗಳ (ಎಸಿ) ವ್ಯಾಪ್ತಿಯಲ್ಲಿ ನ್ಯಾಯಾಲಯ ಪ್ರಕರಣಗಳು ಅತಿಹೆಚ್ಚು ಸಂಖ್ಯೆಯಲ್ಲಿ ಬಾಕಿ ಇದ್ದು, ಶೀಘ್ರ ವಿಲೇವಾರಿ ಮಾಡುವಂತೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ಬುಧವಾರ ವಿಕಾಸಸೌಧದಲ್ಲಿ ನಡೆದ ಉಪ ವಿಭಾಗಾಧಿಕಾರಿಗಳ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರು ಹೇಳಿದ್ದೇನು?
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸುವಾಗ ವಿವಸ್ತ್ರಗೊಳಿಸಿ ಥಳಿಸಿದ್ದಾರೆ ಎಂಬ ಪ್ರಕರಣ ಟ್ವಿಸ್ಟ್ ಲಭಿಸಿದ್ದು, ತಾನೇ ಬಟ್ಟೆ ಬಿಚ್ಚಿಕೊಂಡು ನಮ್ಮ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ




