Menu

ಬಿಕ್ಲು ಶಿವ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಪೊಲೀಸ್‌ ಕಸ್ಟಡಿ

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಏಳು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ ಬಸವರಾಜ್‌ಗೆ ಹೃದಯ ಸಮಸ್ಯೆ ಇದೆ ಎಂದು ಹಿಂದೆ ಹೇಳಲಾ ಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಡೆಸಿದ ಪರೀಕ್ಷೆಯಲ್ಲಿ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ವರದಿ

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು.

ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು

ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು

ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ

ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ

ನೆಲಮಂಗಲದಲ್ಲಿ ಕಾರು ಬಸ್‌ ಡಿಕ್ಕಿ: ಐವರ ಸಾವು

ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್​​ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು

ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ: ಡಿಕೆ ಶಿವಕುಮಾರ್‌

ಕೆಲವು ಯುವಕರು ಪ್ರೀತಿಯಿಂದ ಗೋಬ್ಯಾಕ್ ಎಂದು ಹೇಳುತ್ತಿದ್ದೀರಿ. ನಿಮ್ಮ ಗೋಬ್ಯಾಕ್ ಅನ್ನು ಬಹಳ ಪ್ರೀತಿಯಿಂದ ಸ್ವೀಕರಿಸಿದ್ದೇನೆ. ನೂರು ಜನ ಗೋಬ್ಯಾಕ್ ಎಂದಾಕ್ಷಣ ಜಗ್ಗುವ ಮಗ ನಾನಲ್ಲ, ಕಮ್ ಬ್ಯಾಕ್ ಎನ್ನುವವರೇ ಹೆಚ್ಚಿದ್ದಾರೆ. ಆದರೆ ವೇದಿಕೆ ಮೇಲಿರುವ ರಾಘವೇಂದ್ರ ಅವರು, ರೇಣುಕಾಚಾರ್ಯ ಅವರು,

ತಾರಿಖ್ ಸರ್ಕಾರ ಬಾಂಗ್ಲಾ ದೇಶದ ಹಿಂದುಗಳನ್ನು ಕಾಪಾಡುವುದೇ?

ಬಾಂಗ್ಲಾದೇಶ್ ನ್ಯಾಷನಲ್ ಪಾರ್ಟಿಯು ಇಲ್ಲಿ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಇಪ್ಪತ್ತು ವರ್ಷಗಳ ಅಜ್ಞಾತವಾಸದ ಬಳಿಕ ತಾರಿಖ್ ರೆಹಮಾನ್ ಜನಾದೇಶ ಪಡೆದು ದೇಶದ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಮುಂದೆ ಸಾಗಿದ್ದಾರೆ. ಭಾರತ ದೊಂದಿಗಿನ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಸಂಬಂಧಗಳನ್ನು ನೂತನ ಸರ್ಕಾರ

ಕಾಂಗ್ರೆಸ್‌ನಿಂದ ಆರನೇ, ಏಳನೇ ಗ್ಯಾರಂಟಿ ಭೂಮಿ,ನೀರು: ಡಿಕೆ ಶಿವಕುಮಾರ್‌ 

ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ

ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ

ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್‌ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್‌ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು