ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ, ಗದಗ, ಹಾವೇರಿ, ವಿಜಯಪುರ, ಬೆಳಗಾವಿ, ಬೀದರ್, ಧಾರವಾಡ, ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು
ಶೃಂಗೇರಿ ವಿಧಾನಸಭೆ ಕ್ಷೇತ್ರ: ಬಿಜೆಪಿಯ ಡಿ.ಎನ್.ಜೀವರಾಜ್ ಗೆಲುವು
ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು
ಶೃಂಗೇರಿ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶ ಕೂಡಲೇ ಪ್ರಕಟಿಸಿ: ಆರ್ ಅಶೋಕ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ
ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಗೈದ ಜ್ಯೋತಿಷಿ
ಬೆಂಗಳೂರಿನಲ್ಲಿ ಪೂಜೆ, ಮಾಟ, ಮಂತ್ರ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿರುವ ಮಹಿಳೆಯುಇ ಜ್ಯೋತಿಷಿ ವಿರುದ್ಧ ಸಿ.ಕೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆಯೇ ಜ್ಯೋತಿಷಿ ಮೋಹನ ಕುಮಾರು ಪರಾರಿಯಾಗಿದ್ದಾನೆ.
ಅಮೆರಿಕ ನಂಬಿಕೆಗೆ ಯೋಗ್ಯವಲ್ಲ: ಇರಾನ್
ಕದನ ವಿರಾಮ ಘೋಷಣೆಯಾಗಿದ್ದರೂ ಅಮೆರಿಕ ನಂಬಿಕೆಗೆ ಯೋಗ್ಯವಲ್ಲ ಎಂದು ಇರಾನ್ ಹೇಳಿದೆ. ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಪರಿಸ್ಥಿತಿ ಮತ್ತೆ ಉಲ್ಬಣಗೊಳ್ಳಬಹುದು. ಅಮೆರಿಕ ಮತ್ತು ಇಸ್ರೇಲ್ ಜೊತೆ ಯುದ್ಧ ಮತ್ತೆ ಆರಂಭವಾಗಬಹುದು. ಅಮೆರಿಕ ಯಾವುದೇ ಒಪ್ಪಂದಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ
ಗ್ಯಾಸ್ ಬೆಲೆ ಏರಿಕೆ: ಸರ್ಕಾರದ ಹೊಣೆಗಾರಿಕೆ ಏನು
ಸಂಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರಗಳು ವಾಣಿಜ್ಯ ಬಳಕೆದಾರರ ನೆರವಿಗೆ ಬರಬೇಕಿದೆ. ಹಾಗೆಯೇ ಈ ಬೆಲೆ ಏರಿಕೆಯು ದೇಶದ ಸಾಮಾನ್ಯನ ಮೇಲೆ ಕೆಟ್ಟ ಪರಿಣಾಮ ಉಂಟು ಮಾಡದ ಹಾಗೆ ಎಚ್ಚರಿಕೆ ಕ್ರಮಗಳನ್ನು ವಹಿಸುವ ಗುರುತರ ಹೊಣೆಗಾರಿಕೆ ಕೂಡಾ ಇದೆ. ವಾಣಿಜ್ಯ ಸಿಲಿಂಡರ್ ಬೆಲೆ ಈಗ
ಚುನಾವಣೋತ್ತರ ಸಮೀಕ್ಷೆ ನಂಬಲ್ಲ, ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿಕೆ ಶಿವಕುಮಾರ್
“ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ, ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ನನ್ನ ತಂತ್ರಗಾರಿಕೆಯೇ ಬೇರೆ, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್
ಹುಣಸಿಕಟ್ಟಿ ಗ್ರಾಮದಲ್ಲಿ ಏಳು ಕುಟುಂಬಕ್ಕೆ ಬಹಿಷ್ಕಾರ: ಜಮಖಂಡಿ ಠಾಣೆಯಲ್ಲಿ ದೂರು ದಾಖಲು
ಹನುಮಂತ ದೇವರ ಪಟ್ಟಿ ಕೊಡದ ಹಿನ್ನೆಲೆ ಜಮಖಂಡಿ ತಾಲೂಕಿನ ಹುಣಸೀಕಟ್ಟಿ ಗ್ರಾಮದ 7 ಕುಟುಂಬಸ್ಥರಿಗೆ ಬಹಿಷ್ಕಾರ ವಿಚಾರಕ್ಜೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಂಗುರ ಸಾರಿದ ವ್ಯಕ್ತಿ ಪ್ರಭು ಹೂಗಾರ ಹಾಗೂ ಗ್ರಾಮದ ಇತರರು ಎಂದು ಜಮಖಂಡಿ ಕಂದಾಯ
ಸಿಎಂ ಬದಲಾವಣೆ: ಹೈಕಮಾಂಡ್ ತೀರ್ಮಾನವೇ ಅಂತಿಮವೆಂದ ಯತೀಂದ್ರ ಸಿದ್ದರಾಮಯ್ಯ
ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಯಾವುದೇ ಸ್ಪಷ್ಟನೆ ಬೇಕಾದರೆ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳನ್ನೇ ಕೇಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ರಾಯಚೂರು ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಬುಧವಾರ
ಕೃಷಿಯನ್ನು ಲಾಭದಾಯಕವಾಗಿಸಲು ಸರ್ಕಾರ ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಓಕಳೀಪುರಂನಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಇ-ರೇಷ್ಮೆ ಪೋರ್ಟಲ್ ಬಿಡುಗಡೆಯನ್ನು ನೆರವೇರಿಸಿ ಮಾತನಾಡಿದರು. ರೇಷ್ಮೆ ಮೇಲೆ 1.50 ಲಕ್ಷ ಕುಟುಂಬಗಳು ಇದರ




