ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ
ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಬೀದರ ಜಿಲ್ಲೆಯ ಕರ್ತವ್ಯನಿರತ ಪತ್ರಕರ್ತ ರವಿ ಭೂಸಂಡೆ ಅವರ ಮೇಲೆ ಹಲ್ಲೆ
ವಕ್ಫ್ ತಿದ್ದುಪಡಿ ಮಸೂದೆಗೆ ಮಧ್ಯಂತರ ತಡೆ ನೀಡಿದ ಸುಪ್ರೀಂಕೋರ್ಟ್
ನವದೆಹಲಿ: ವಕ್ಫ್ ಮಂಡಳಿಗಳಿಗೆ ಮುಸ್ಲಿಂ, ಮುಸ್ಲಿಂಮೇತರ ಸದಸ್ಯರ ನೇಮಕ ಮಾಡದಂತೆ ಮತ್ತು ವಕ್ಫ್ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ
ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಲಾರಿ ಮಾಲೀಕರ ಮುಷ್ಕರ ವಾಪಸ್
ಬೆಂಗಳೂರು: ಸರ್ಕಾರ ಹಾಗೂ ಲಾರಿ ಮಾಲೀಕರ ನಡುವಿನ ಸಂಧಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರದ ಬಗ್ಗೆ ಗುರುವಾರ
13 ಲಕ್ಷ ಬಲಿಷ್ಠ ಸೇನೆಯ ಭಾರತದಿಂದಲೇ ಭಯೋತ್ಪಾದನೆ ಮಟ್ಟಹಾಕಲು ಸಾಧ್ಯವಾಗಿಲ್ಲ: ಪಾಕಿಸ್ತಾನ ಸೇನಾ ಮುಖ್ಯಸ್ಥ ವಿವಾದಾತ್ಮಕ ಹೇಳಿಕೆ
ಇಸ್ಲಮಾಬಾದ್: 13 ಲಕ್ಷ ಬಲಿಷ್ಠ ಸೇನೆ ಹೊಂದಿರುವ ಭಾರತದಿಂದಲೇ ಉಗ್ರರನ್ನು ಮಟ್ಟಹಾಕಲು ಸಾಧ್ಯವಾಗಿಲ್ಲ. ಇನ್ನು ನಮ್ಮನ್ನು ಮಣಿಸಲು ಸಾಧ್ಯವೇ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸೀಮ್ ಮುನೀರ್ ವಿವಾದಾತ್ಮಕ ಹೇಳಿದ್ದಾರೆ. ವಿದೇಶದಲ್ಲಿ ನೆಲೆಸಿರುವ ಪಾಕಿಸ್ತಾನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, 1947ರ ಒಪ್ಪಂದದಂತೆ
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆದಾಯ 155.95 ಕೋಟಿ ರೂ.
ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಭಾರೀ ಏರಿಕೆಯಾಗಿ 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಹೆಚ್ಚಳವಾಗಿದೆ. ಹಿಂದೂ ಧಾರ್ಮಿಕ
ಎಲ್ಲದರ ಬೆಲೆ ಏರಿಸಿದ ಬಡವರ ವಿರೋಧಿ ಮೋದಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್
ಲಾರಿ ಮುಷ್ಕರ ಮೂರನೇ ದಿನಕ್ಕೆ, ಸರಕು ಸಾಗಣೆಯಲ್ಲಿ ವ್ಯತ್ಯಯ
ಡಿಸೇಲ್ ಬೆಲೆ ಹೆಚ್ಚಳ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಲಾರಿ ಮಾಲೀಕರು ನಡೆಸುತ್ತಿರುವ ಲಾರಿ ಮುಷ್ಕರವು ಮೂರನೇ ದಿನಕ್ಕೆ ಕಾಲಿರಿಸಿದೆ. ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು
ದರ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಹಾಲು, ಮೊಸರು, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಮಾಡುತ್ತಿರುವ ಜನಾಕ್ರೋಶ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಜನರಿಗೆ ಆಕ್ರೋಶ ಇಲ್ಲ, ಬಿಜೆಪಿಗೆ ಮಾತ್ರ ಆಕ್ರೋಶ ಇದೆ ಎಂದು ಕೈ ನಾಯಕರು ಕುಟುಕಿದ್ದಾರೆ. ಇಂದಿನ
ಮಲೆ ಮಹದೇಶ್ವರನಿಗೆ 35 ದಿನಗಳಲ್ಲಿ 3.26 ಕೋಟಿ ಕಾಣಿಕೆ
ಚಾಮರಾಜನಗರ ಮಲೆ ಮಹದೇಶ್ವರ ಬೆಟ್ಟದ ದೇಗುಲದಲ್ಲಿ ಹುಂಡಿ ಎಣಿಕೆ ಮಾಡಲಾಗಿದ್ದು, ಈ ಬಾರಿಯೂ ಮಾದಪ್ಪನಿಗೆ ಕೋಟಿಗಳಲ್ಲಿ ಕಾಣಿಕೆ ಹರಿದು ಬಂದಿದೆ. ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 35 ದಿನಗಳ ಅವಧಿಯಲ್ಲಿ 3.26
ಗ್ರಾಮ ನಾಮಗಳ ಮೇಲೆ ಬೆಳಕು ಚೆಲ್ಲುವ ದೇಜಗೌ ಕೃತಿ “ವಿಲೇಜ್ ನೇಮ್ಸ್ ಆಫ್ ಮೈಸೂರ್ ಡಿಸ್ಟ್ರಿಕ್ಟ್”
ದೇಜಗೌ ಎಂದು ಕರೆಯಲ್ಪಡುವ ಪ್ರೊ.ಡಿ.ಜವರೇಗೌಡ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ವಿದ್ವಾಂಸರು. ಅವರು ಸ್ಥಳನಾಮಗಳ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದು, ಈ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ವ್ಯಾಪಕವಾದ ಕ್ಷೇತ್ರ ಕಾರ್ಯದ ಕೊರತೆಯಿಂದಾಗಿ ಅಧ್ಯಯನದ ಮಿತಿಗಳನ್ನು ಲೇಖಕರು ಒಪ್ಪಿಕೊಂಡರೂ ಪುಸ್ತಕದಲ್ಲಿ