ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ
ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ ನಿವಾಸಿ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ ಹೋಗುತ್ತಿದ್ದಾಗ ಜಂಪೇನಹಳ್ಳಿ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು ರಕ್ಷಿಸಲೆಂದು ಚಾಲಕ ಮಹೇಂದ್ರ ಕುಮಾರ್ ಸಡನ್ ಬ್ರೇಕ್ ಹಾಕಿದ್ದಾರೆ. ಆಟೊ ಪಲ್ಟಿಯಾಗಿದೆ. ಪಲ್ಟಿಯಾದ ಆಟೊಗೆ ತುಮಕೂರು ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಕೋಲಾರದಲ್ಲಿ ಉಪನ್ಯಾಸಕ
ಜಿಎಸ್ಟಿ ಅಧಿಕಾರಿಗಳ ಹೆಸರಲ್ಲಿ ವ್ಯಾಪಾರಿಯ ಬೆದರಿಸಿ ಲಂಚ ಪಡೆದ ಇಬ್ಬರ ಬಂಧನ
ಜಿಎಸ್‌ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಐದು ಲಕ್ಷ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್‌ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ
ಮೊದಲ ಬಾರಿ ಆಯ್ಕೆಯಾಗಿರುವ ಶಾಸಕರಿಗೆ ಸಚಿವ ಸ್ಥಾನವಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕಾರ್ಕಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪಕ್ಷದ ಹೈಕಮಾಂಡ್‌ನ ನಿರ್ಣಯವಾಗಿದ್ದು, ಅದನ್ನು ಪಾಲಿಸಲಾಗುವುದು ಎಂದಿದ್ದಾರೆ. ಹೊಸದಾಗಿ ಆಯ್ಕೆಯಾದ 38 ಕಾಂಗ್ರೆಸ್ ಶಾಸಕರಲ್ಲಿ 31 ಮಂದಿ
ತಾಯಿ ಕಣ್ಣೆದುರೇ ರೌಡಿಶೀಟರ್‌ನ ಕೊಚ್ಚಿ ಕೊಲೆ
ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ರೌಡಿಶೀಟರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಪವನ್ ಕುಮಾರ್ (25) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಅಧಿಕಾರದಲ್ಲಿದ್ದಾಗ ಕೆಲಸ ಮಾಡದ ಬಿಜೆಪಿಯವರಿಂದ ಈಗ ಪ್ರತಿಭಟನೆ: ಸಿಎಂ
ತನ್ನ ಅಧಿಕಾರಾವಧಿಯಲ್ಲಿ ಕೆಲಸ ಮಾಡದ ಬಿಜೆಪಿ ಈಗ ಪ್ರತಿಭಟಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸ ಮಾಡದೆ ಈಗ ವಿರೋಧಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತವಾಗಿದೆ ಎಂದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ
ಮೀಸಲು ಒಳಮೀಸಲು ನಿಗದಿ ನೀತಿ ಅಸ್ಪಷ್ಟ: ಸರ್ಕಾರಕ್ಕೆ ಅಡಕತ್ತರಿಯಾದ ಹುದ್ದೆಗಳ ಭರ್ತಿ
ಮೀಸಲು ಹಾಗೂ ಒಳಮೀಸಲು ನಿಗದಿ ವಿಚಾರದಲ್ಲಿ ರಾಜ್ಯ ಸರ್ಕಾರದ ನೀತಿಯೇ ಅಸ್ಪಷ್ಟ. ಎಲ್ಲವೂ ಅಡ್ಡಗೋಡೆಯ ಮೇಲೆ ದೀಪವಿಟ್ಟಂತಿದೆ. ಎಲ್ಲಿವರೆಗೆ ರಾಜ್ಯದಲ್ಲಿ ಮೀಸಲು ಮತ್ತು ಒಳ ಮೀಸಲು ನಿಗದಿ ಸರ್ಕಾರದ ಮಟ್ಟದಲ್ಲಿ ಖಚಿತ ಶಾಸನ ಸ್ವರೂಪ ತಾಳುವುದಿಲ್ಲವೋ, ಅಲ್ಲಿಯವರೆಗೂ ಹುದ್ದೆಗಳ ಭರ್ತಿಯಲ್ಲಿ ತಲೆದೋರಿರುವ
ಹಗರಣ ರಹಿತ ಹುದ್ದೆ ಭರ್ತಿಗೆ ಸರಕಾರ ಕ್ರಮ: ಡಿಕೆ ಶಿವಕುಮಾರ್
“ಕಾಂಗ್ರೆಸ್ ಸರ್ಕಾರ ಹಗರಣ ರಹಿತವಾಗಿ ಖಾಲಿ ಹುದ್ದೆಗಳನ್ನು ತುಂಬಬೇಕು ಎಂದು ಕೆಲಸ ಮಾಡುತ್ತಿದೆ. ಯುವಕರು ಧೈರ್ಯವಾಗಿರಿ. ನಾವು ನಿಮ್ಮ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ಶೀಘ್ರದಲ್ಲೇ ನಿಮಗೆ ಸಂದೇಶವನ್ನು ನೀಡುತ್ತೇವೆ. ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ,
ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ: ಸುಪ್ರೀಂ
ಎನ್‌ಸಿಇಆರ್‌ಟಿಯ ಎಂಟನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಅಧ್ಯಾಯದ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ನ್ಯಾಯಾಂಗಕ್ಕೆ ಕಳಂಕ ತರಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸ್ವಯಂಪ್ರೇರಿತ ಕ್ರಮ ಕೈಗೊಳ್ಳಬಹುದು
ಗಾಂಧಿ, ನೆಹರುಗೆ ಅವಹೇಳನ: ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿಯಾಗಿ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿಯ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್,




