Menu

ಲೋಕಾಯುಕ್ತ ಪೊಲೀಸರಿಂದ ಮುಡಾ ಹಗರಣ ಮುಚ್ಚಿಹಾಕುವ ಪ್ರಯತ್ನ: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ

ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ

ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ ಮಾಡ್ಯೂಲ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನೆ

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಮಾನವರಹಿತ ಗಗನಯಾನ ಮಿಷನ್‌ನ ಕ್ರ್ಯೂ (ಸಿಬ್ಬಂದಿ) ಮಾಡ್ಯೂಲ್‌ ಅನ್ನು ಬೆಂಗಳೂರು ಎಲ್‌ಪಿಎಸ್‌ನಿಂದ ಶ್ರೀಹರಿಕೋಟಾದ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ರವಾನಿಸಲಾಗಿದೆ. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಇಸ್ರೋ, ಲಿಕ್ವಿಡ್‌ ಪ್ರೊಪಲ್ಷನ್ ಸಿಸ್ಟಮ್‌ ಏಕೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ, ಮೊದಲ

ಇ-ಸೇವೆಯಲ್ಲಿ ಕರ್ನಾಟಕ ನಂ.1: ವರದಿ

ದೇಶಾದ್ಯಂತ ಇ-ಸೇವೆಗಳ ವಿತರಣೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನ (NeSDA) ವರದಿ ಹೇಳಿದೆ. ದೇಶಾದ್ಯಂತ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಇ-ಸೇವಾ ವಿತರಣೆಯ ಸ್ಥಿತಿಗತಿಯ ಕುರಿತು ಸುದೀರ್ಘ ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿದ್ದು, ಕರ್ನಾಟಕ ಇ-ಸೇವೆಗಳ

ತಿರುಮಲದಲ್ಲಿ ರಾಜ್ಯ ಭಕ್ತಾದಿಗಳಿಗೆ ಮೂರು ವಸತಿ ಸಂಕೀರ್ಣ

ಬೆಂಗಳೂರು:ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

ಅಭಿಷೇಕ ಅಬ್ಬರಕ್ಕೆ ಸೋಲುಂಡ ಇಂಗ್ಲೆಂಡ್: ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್

ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್: ಸಿದ್ದರಾಮಯ್ಯ

ಬೆಂಗಳೂರು, ಜನವರಿ 23: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಪಕ್ಷಿಗಳ ಸಮೀಕ್ಷೆ

ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ಪ್ರಭೇದದ ಪಕ್ಷಿಗಳಿವೆ ಎಂಬುದನ್ನು ಅರಿಯಲು ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ಮುಂದಾಗಿ, ಫೆ.1 ಮತ್ತು 2ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ. ತಮಿಳುನಾಡು ಗಡಿಭಾಗಕ್ಕೆ ಹೊಂದಿಕೊಂಡಿರುವ ಈ

ಮುಡಾ ಹಗರಣದಲ್ಲಿ ಲೋಕಾಯುಕ್ತದಿಂದ ಸಿಎಂಗೆ ಕ್ಲೀನ್‌ಚಿಟ್‌ ?

ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ  ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು

ಕಪಿಲ್ ಶರ್ಮಾ, ರಾಜ್‌ಪಾಲ್ ಯಾದವ್ ಸೇರಿ ನಾಲ್ವರಿಗೆ ಪಾಕ್‌ನಿಂದ ಜೀವ ಬೆದರಿಕೆ

ಕಾಮಿಡಿ ಶೋ ನಿರೂಪಕ ಕಪಿಲ್ ಶರ್ಮಾ, ಬಾಲಿವುಡ್ ಕಾಮಿಡಿ ನಟ ರಾಜ್‌ಪಾಲ್ ಯಾದವ್ ಸೇರಿದಂತೆ ಒಟ್ಟು ನಾಲ್ವರು ಸೆಲೆಬ್ರೆಟಿಗಳಿಗೆ ಪಾಕಿಸ್ತಾನದಿಂದ ಇಮೇಲ್ ಮೂಲಕ ಜೀವ ಬೆದರಿಕೆ ಬಂದಿದ್ದು, ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಪಿಲ್ ಶರ್ಮಾ, ರಾಜ್‌ಪಾಲ್ ಯಾದವ್,