ಅಮರನಾಥ ಯಾತ್ರೆಗೆ ಎಪ್ರಿಲ್ 15ರಿಂದ ನೋಂದಣಿ
ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಯಾತ್ರೆಗೆ ಮುಂಗಡ ನೋಂದಣಿ ಎಪ್ರಿಲ್ 15ರಿಂದ ಆನ್‌ಲೈನ್ ಮತ್ತು ಆಫ್‌ಲೈನ್ ವಿಧಾನಗಳಲ್ಲಿ ಪ್ರಾರಂಭವಾಗಲಿದೆ. ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಮತ್ತು ಶ್ರೀ ಅಮರನಾಥ ಶ್ರೈನ್ ಬೋರ್ಡ್ ಅಧ್ಯಕ್ಷ ಮನೋಜ್ ಸಿನ್ಹಾ ಈ ಮಾಹಿತಿನ್ನು ದೃಢಪಡಿಸಿದ್ದಾರೆ. 57 ದಿನ ನಡೆಯುವ ಯಾತ್ರೆಯು ಆಗಸ್ಟ್ 28ರ ರಕ್ಷಾಬಂಧನದಂದು ಮುಕ್ತಾಯಗೊಳ್ಳಲಿದೆ. ಜೂನ್ 29ರ ಜೇಷ್ಠ ಪೂರ್ಣಿಮೆಯಂದು ಶಿವನಿಗೆ ಪ್ರಥಮ ಪೂಜೆ ನಡೆಯಲಿದೆ.
42ರ ವಿವಾಹಿತೆಯ ಸಹವಾಸ: ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ಜಿಮ್ ಟ್ರೈನರ್ ಯುವಕ
ವಿವಾಹಿತೆಯ ಸಹವಾಸ ಮಾಡಿ ಆಕೆಯಿಂದ ಬ್ಲ್ಯಾಕ್‌ಮೇಲ್, ಕಿರುಕುಳಕ್ಕೆ ಒಳಗಾದ ಯುವಕ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್
ಸಂಪುಟ ಪುನಾರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ
ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು. ಈಗ ನನ್ನ
ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
ಮುಂಬೈನಲ್ಲಿ ಭಾನುವಾರ ನಿಧನರಾದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಸೋಮವಾರ (ಇಂದು) ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಮೂರರವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 92
ಬೂದಿಯಿಂದ ಎದ್ದೇಳುತ್ತಾ ಜೆಡಿಎಸ್ ?
ಹೆಗಡೆ ಮತ್ತು ದೇವೇಗೌಡರಂದು ತಮ್ಮ ರಾಜಕೀಯ ಬಿಗಿಪಟ್ಟು ಮತ್ತು ಪ್ರತಿಷ್ಠೆ ಸಡಿಲಿಸಿದ್ದಿದ್ದರೆ ಇಂದು ಜನತಾದಳವು. ಡಿಎಂಕೆ ಅಥವಾ ತೆಲುಗುದೇಶಂ ಪಕ್ಷಗಳ ಹಾಗೆ ಕರ್ನಾಟಕದಲ್ಲಿ ಸಿಂಹಗರ್ಜನೆ ಮಾಡುವ ಹಂತದಲ್ಲಿರುತ್ತಿತ್ತು. ಜನತಾದಳ ವಿಭಜನೆ ಆಗಬಾರದಿತ್ತೇನೋ.. !! ಎಚ್ ಡಿ ದೇವೇಗೌಡರು ಈ ದೇಶದ ಪ್ರಧಾನಿ
ಸತ್ತವರ ಹೆಸರಲ್ಲಿ ಸರ್ಕಾರದ 4.27 ಕೋಟಿ ರೂಪಾಯಿ ಅಕ್ರಮ: ಮಧುಗಿರಿ ತಾ.ಪಂ ಕ್ಲರ್ಕ್, ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ನಿವೃತ್ತರಾಗಿರುವ ಮತ್ತು ಮೃತಪಟ್ಟಿರುವ ಸರ್ಕಾರಿ ನೌಕರರ ಹೆಸರಿನಲ್ಲಿ ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ್ದಾರೆ. 4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇದೆ. ಸೌಮ್ಯಾ , ಕಾಂಗ್ರೆಸ್ ಜಿಲ್ಲಾ
ಟ್ರಾಫಿಕ್ ಉಲ್ಲಂಘನೆ: ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪದಡಿ
ಸಿಬಿಐ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್: ಬೆಳಗಾವಿ ವ್ಯಕ್ತಿಗೆ 15 ಕೋಟಿ 45 ಲಕ್ಷ ರೂ. ವಂಚನೆ
ಬೆಳಗಾವಿಯಲ್ಲಿ ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಬಹುದೊಡ್ಡ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ವಂಚಕರು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 15 ಕೋಟಿ 45 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಉದ್ಯಮಿಗೆ ಫೋನ್ ಮಾಡಿದ ವಂಚಕರು, ತಾವು ಸಿಬಿಐ
ಸಂವಿಧಾನದ ಆಶಯ ಜಾರಿಗೆ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಸ್ವಯಂ ಪ್ರಶ್ನಿಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಲವ್, ಸೆಕ್ಸ್, ಮದುವೆ ಹೆಸರಲ್ಲಿ ವಂಚನೆ: ಇಂಜಿನಿಯರ್ ವಿರುದ್ಧ ಶಿಕ್ಷಕಿ ದೂರು
ಲವ್, ಸೆಕ್ಸ್, ಮದುವೆ ಎಂದು ನಂಬಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಇಂಜಿನಿಯರ್ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಎಂಬವರು ಮದುವೆಯಾಗುತ್ತೇನೆ ಎಂದು ನಂಬಿಸಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿರುವುದಾಗಿ ಅತಿಥಿ ಶಿಕ್ಷಕಿ




