Menu

ಕೆನ್ನೆಗೆ ಹೊಡೆದಿದ್ದಕ್ಕೆ ಕೊಲೆ: ಶವದ ಜೊತೆ ಸೆಲ್ಫಿ ವೀಡಿಯೊ ಮಾಡಿದ್ದ ಆರೋಪಿ ಅರೆಸ್ಟ್!

ಹಾಸನ: ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್ ಬಳಿ ಸ್ನೇಹಿತ ಕೀರ್ತಿಯನ್ನು ಡಿ.8 ರಂದು ಕೊಲೆ ಪ್ರಕರಣದಲ್ಲಿ ಆಟೋ ಚಾಲಕ ಉಲ್ಲಾಸ್ (21) ನನ್ನು ಬಂಧಿಸಲಾಗಿದೆ. ಎರಡು ವರ್ಷಗಳಿಂದ ಸ್ನೇಹಿತರಾಗಿದ್ದರು. ಅತಿಯಾಗಿ ಮದ್ಯ ಸೇವಿಸಿ ಮಾತನಾಡುವಾಗ ಉಲ್ಲಾಸ್ ಕೆನ್ನೆಗೆ ಕೀರ್ತಿ ಬಾರಿಸಿದ್ದ. ಇದರಿಂದ ಕೋಪಗೊಂಡಿದ್ದ ಉಲ್ಲಾಸ್, ಮತ್ತೆ ಕುಡಿಯಲು ಆಟೋದಲ್ಲಿ ಕೀರ್ತಿ ಜೊತೆ ಇನ್ನಿಬ್ಬರನ್ನು ಕರೆದೊಯ್ದಿದ್ದ. ಬಳಿಕ

ಗೋವಾ ನೈಟ್‌ ಕ್ಲಬ್‌ ದುರಂತ: ಪಲಾಯನ ಮಾಡಿದ್ದ ಮಾಲೀಕರಾದ ಲುತ್ರಾ ಸೋದರರು ಥೈಲ್ಯಾಂಡ್‌ನಲ್ಲಿ ಅರೆಸ್ಟ್‌

ಕಳೆದ ಶನಿವಾರ ರಾತ್ರಿ ಗೋವಾದ ಬೀರ್ಚ್‌ ಬೈ ನೈಟ್‌ಕ್ಲಬ್‌ನಲ್ಲಿ ಅಗ್ನಿ ದುರಂತ ನಡೆದು ೨೫ ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಕ್ಲಬ್‌ ಮಾಲೀಕರಾದ ಸೌರಭ್‌ ಮತ್ತು ಗೌರವ್‌ ಲುತ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಥೈಲ್ಯಾಂಡ್‌ ಪೊಲೀಸರು ಲುತ್ರಾ

ದೇವನಹಳ್ಳಿಯಲ್ಲಿ ಬಸ್‌ಗೆ ಕಾರು ಡಿಕ್ಕಿ: ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು-ಚಿಕ್ಕಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯನ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಗುರುವಾರ (ಇಂದು) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದ ಸುಮನ್ (25), ಸಾಗರ್ (26) ಮತ್ತು ಮೋಹನ್ (33) ಮೃತಪಟ್ಟವರು. ಚಿಕ್ಕಬಳ್ಳಾಪುರದ ಕಡೆಯಿಂದ

ಗಾಂಧಾರಿ ವಿದ್ಯೆ ಚಮತ್ಕಾರ: ಬಳ್ಳಾರಿಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಪ್ರಾಚೀನ ಕಲೆ “ಗಾಂಧಾರಿ” ವಿದ್ಯೆಯನ್ನು ಕರಗತ ಮಾಡಿಕೊಂಡಿರುವ ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ವಿದ್ಯಾರ್ಥಿನಿ ಹಿಮಾಬಿಂದು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತರು,

ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ

ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ

ಚಿಕ್ಕಮಗಳೂರು ಕಾಂಗ್ರೆಸ್‌ ಕಾರ್ಯಕರ್ತ ಗಣೇಶ್‌ ಹತ್ಯೆ: ಮತ್ತೆ ಆರು ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌

ಚಿಕ್ಕಮಗಳೂರು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿದ್ದು, ತಲೆ ಮರೆಸಿಕೊಂಡಿದ್ದ ಆರು ಮಂದಿಯನ್ನು ಪೊಲೀಸರು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ನಿತಿನ್, ದರ್ಶನ್, ಅಜಯ್, ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಎಂದು ಗುರುತಿಸಲಾಗಿದೆ. ಡಿ.5ರಂದು ರಾತ್ರಿ ಸಖರಾಯಪಟ್ಟಣದಲ್ಲಿ

ರಾಯಚೂರಿನಲ್ಲಿ ಎಸ್‌ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ: ಬ್ಯಾಂಕ್‌ನಿಂದ ಮಕ್ಕಳ ಬಿಸಿಯೂಟಕ್ಕೆ ಕತ್ತರಿ

ಎಸ್‌ಡಿಎಂಸಿ ಅಧ್ಯಕ್ಷನ ವೈಯಕ್ತಿಕ ಸಾಲ ತೀರಿಸದ ಕಾರಣ ರಾಯಚೂರು ತಾಲೂಕಿನ ಕೂಡ್ಲೂರು ಗ್ರಾಮದ ಪ್ರಾಥಮಿಕ ಶಾಲೆಯ ಮಕ್ಕಳ ಬಿಸಿಯೂಟವನ್ನು ಬ್ಯಾಂಕ್‌ ಕಸಿದುಕೊಂಡಿದೆ. ಯಾವುದೋ ವ್ಯಕ್ತಿ ಪಡೆದ ಸಾಲಕ್ಕೆ ಬ್ಯಾಂಕ್‌ ಶಾಲಾ ಮಕ್ಕಳ ಬಿಸಿಯೂಟಕ್ಕೆ ತೊಂದರೆ ನೀಡುತ್ತಿದೆ. ಬ್ಯಾಂಕ್ ಅಧಿಕಾರಿಗಳ ಕಾರ್ಯವೈಖರಿಯಿಂದ 255

ಆರ್‌ಟಿಒ ಕಚೇರಿಗಳಲ್ಲಿ ಬ್ರೋಕರ್‌ಗಳು: ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯಿತ್ತ ಸಚಿವರು

ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡಿದಲ್ಲಿ ಕಚೇರಿಯ ಅಧಿಕಾರಿಗಳ ಹೊಣೆ ಹೊರಬೇಕು, ಕಠಿಣ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು

ವಾಕ್‌ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್‌ ಅಶೋಕ ಕಿಡಿ

ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ

ವಿದೇಶದಲ್ಲಿರುವವರೂ ಕರ್ನಾಟಕದ “ಗ್ಯಾರಂಟಿ” ಲಾಭ ಪಡೆಯುತ್ತಿದ್ದಾರ?

ವಿದೇಶದಲ್ಲಿರುವವರೂ ಗ್ಯಾರಂಟಿ ಯೋಜನೆ ಅನುಕೂಲ ಪಡೆಯುತ್ತಿದ್ದಾರೆ ಎಂಬ ವಿಚಾರ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರಸ್ತಾಪಗೊಂಡಿದೆ, ಒಂದು ವೇಳೆ ವಿದೇಶದಲ್ಲಿರುವವರು ಅನುಕೂಲ ಪಡೆದರೆ ಅದು ತಪ್ಪು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕಾಂಗ