Menu

ಹಾಸನ ಚನ್ನಕೇಶವನ ಹುಂಡಿ ಎಣಿಕೆ: ಹಣ ಕದ್ದ ವೀಡಿಯೊಗ್ರಾಫರ್‌

ಹಾಸನದಲ್ಲಿ ಚನ್ನಕೇಶವ ದೇವಾಲಯದ ಹುಂಡಿ‌ ಎಣಿಕೆ ವೇಳೆ ಹಣ ಕಳವು ಮಾಡಿರುವ ಆರೋಪದಡಿ ಪೊಲೀಸರು ವಿಡಿಯೋಗ್ರಾಫರ್ ನೀಲಕಂಠ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹುಂಡಿಕ ಎಣಿಕೆ ವೇಳೆ ವಿಡಿಯೋಗ್ರಾಫರ್ ಹಣ ಕದ್ದ ಆರೋಪವಿದ್ದು, ಇದರ ಹಿಂದೆ ಅಧಿಕಾರಿಗಳ ಪಾತ್ರ ಇದೆಯಾ ಎಂಬ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್‌ ಶ್ರೀಧರ್ ಕಂಕನವಾಡಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಳ್ಳತನ ಆಗಿರುವುದು ಪತ್ತೆಯಾಗಿದೆ. ಪ್ರವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಆರೋಪಿ

ಅಮೆರಿಕದಿಂದ ಮತ್ತೊಮ್ಮೆ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದೆ. ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ, ಮತ್ತೊಮ್ಮೆ ವಾಯುದಾಳಿ ನಡೆಸಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಹಾಗೂ ಇರಾನ್‌ನ ಚಬಹಾರ್ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ

ಯಲ್ಲಾಪುರದಲ್ಲಿ ಲಾರಿ-ಕ್ರೂಸರ್‌ ಡಿಕ್ಕಿ: ಆರು ಮಂದಿ ಸಾವು

ಲಾರಿ ಮತ್ತು ಕ್ರೂಸರ್‌ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ

ಬರಗಾಲ, ಪ್ರವಾಹದಿಂದ ಸಂತ್ರಸ್ತರಾದ ರೈತರಿಗೆ ಸರ್ಕಾರ 50,000 ರೂ. ವರೆಗೆ ಸಾಲ ಮನ್ನಾ ಮಾಡಲಿ

ಬರಗಾಲ ಮತ್ತು ಪ್ರವಾಹದಿಂದ ಸಂತ್ರಸ್ತರಾಗಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಬೇಕೆಂದು ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್‌ ಅಶೋಕ, ತುರ್ತು ಪರಿಹಾರದ ಜೊತೆಗೆ ತಲಾ 50,000 ರೂ.ವರೆಗೆ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ

ಡಿಕೆ ಶಿವಕುಮಾರ್ ಕರ್ನಾಟಕದ ಇತಿಹಾಸದಲ್ಲೇ ಪುಕ್ಕಲು ಮತ್ತು ಅಸಮರ್ಥ ಸಿಎಂ: ಆರ್‌ ಅಶೋಕ

ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಪೂರ್ಣ ಪ್ರಮಾಣದ ಸರ್ಕಾರ ನಡೆಸಲಾಗದ ನೀವು ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದ್ದೀರಿ. ಡಿಕೆ ಶಿವಕುಮಾರ್ ಅವರೇ, ನಿಮ್ಮ ರಾಜಕೀಯ ಗೊಂದಲ ಹಾಗೂ ಪುಕ್ಕಲುತನಕ್ಕೆ ರಾಜ್ಯದ ಅನ್ನದಾತರನ್ನ ಬಲಿಕೊಡುವುದನ್ನು ನಿಲ್ಲಿಸಿ. ನಿಮ್ಮಂತಹ ಪುಕ್ಕಲು ಮುಖ್ಯಮಂತ್ರಿ ಇದ್ದರೆಷ್ಟು, ಬಿಟ್ಟರೆಷ್ಟು

ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಮಾನ್ಯತಾ ಟೆಕ್ ಪಾರ್ಕ್ ನಲ್ಲಿ  ನಡೆದ ಟಾರ್ಗೆಟ್ ಇಂಡಿಯಾ

SIR ಮತ್ತು ರಾಜಕೀಯ ಕೆಸರೆರಚಾಟ

ಮತಪಟ್ಟಿ ಪರಿಷ್ಕರಣೆ ಸಮಯದಲ್ಲಿ ಅಧಿಕಾರಿಗಳು ಮತದಾರರಿಗೆ ತಿಳಿಸಬೇಕಿರುವ ಸಂಗತಿಗಳೇನು ? ಹೊಸ ಮತದಾರರ ಸೇರ್ಪಡೆ ನಿಯಮಾವಳಿಗಳೇನು? ಮನೆಮನೆಗೆ ಅಧಿಕಾರಿಗಳು ಬಂದಾಗ ಮೂಲಭೂತವಾಗಿ ಮತದಾರರು ಹೊಂದಿರಬೇಕಿರುವ ಕನಿಷ್ಟ ದಾಖಲೆಗಳೇನು? ಈ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ಒದಗಿಸುವ ರೀತಿಯಲ್ಲಿ ಅಧಿಕಾರಿಗಳು ಮುತುವರ್ಜಿಯಿಂದ ಕಾರ್ಯ ನಿರ್ವಹಿಸಬೇಕಿದೆ.

ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ಹಲ್ಲೆಗೆ ವಿದ್ಯಾರ್ಥಿ ಬಲಿ: ಪೋಷಕರ ಆರೋಪ

ಬೆಂಗಳೂರು ನಗರ ಹೊರವಲಯದ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್

ಪುಣೆಯಲ್ಲಿ ಕಸದ ದಿಬ್ಬ ಕುಸಿದು 16 ಮಂದಿ ನಾಪತ್ತೆ

ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮೂರು ಅಂತಸ್ತಿನ ಕಟ್ಟಡದ ಮೇಲೆ ಕಸದ ದಿಬ್ಬ ಕುಸಿದು ಕನಿಷ್ಠ 16 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಿಂಪ್ರಿ ಚಿಂಚ್‌ವಾಡ್‌ನ ಮೋಶಿಯಲ್ಲಿ ಈ ದುರಂತ ನಡೆದಿದ್ದು, ಅಲ್ಲಿ

ಬೆಂಗಳೂರಿನ ಮಿಶ್ರ ತ್ಯಾಜ್ಯವನ್ನು ಡಂಪಿಂಗ್‌ ಯಾರ್ಡ್‌ಗಳಿಗೆ ಸಾಗಿಸುವಂತಿಲ್ಲ: ಸುಪ್ರೀಂ

ಬೆಂಗಳೂರು ನಗರದ ಹಸಿ- ಒಣ ಮಿಶ್ರ ಕಸವನ್ನು ಅಕ್ಟೋಬರ್‌ 27 ರಿಂದ ಡಂಪಿಂಗ್‌ ಯಾರ್ಡ್‌ಗಳಿಗೆ ಸಾಗಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿದೆ. ನಗರದಲ್ಲಿ ಉತ್ಪತ್ತಿಯಾಗುವ ಹಸಿ, ಒಣ ಹಾಗೂ ಮಿಶ್ರ ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಿ