ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ: ಆರ್ ಅಶೋಕ
ಸಿಎಂ @siddaramaiah ನವರೇ, ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದ್ದಾರೆ. ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆದು ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಆಗುತ್ತಿರುವ ನಷ್ಟ ತಪ್ಪಿಸದಿದ್ದರೆ ಮತ್ತೊಮ್ಮೆ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗುವುದು ಗ್ಯಾರೆಂಟಿ. ಉತ್ತಮ ಮಳೆಯಿಂದಾಗಿ ಮಂಡ್ಯ, ಮೈಸೂರು ಭಾಗದಲ್ಲಿ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ವೇಣುಗೋಪಾಲ್ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ
ಕೆಸಿ ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ನಮಗೆ ಅನೇಕ ವಿಚಾರಗಳ ಬಗ್ಗೆ ಸಲಹೆ ನೀಡಿದ್ದಾರೆ, ಆದರೆ ಅವರು ಎಂದಿಗೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ
ಕೋಗಿಲು ಅಕ್ರಮ ಶೆಡ್‌ಗಳ ಧ್ವಂಸ: ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ, ಇದೊಂದು ಪ್ರಕರಣಕ್ಕೆ ಮಾತ್ರ ಅನ್ವಯ: ಸಿಎಂ
ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಖಾಲಿ ಮಾಡಿರಲಿಲ್ಲ. ಅವರಿಗೆಲ್ಲ ಬೈಯ್ಯಪ್ಪನಹಳ್ಳಿಯಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ
ಹೊಸವರ್ಷದಂದು ನಂದಿ ಗಿರಿಧಾಮ ಸಾರ್ವಜನಿಕರಿಗೆ ಬಂದ್
ಬೆಂಗಳೂರು:ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶವನ್ನು ಡಿ.31ರ ಮಧ್ಯಾಹ್ನ 2ರಿಂದ ಜ.1ರ ಬೆಳಿಗ್ಗೆ 10 ಗಂಟೆಯವರೆಗೆ ಬಂದ್ ಮಾಡಲಾಗಿದೆ. ಅತಿಥಿಗೃಹ ಬುಕ್ ಮಾಡಿದವರನ್ನು ಹೊರತುಪಡಿಸಿ ಉಳಿದ ಪ್ರವಾಸಿಗರಿಗೆ ನಿಷೇಧ
ಹಾಸನದ ಮೇಲೆ ಏಕೆ ಕಣ್ಣು: ಕಾಂಗ್ರೆಸ್ ವಿರುದ್ಧ ಎಚ್.ಡಿ. ದೇವೇಗೌಡ ಕಿಡಿ
ಹಾಸನ: ಕಾಂಗ್ರೆಸ್‌ನವರು ರಾಜ್ಯದ 30 ಜಿಲ್ಲೆ ಬಿಟ್ಟು ಹಾಸನದಲ್ಲೇ 2 ವರ್ಷಗಳಲ್ಲಿ 2 ಬಾರಿ ಸಿಎಂ ಸಮಾವೇಶ ನಡೆಸಿರುವುದೇಕೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನಿಸಿದರು. ಹುಟ್ಟೂರು ಹರದನಹಳ್ಳಿಯ ಮನೆ ದೇವರಿಗೆ ಸೋಮವಾರ ಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,
ಕೋಗಿಲು ಅಕ್ರಮ ನಿರ್ಮಾಣ ತೆರವು ಹಿಂದೆ ಕೇರಳ ಸಿಎಂ ಸಲ್ಲದ ರಾಜಕೀಯ: ಡಿಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: “ಮುಂಬರುವ ಕೇರಳ ವಿಧಾನಸಭಾ ಚುನಾವನಣೆಯಲ್ಲಿ ಸೋಲುವ ಭೀತಿಯಿಂದ ಕೇರಳ ಸಿಎಂ ಕೋಗಿಲು ಬಡಾವಣೆಯಲ್ಲಿನ ಅಕ್ರಮ ಒತ್ತುವರಿ ತೆರವು ವಿಚಾರದಲ್ಲಿ ಕುತಂತ್ರ ರಾಜಕೀಯ ಮಾಡುತ್ತಿದ್ದಾರೆ ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಘನ ತ್ಯಾಜ್ಯ
ಕೆಜಿ ಬೆಳ್ಳಿ 2.54 ಲಕ್ಷ ರೂ.ಗೆ ಜಿಗಿತ: ಸಾರ್ವಕಾಲಿಕ ದಾಖಲೆ ಏರಿಕೆ
ನವದೆಹಲಿ: ದಿನದಿಂದ ದಿನಕ್ಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಸೋಮವಾರ ಭಾರೀ ಜಿಗಿತ ಕಂಡು ಮತ್ತೊಮ್ಮೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ಬೆಳಿಗ್ಗೆ ವಹಿವಾಟು ಆರಂಭವಾದ ಬೆನ್ನಲ್ಲೇ ಶೇ.6ರಷ್ಟು ಜಿಗಿತ ಕಂಡ ಬೆಳ್ಳಿ ಕೆಜಿಗೆ 2,54,174
ಹೊಸ ವರ್ಷಾಚರಣೆ ವೇಳೆ ಅಹಿತಕರ ಘಟನೆ ನಡೆಯದಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ
ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ
ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್
1 ಕೋಟಿ ಸಾಲ ಪಡೆದು ವಂಚನೆ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ದ ಪ್ರಕರಣ ದಾಖಲು!
ಬೀದರ್: 2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ 99 ಲಕ್ಷ ರೂ. ಹಿಂತಿರುಗಿಸದೇ ವಂಚಿಸಿದ್ದಾರೆ ಎಂದು ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಾಸಕರ ದೂರದ ಸಂಬಂಧಿ ಎಂದು ಹೇಳಲಾಗುವ ದೂರುದಾರರು, ಶರಣು ಸಲಗರ್ ಚುನಾವಣಾ ಸಂಬಂಧಿತ




