Menu

“ನೀವು ಕರಾವಳಿಯವರು ಬೆಂಕಿ ಹಚ್ಚುವವರು” ಸದನದಲ್ಲಿ ಕಿಚ್ಚು ಹೊತ್ತಿಸಿದ ಸಚಿವ ಬೈರತಿ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು “ನೀವು ಕರಾವಳಿಯವರು ಬೆಂಕಿ ಹಚ್ಚೋರು” ಎಂದು ನೀಡಿದ ಹೇಳಿಕೆ ಬೆಳಗಾವಿ ಸುವರ್ಣಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕೋಲಾಹಲ ಸೃಷ್ಟಿಸಿತು. ಈ ಹೇಳಿಕೆಗೆ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಭೈರತಿ ಸುರೇಶ್ ಅವರ ‘ನೀವು ಕರಾವಳಿಯವರು ಬೆಂಕಿ ಹಚ್ಚುವವರು’ ಎಂಬ ಹೇಳಿಕೆ ಹೊಸ ವಿವಾದ ಸೃಷ್ಟಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ

ವಿಪಕ್ಷಗಳ ಆಕ್ರೋಶದ ನಡುವೆ ಜಿ ರಾಮ್ ಜಿ ಮಸೂದೆ ಲೋಕಸಭೆಯಲ್ಲಿ ಅನುಮೋದನೆ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ದುಗೊಳಿಸಿ ಅದರ ಬದಲಿಯಾಗಿ ಕೇಂದ್ರ ಸರ್ಕಾರ ರೂಪಿಸಿದ್ದ ಜಿ ರಾಮ್ ಜಿ ಮಸೂದೆ ಭಾರೀ ಗದ್ಧಲಗಳ ನಡುವೆ ಲೋಕಸಭೆಯಲ್ಲಿ ಅನುಮೋದನೆ ಪಡೆದಿದೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳು ಮಸೂದೆಯನ್ನು ಪುನರ್ ಪರಿಶೀಲನಾ ಸಮಿತಿ

ಡೆತ್‌ನೋಟ್‌ನಲ್ಲಿ ಸಿಕ್ತು ಧಾರವಾಡದ ವಿದ್ಯಾರ್ಥಿನಿ ಪಲ್ಲವಿ ಆತ್ಮಹತ್ಯೆಗೆ ಕಾರಣ

ಇತ್ತೀಚೆಗೆ ಧಾರವಾಡದ ಶಿವಗಿರಿ ಬಳಿ ರೈಲು ಹಳಿಗೆ ಬಿದ್ದು ಪಲ್ಲವಿ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಡಿದ್ದ ಊಹಾಪೋಹಗಳಿಗೆ ಈಗ ತೆರೆ ಬಿದ್ದಿದೆ. ಆಕೆ ಬರೆದಿಟ್ಟ ಡೆತ್‌ನೋಟ್‌ನಲ್ಲಿ ಸುಸೈಡ್‌ ಮಾಡಿಕೊಳ್ಳಲು ಕಾರಣ ಏನು ಎಂಬುದು ಪತ್ತೆಯಾಗಿದೆ. ಸರ್ಕಾರಿ ಹುದ್ದೆಗಳ

ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ವರ್ತಕರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿಸಿಎಂ

“ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಪ್ರಶ್ನೋತ್ತರ

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಯೋಜನೆ?

ರೈತ ಯುವಕರನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ರೂ. ಠೇವಣಿ ಇಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಶಾಸಕ ಪುಟ್ಟಣ್ಣ ಒತ್ತಾಯಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. ಹಳ್ಳಿಗಳಲ್ಲಿ ರೈತರು, ಕೃಷಿ ಕಾರ್ಮಿಕರು,

“ಕಲೆಕ್ಷನ್ ಕಿಂಗ್ ವಿಜಯೇಂದ್ರ” ತಂದೆ ಯಡಿಯೂರಪ್ಪ ಹೆಸರು ಕೆಡಿಸಿದವರು: ಡಿಕೆ ಶಿವಕುಮಾರ್‌

“ಕಲೆಕ್ಷನ್ ಕಿಂಗ್ ” ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಮೊದಲು ಅಸೆಂಬ್ಲಿ ಬಂದು ಮಾತನಾಡಲು ಹೇಳಿ. ತಪ್ಪಿಸಿಕೊಂಡು ಹೋಗಿ ಎಲ್ಲೋ ಮಾತನಾಡುವುದಲ್ಲ,  ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನು ಮರೆಯ ಬಾರದು ಎಂದು ಡಿಸಿಎಂ ಡಿಕೆ ಶಿವಕುಮಾರ್

ನನ್ನ ಹಕ್ಕು ಬಿಟ್ಟು ಸದನದಲ್ಲಿ ಚರ್ಚೆಗೆ ಸಿದ್ಧ: ವಿಪಕ್ಷಗಳಿಗೆ ಕೃಷ್ಣ ಬೈರೇಗೌಡ ಸವಾಲು

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ

ರೈಲು ಪ್ರಯಾಣಿಕರ ಲಗೇಜ್ ಗೂ ಶುಲ್ಕ ಜಾರಿ: ಕೇಂದ್ರ ಸಚಿವ ಅಶ್ವಿನಿ ವೈಭವ್

ರೈಲು ಪ್ರಯಾಣಿಕರು ಇನ್ನು ಮುಂದೆ ತಮ್ಮ ಜೊತೆ ಹೆಚ್ಚಿನ ಲಗೇಜ್ ಹೊತ್ತು ತಂದರೆ ಶುಲ್ಕ ಪಾವತಿಸಬೇಕಾಗುತ್ತದೆ! ಹೌದು, ಲೋಕಸಭೆಯಲ್ಲಿ ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಭವ್ ವೈಭವ್ ಈ ವಿಷಯ ತಿಳಿಸಿದ್ದು, ರೈಲು ಪ್ರಯಾಣಿಕರು ಇನ್ನು ಮುಂದೆ ನಿಗದಿಗಿಂತ ಹೆಚ್ಚು ಲಗೇಜ್ ತಂದರೆ ಶುಲ್ಕ

ಡಿವೋರ್ಸಿ ಪತ್ನಿಗೆ ಜೀವನಾಂಶ ಹಣ ನೀಡದ ಸಿಟ್ಟಿಗೆ ತಂದೆ ತಾಯಿಯ ಕೊಂದು ಗರಗಸದಿಂದ ಕತ್ತರಿಸಿ ನದಿಗೆಸೆದ ಮಗ

ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವ್ಯಕ್ತಿಯೊಬ್ಬ ತಂದೆ-ತಾಯಿಯನ್ನು ಹೊಡೆದು ಕೊಂದು ಬಳಿಕ ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದಿರುವ ಘಟನೆ ನಡೆದಿದೆ. ಎಂಜಿನಿಯರ್‌ ಅಂಬೇಶ್‌ ಕೊಲೆ ಆರೋಪಿ. ತಂದೆ ಶ್ಯಾಮ್‌ ಬಹದ್ದೂರ್‌ (62), ತಾಯಿ ಬಬಿತಾ (60)ಕೊಲೆಯಾದವರು. ಕೊಲೆಗಾರ ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಿಡುಗಡೆ

ಧರ್ಮಸ್ಥಳದ ನೂರಾರು ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ