Menu

ನಾವು ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಕೆ ಶಿವಕುಮಾರ್‌ ಮಾರ್ಮಿಕ ನುಡಿ

“ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶರಾಗಲಿ, ರಾಷ್ಟ್ರಪತಿಗಳಾಗಲಿ, ನಾನಾಗಲೀ, ಯಾರೇ ಆಗಲಿ, ಕೊಟ್ಟ ಮಾತಿಗೆ ತಕ್ಕಂತೆ ನಡೆದು ಸಾಗಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ  ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್  ಮಾತನಾಡಿದರು. “ಸಂವಿಧಾನ ಪ್ರಜಾಪ್ರಭುತ್ವದ ಆತ್ಮ. ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡು ಬದುಕಿನಲ್ಲಿ ಅಳವಡಿಸಿಕೊಂಡಿದ್ದೇವೆ.

ಕೋಲಾರದಲ್ಲಿ ಆರ್‌ಟಿಒದಿಂದ ಖಾಸಗಿ ಬಸ್‌ಗಳ ಸೀಜ್‌, ಕೋಟಿಗೂ ಅಧಿಕ ದಂಡ ವಸೂಲಿ

ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳು ಅಂತಾರಾಜ್ಯ ಖಾಸಗಿ ಬಸ್‌ಗಳನ್ನು ಕೋಲಾರದಲ್ಲಿ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸಿರುವ ಬಸ್‌ಗಳನ್ನು ಸೀಜ್‌ ಮಾಡಿದ್ದು, ಒಂದು ಕೋಟಿ ರೂ.ಗೂ ಅಧಿಕ ದಂಡ ವಸೂಲಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಆಂಧ್ರ, ತಮಿಳುನಾಡು ಸೇರಿ ನಾನಾ ರಾಜ್ಯಗಳಿಗೆ

ಸತೀಶ್ ಜಾರಕಿಹೊಳಿ ಜತೆ 2028 ರಲ್ಲಿ  ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯತಂತ್ರ ಚರ್ಚೆ: ಡಿಕೆ ಶಿವಕುಮಾರ್

“ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿ ಹುದ್ದೆ ಅಥವಾ ಉನ್ನತ ಅಧಿಕಾರ ಮುಖ್ಯವಲ್ಲ. ಪಕ್ಷದ ಎಲ್ಲರೊಡನೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ‌ ಚಂಪಾಷಷ್ಠಿ ಮಹಾರಥೋತ್ಸವ

ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಠಿ ಮಹೋತ್ಸವದ ಮಹಾರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಮುಂಜಾನೆ 7:29ರ ಶುಭ ಮುಹೂರ್ತದಲ್ಲಿ ವೈಭವದಿಂದ ನಡೆಯಿತು. ಕಾರ್ತಿಕ ಶುದ್ಧ ಷಷ್ಠಿ ದಿನದ ಪ್ರಯುಕ್ತ ನಡೆಯುವ ವಾರ್ಷಿಕ ರಥೋತ್ಸವದಲ್ಲಿ ಅಪಾರ ಭಕ್ತಿಭಾವ,

ಕೆಂಪುಕೋಟೆ ಬಳಿ‌ ಕಾರು ಸ್ಫೋಟ ಮತ್ತೊಬ್ಬನ ಬಂಧನ

ನವದೆಹಲಿ: ಕೆಂಪುಕೋಟೆ ಬಳಿ‌ ಸಂಭವಿಸಿದ್ದ ಕಾರು ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು,ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ. ಕಾರು ಸ್ಪೋಟ ಸಂಭವಿಸುವ ಮುನ್ನ ಉಮರ್ ನಬಿಗೆ

ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸೇರಿದಂತೆ ಯಾವುದೇ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆಗಿನ ರಹಸ್ಯ ಸಭೆ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಹಾಗೂ ಮುಂಬರುವ

ಕೋಚ್ ಭವಿಷ್ಯ ಬಿಸಿಸಿಐ ನಿರ್ಧರಿಸಲಿ: ಗೌತಮ್ ಗಂಭೀರ್

ಗುವಾಹತಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಬಿಸಿಸಿಐ ನಿರ್ಧರಿಸಲಿ. ಭಾರತೀಯ ಕ್ರಿಕೆಟ್ ಭವಿಷ್ಯ ಮುಖ್ಯವೇ ಹೊರತು ನಾನಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು 0-2ರಿಂದ

ಬೆಂಗಳೂರಲ್ಲಿ ಮನೆ ತಳಪಾಯಕ್ಕೂ ಪ್ರಮಾಣಪತ್ರ ಕಡ್ಡಾಯಗೊಳಿಸಿದ ಜಿಬಿಎ

ನಕ್ಷೆ ಮಂಜೂರಾತಿ ಅಧಿಕಾರವನ್ನು ನಗರ ಪ್ರಾಧಿಕಾರ ಈಗಾಗಲೇ ಜಿಬಿಎ ಗೆ ನೀಡಿದ್ದು, ಕಟ್ಟಡ ನಕ್ಷೆ ಉಲ್ಲಂಘನೆ ತಡೆಯುವ ನಿಟ್ಟಿನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಿದೆ. ನಗರ ಯೋಜನೆ ಅಧಿಕಾರಿಗಳು ಕಡ್ಡಾಯವಾಗಿ ತಳಪಾಯ ಪ್ರಮಾಣ ಪತ್ರ ಜವಾಬ್ದಾರಿ

ಪೋಕ್ಸೋ ಪ್ರಕರಣ: ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ

ಪೋಕ್ಸೋ ಪ್ರಕರಣದ ಆರೋಪಿ, ಚಿತ್ರದುರ್ಗ ಮುರುಘಾಮಠದ ಮಾಜಿ ಪೀಠಾಧಿಪತಿ  ಶಿವಮೂರ್ತಿ ಅವರನ್ನು ಎರಡನೇ  ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷ ಪ್ರಕರಣದ ವಿಚಾರಣೆ ನಡೆದಿದೆ. ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯಲ್ಲಿ ಆರೋಪಿ ಶಿವಮೂರ್ತಿ ಕೋರ್ಟ್‌ಗೆ

ಪೋಕ್ಸೊ ಪ್ರಕರಣದಲ್ಲಿ ಮುರುಘಾಶ್ರೀ ನಿರ್ದೊಷಿ:  ಕೋರ್ಟ್ ಮಹತ್ವದ ತೀರ್ಪು

ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಚಿತ್ರದುರ್ಗದ ಶ್ರೀ ಶಿವಮೂರ್ತಿ ಮುರುಘಾಶ್ರೀ ಅವರನ್ನು ಚಿತ್ರದುರ್ಗ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಖುಲಾಸೆಸಗೊಳಿಸಿದೆ. ಪ್ರಕರಣ ಸಂಬಂಧ ಸುದೀರ್ಘ ವಿಚಾರಣೆ ನಡೆಸಿದ ಎರಡನೇ ಜಿಲ್ಲಾ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ