Menu

ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮವೆಂದು ಘೋಷಿಸಿದ ಇಂಧನ ಸಚಿವ ಜಾರ್ಜ್

ರಾಜ್ಯದ ರೈತರಿಗೆ ಸರ್ಕಾರದ ಕಡೆಯಿಂದ ಇದೊಂದು ಸಿಹಿ ಸುದ್ದಿ. 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮ ಎಂದು ಇಂಧನ ಇಲಾಖೆ ಘೋಷಿಸಿದೆ. ವಿಜಯಪುರದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಕೆಜೆ ಜಾರ್ಜ್ ಈ ಮಾಹಿತಿ ನೀಡಿದ್ದಾರೆ. ಇಂಧನ ಇಲಾಖೆಯಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್‌ಗಳು ಇನ್ನೊಂದು ವರ್ಷದಲ್ಲಿ ಸಕ್ರಮಗೊಳ್ಳಲಿದೆ. ಅಕ್ರಮ ಪಂಪ್ ಸೆಟ್‌ಗಳ

ಸಕಲೇಶಪುರದಲ್ಲಿ ಶಾಲೆಗೆಂದು ತೆರಳಿದ ಮೂವರು ವಿದ್ಯಾರ್ಥಿಗಳು ನಾಪತ್ತೆ

ಹಾಸನದ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ. ಕುನಿಗನಹಳ್ಳಿ ಗ್ರಾಮದ ಧರ್ಮಪ್ರಕಾಶ್, ಮನು ಹಾಗೂ ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬವರ ಮಕ್ಕಳಾದ ಶರತ್ (16), ಧನಂಜಯ್ (16), ಮುರುಳಿ (16) ನಾಪತ್ತೆಯಾದವರು.

ಪತ್ನಿಯ ಕೊಂದು ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆಸೆದ ನಿವೃತ್ತ ಸೈನಿಕ

ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್​ನಲ್ಲಿ ಹಾಕಿ ಬೇಯಿಸಿರುವ ಪ್ರಕರಣ ಬಯಲಾಗಿದೆ. ಜನವರಿ 18ರಂದು ರಾಚಕೊಂಡ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಮೀರಪೇಟ್ ಪೊಲೀಸ್ ಠಾಣೆಗೆ ತಮ್ಮ ಪತ್ನಿ ವೆಂಕಟ ಮಾಧವಿ

ಬೆಳಗಾವಿ ಸಮಾವೇಶದಲ್ಲಿ ಮೃತಪಟ್ಟ ಕೆಂಚಪ್ಪ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಡಿಕೆಶಿ

ಬೆಳಗಾವಿಯಲ್ಲಿ ನಡೆದ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿಯ  ರಾಣೆಬೆನ್ನೂರು ತಾಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್  ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ

ಡಾ.ಕುಮಾರ್‌ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ

ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ೨೦೨೪-೨೫ನೇ ಸಾಲಿನ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಎಂಬ ಪ್ರಶಸ್ತಿ ಪ್ರಕಟಿಸಿದೆ. ೨೦೨೪-೨೫ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ

ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನ ಬಂಧನ

ತಿ.ನರಸೀಪುರ ತಾಲೂಕಿನ ಮಾದಾಪುರ ಗ್ರಾಮದ ಸಮೀಪ  ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಅಪ್ಪ, ಮಗನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಹಿರಿಯೂರು ಗ್ರಾಮದ ನಾಗೇಶ ಬಿನ್ ಶಿವಪ್ರಸಾದ್(28) ಹಾಗೂ ಶಿವಪ್ರಸಾದ್ ಬಿನ್ ಷಡಕ್ಷರಿ(48)  ಖೋಟಾ ನೋಟು ಪ್ರಿಂಟ್ ಮಾಡಿ ಪೋಲೀಸರ ಬಲೆಗೆ ಬಿದ್ದ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ: ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ `ಲಕ್ಕುಂಡಿ’!

ನವದೆಹಲಿ: ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ.

ನಾಡಿನ ಅಭಿವೃದ್ಧಿಯಲ್ಲಿ ಸಂಸ್ಕೃತಿ-ಸಾಹಿತ್ಯ ಕಣ್ಣುಗಳಿದ್ದಂತೆ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ನಾಡಿನ ಅಭಿವೃದ್ಧಿ ಆಗಬೇಕಂದರೆ ಸಂಸ್ಕೃತಿ ಸಾಹಿತ್ಯ ಎರಡು ಕಣ್ಣುಗಳಿದ್ದಂತೆ. ಇವು ಚನ್ನಾಗಿದ್ದರೆ ನಾಡನ್ನು ನೋಡುವ ದೃಷ್ಟಿ‌ ಚನ್ನಾಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಭಿಪ್ರಾಯಪಟ್ಟರು. ನಗರದಲ್ಲಿ ಬುಧವಾರ ಕರ್ನಾಟಕ

ಬಿಜೆಪಿ ತೊರೆಯಲು ಮುಂದಾದ ಶ್ರೀರಾಮುಲು: ಬಿಜೆಪಿಯಲ್ಲಿ ಅಲ್ಲೋಲಕಲ್ಲೋಲ!

ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ರಾಜಕೀಯವಾಗಿ ಮುಗಿಸಲು ಯತ್ನಗಳು ನಡೆದಿವೆ. ಇದರಿಂದ ನೊಂದು ಪಕ್ಷ ತೊರೆಯುವುದಾಗಿ ಹೇಳಿದ್ದೇನೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಸಮಿತಿ

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮಾ ಶ್ರೇಷ್ಠ ನಟ, ನಟಿ

ರಾಜ್ಯ ಸರ್ಕಾರ 2109ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದ್ದು, ಪಿ. ಶೇಷಾದ್ರಿ ನಿರ್ದೇಶನದ ಮೋಹನದಾಸ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. ಬುಧವಾರ ರಾಜ್ಯ ಸರ್ಕಾರ ಚಲನಚಿತ್ರ ಪ್ರಶಸ್ತಿ ಪಟ್ಟಿ ಪ್ರಕಟಿಸಿದ್ದು, ಪೈಲ್ವಾನ್ ಚಿತ್ರದ ಅಭಿನಯಕ್ಕಾಗಿ ಕಿಚ್ಚ ಸುದೀಪ್ ಹಾಗೂ ತ್ರಯಂಬಕಂ