Menu

ಚಂಡಮಾರುತ ಹೊಡೆತಕ್ಕೆ ಶ್ರೀಲಂಕಾದಲ್ಲಿ 123 ಬಲಿ, 130 ಮಂದಿ ನಾಪತ್ತೆ

ದಿಟ್ವಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಶ್ರೀಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, 130 ಮಂದಿ ಕಾಣೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಶನಿವಾರ ತಿಳಿಸಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಮಹಾನಿರ್ದೇಶಕ ಸಂಪತ್ ಕೊಟುವೆಗೊಡ ಹೇಳಿದ್ದಾರೆ, 43,995 ಜನರು ಸರ್ಕಾರಿ ಸ್ವಾಮ್ಯದ ಕಲ್ಯಾಣ ಕೇಂದ್ರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಹವಾಮಾನ ವ್ಯವಸ್ಥೆಯು ದ್ವೀಪದಿಂದ ನೆರೆಯ ಭಾರತದ

ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು

ಟ್ರಂಪ್ ತೆರಿಗೆ ಬರೆ ನಡುವೆ ಭಾರತದ ಜಿಡಿಪಿ ದಾಖಲೆಯ ಶೇ. 8.2ಕ್ಕೆ ಜಿಗಿತ!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೇರಿಕೆ ಸೇರಿದಂತೆ ಹಲವು ಸವಾಲುಗಳ ನಡುವೆ ಭಾರತದ ಆರ್ಥಿಕ ಅಭಿವೃದ್ಧಿ ದರ ವರ್ಷದ ಎರಡನೇ ತ್ರೈಮಾಸಿಕದಲ್ಲಿ ದಾಖಲೆಯ ಶೇ.8.2 ಏರಿಕೆ ದಾಖಲಿಸಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಪ್ರಸಕ್ತ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಹೇಳಿದಂತೆ ಕೇಳಲು ಸಿಎಂ, ಡಿಸಿಎಂ ತೀರ್ಮಾನ!

ಅಧಿಕಾರ ಹಸ್ತಾಂತರ ಕುರಿತು ಯಾವುದೇ ಗೊಂದಲ ಇಲ್ಲ. ಹೈಕಮಾಂಡ್ ತೀರ್ಮಾನದಂತೆ ನಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಉಪಹಾರ ಸೇವಿಸಿದ ನಂತರ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಉಪಹಾರದ ವೇಳೆ ಒಗ್ಗಟ್ಟು ಮಂತ್ರ ಜಪಿಸಿದ ಸಿಎಂ, ಡಿಸಿಎಂ

ಅಧಿಕಾರ ಕುರಿತು ಭಾರೀ ಚರ್ಚೆ ನಡುವೆ ಹೈಕಮಾಂಡ್ ಸೂಚನೆ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶುವಕುಮಾರ್‌ ಉಪಹಾರ ಸೇವಿಸಿದ್ದು, ಇಬ್ಬರೂ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಆಹ್ವಾನದ ಮೇರೆಗೆ ಶನಿವಾರ ಬೆಳಿಗ್ಗೆ ಸಿದ್ದರಾಮಯ್ಯ ನಿವಾಸದ

77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ!

ಗೋವಾದ ಕೆನಕೋನಾದಲ್ಲಿ ನೂತನವಾಗಿ ನಿರ್ಮಿಸಿದ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ಕೆನಕೋನಾದಲ್ಲಿನ ಶುಕ್ರವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ನಿರ್ಮಿಸಲಾದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಅಂಡರ್ 19 ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ: 14 ವರ್ಷದ ವೈಭವ್ ಸೂರ್ಯವಂಶಿಗೆ ಸ್ಥಾನ

ಸ್ಫೋಟಕ ಬ್ಯಾಟ್ಸ್ ಮನ್ ವೈಭವ್ ಸೂರ್ಯವಂಶಿ ದುಬೈನಲ್ಲಿ ಮುಂದಿನ ತಿಂಗಳು ನಡೆಯಲಿರುವ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಡಿಸೆಂಬರ್ 12ರಿಂದ 21ರವರೆಗೆ ದುಬೈನಲ್ಲಿ ನಡೆಯಲಿರುವ ಪುರುಷರ ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಶುಕ್ರವಾರ

69,922 ಅಂಗನವಾಡಿಗಳಿಂದ 40 ಲಕ್ಷ ಮಹಿಳೆ, ಮಕ್ಕಳಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಅಕ್ರಮ ಹಣ ವರ್ಗಾವಣೆ: ವಿನ್‌ಜೋ ಸಂಸ್ಥಾಪಕ ಸೇರಿ ಇಬ್ಬರ ಬಂಧನ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಆನ್‌ಲೈನ್‌ ಗೇಮಿಂಗ್‌ ಪ್ಲಾಟ್‌ಫಾರ್ಮ್‌ ‘ವಿನ್‌ಜೋ’ ಸಂಸ್ಥಾಪಕ ಸೌಮ್ಯಸಿಂಗ್ ರಾಥೋಡ್‌ ಹಾಗೂ ಪಾವನ್ ನಂದಾರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ನ.18ರಿಂದ ನ.22ರವರೆಗೆ ವಿನ್‌ಜೋ ಮತ್ತು ಈ ಕಂಪನಿಗೆ ಸೇರಿದ ಗೇಮ್ಜ್‌ಕ್ರಾಫ್ಟ್‌ ಎಂಬ

ಮೈಸೂರಿನಲ್ಲಿ ರಾತ್ರಿ ಹುಲಿ ಸೆರೆ: ಮರಿಗಳಿಗಾಗಿ ಶೋಧ

ಮೈಸೂರು: ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೈಸೂರಿನಲ್ಲಿ ತಡರಾತ್ರಿ ನಡೆಸಿದ ಕಾರ್ಯಾಚರಣೆ ವೇಳೆ ಬಂಧಿಸಿದ್ದಾರೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ