ಜಾಗತಿಕ ಸುಂಕ ಅಸಂವಿಧಾನಿಕವೆಂದ ಅಮೆರಿಕ ಸುಪ್ರೀಂಕೋರ್ಟ್‌ಗೆ ಟ್ರಂಪ್ ಸವಾಲು, ಹೊಸ ಸುಂಕ ಘೋಷಣೆ
ಜಾಗತಿಕ ಸುಂಕಗಳನ್ನು ಅಸಂವಿಧಾನಿಕ ಎಂದು ಅಮೆರಿಕದ ಸುಪ್ರೀಂಕೋರ್ಟ್ ಘೋಷಿಸಿದ ಬಳಿಕವೂ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಸುಂಕ ಘೋಷಿಸುವ ಮೂಲಕ ಸವಾಲು ಹಾಕಿದ್ದಾರೆ. ಜಾಗತಿಕವಾಗಿ ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಸುಂಕ ಹೇರಿಕೆ ಮಾಡಿದ್ದಾರೆ. ಸೆಕ್ಷನ್ 122 ರಡಿ 10% ಜಾಗತಿಕ ಸುಂಕವನ್ನು ವಿಧಿಸುವ ಆದೇಶವನ್ನು ಟ್ರಂಪ್ ಹೊರಡಿಸಿ, ಸೋಶಿಯಲ್ ಮೀಡಿಯಾ ಟ್ರೂಥ್‌ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈಗಿರುವ ಸುಂಕದ ಜೊತೆಗೆ 10% ಹೆಚ್ಚುವರಿ ವಿಧಿಸಲಾಗುತ್ತಿದೆ ಎಂದು
ಬಿಕ್ಲು ಶಿವ ಕೊಲೆ: ಬೈರತಿ ಬಸವರಾಜ್‌ಗೆ ಫೆ.26ರವರೆಗೆ ಜ್ಯುಡಿಷಿಯಲ್ ಕಸ್ಟಡಿ
ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿತ್ತು. ವೈದ್ಯಕೀಯ
ಹೆಚ್ಚು ಲಾಭದ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿ ವ್ಯಕ್ತಿ ಪರಾರಿ
ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ಆಮಿಷವೊಡ್ಡಿ ಬಡವರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿ ಪರಾರಿಯಾದ್ದು, ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಚೀಟಿ ವ್ಯವಹಾರ ಹೆಸರಿನಲ್ಲಿ 800ಕ್ಕೂ
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಸೆರೆ ಹಿಡಿದ ಎನ್‌ಐಎ
2023ರ ಗ್ರನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಬಂಧಿಸಿದ್ದಾರೆ. ಅರ್ಷದ್ ಖಾನ್ ಬಂಧಿತ ಉಗ್ರ, ಈ ಹಿಂದೆ ಆತ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈಗ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ರೈತರ ಕೃಷಿಗಾಗಿ ಪ್ರತಿದಿನ ಏಳು ಗಂಟೆ ವಿದ್ಯುತ್ ಪೂರೈಸಿ: ಸಂತೋಷ್ ಲಾಡ್
ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ೭ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್
ಜಮಖಂಡಿಯಲ್ಲಿ ಅಪಘಾತಕ್ಕೆ ಮಗು ಸೇರಿ ನಾಲ್ವರು ಬಲಿ
ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ತುಂಡಾಗಿ ಉರುಳಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ಮನೀಷ್
ಸಿಎಂ ಬದಲಾವಣೆ ಚರ್ಚೆ: ಹೇಳಿಕೆ ನೀಡಲ್ಲವೆಂದ ಎಂಎಲ್‌ಸಿ ಯತೀಂದ್ರ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ , ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಗ್ಗೆ
ಭಾರತೀಯ ಕೋರ್ಟ್‌ಗಳಿಗೂ ಕೃತಕ ಬುದ್ಧಿಮತ್ತೆ ಲಗ್ಗೆ: ಸುಪ್ರೀಂಕೋರ್ಟ್ ಕಳವಳ
ಕೃತಕ ಬುದ್ದಿಮತ್ತೆ ನೆರವಿನಿಂದ ಸಿದ್ದಪಡಿಸಿದ ರಿಟ್ ಅರ್ಜಿಗಳಿಗೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ ಇದರಿಂದ ಇಡೀ ನ್ಯಾಯಿಕ ವ್ಯವಸ್ಥೆಯ ಮೇಲೆ ಅಡ್ಡ ಪರಿಣಾಮ ಬೀರಲಿದೆ ಎಂದೂ ದೇಶದ ಸರ್ವೋನ್ನತ ನ್ಯಾಯಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ. ಸಾಫ್ಟ್‌ವೇರ್ ಕಂಪನಿಯಲ್ಲೀಗ ಒಂದು ಸಾವಿರ ಮಂದಿ
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಇಂದಿನಿಂದ
9 ಡ್ರೀಮ್ಸ್ ಸಂಸ್ಥೆಯ ವಿನೂತನ ಪರಿಕಲ್ಪನೆಯ ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೇ ಶುರುವಾಗಿದೆ. ಫೆಬ್ರವರಿ 21 ಮತ್ತು 22ರಂದು ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಅಂಗಣದಲ್ಲಿ ನಡೆಯಲಿರುವ ಎರಡು ದಿನಗಳ ಟೂರ್ನಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ. ಜನಪ್ರತಿನಿಧಿಗಳು, ಐಎಎಸ್-ಐಪಿಎಸ್ ಅಧಿಕಾರಿಗಳು, ಸಚಿವಾಲಯದ
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಟ್ಟ ಆರೋಪಿ ಅರೆಸ್ಟ್
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಉರುಳು ಹಾಕಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ. ಆರೋಪಿಯು ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಫೆಬ್ರವರಿ 15ರಂದು ಗಂಡು




