ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್: ಇಂದು ಶ್ರೀರಂಗಪಟ್ಟಣ ಬಂದ್
ರೈತರ ಜಮೀನು, ಪುರಾತತ್ವ ಇಲಾಖೆಯ ಆಸ್ತಿಗಳ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ಎಂದು ನಮೂದಾಗಿದ್ದು, ಇದನ್ನು ಖಂಡಿಸಿ ರೈತರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಹೋರಾಟಕ್ಕೆ ಸಜ್ಜಾಗಿದ್ದು, ಇಂದು (ಸೋಮವಾರ) ಶ್ರೀರಂಗಪಟ್ಟಣದಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸಿವೆ. ಕೆಲವು ತೆರೆದಿದ್ದ ಅಂಗಡಿಗಳನ್ನು ಪ್ರತಿಭಟನಾಕಾರರು ಮುಚ್ಚಿಸಿದ್ದಾರೆ. ಜಾಮೀಯಾ ಮಸೀದಿ ಸುತ್ತ ಬಿಗಿ ಪೊಲೀಸ್ ಬಂದೋಬ್ತ್ ಕಲ್ಪಿಸಲಾಗಿದೆ. ಟೈರ್ ಸುಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ವಾಹನ ಸಂಚಾರ ಕೂಡ ವಿರಳವಾಗಿದೆ. ಬಂದ್
ಮಗನ ಆತ್ಮಹತ್ಯೆ ಸುದ್ದಿ ಕೇಳಿದ ತಾಯಿ ಹೃದಯಾಘಾತಕ್ಕೆ ಬಲಿ
ಮಗನ ಸಾವಿನ ಸುದ್ದಿ ತಿಳಿದ ತಾಯಿ ಹೃದಯಾಘಾತದಿಂದ ಅಸು ನೀಗಿರುವ ಪ್ರಕರಣ ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. 33 ವರ್ಷದ ಎಂಜಿನಿಯರಿಂಗ್ ಪದವೀಧರ ಮನೀಶ್ ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆ
ಫೆ.14ರಂದು ರೈತರ ಬೇಡಿಕೆ ಚರ್ಚೆಗೆ ಕೇಂದ್ರ ಒಪ್ಪಿಗೆ
ಕೇಂದ್ರ ಸರ್ಕಾರ ಫೆಬ್ರವರಿ 14ರಂದು ಚಂಡೀಗಢದಲ್ಲಿ ಪಂಜಾಬ್ ಪ್ರತಿಭಟನಾ ನಿರತ ರೈತರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಿದೆ. ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಉಪವಾಸವು ೫೪ನೇ ದಿನಕ್ಕೆ ಪ್ರವೇಶಿಸಿದಾಗ ವೈದ್ಯಕೀಯ ನೆರವು
ಖೊ-ಖೊ ವಿಶ್ವಕಪ್ : ನೇಪಾಳ ಮಣಿಸಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಸಿಎಂ ಅಭಿನಂದನೆ
ಮೊಟ್ಟಮೊದಲ ಖೊ – ಖೊ ವಿಶ್ವಕಪ್ ಪಂದ್ಯದಲ್ಲಿ ನೇಪಾಳವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತದ ಮಹಿಳಾ ಮತ್ತು ಪುರುಷರ ಖೊ-ಖೊ ತಂಡಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಚೊಚ್ಚಲ ಖೊ-ಖೊ ವಿಶ್ವಕಪ್‌ನಲ್ಲಿ ಭಾರತೀಯ ತಂಡಗಳ ಈ ಅಮೋಘ ಸಾಧನೆ ಇತಿಹಾಸದ ಪುಟಗಳಲ್ಲಿ
ಅಪಘಾತದಲ್ಲಿ ಮನು ಭಾಕರ್ ಅಜ್ಜಿ, ಚಿಕ್ಕಪ್ಪ ಸಾವು
ಹರಿಯಾಣಾದ ಮಹೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಒಲಿಂಪಿಕ್ಸ್ ಪದಕ ವಿಜೇತೆ ಶೂಟರ್ ಮನು ಭಾಕರ್ ಕುಟುಂಬಸ್ಥರು ಮೃತರಾಗಿದ್ದಾರೆ. ಮನು ಭಾಕರ್ ಅವರ ಚಿಕ್ಕಪ್ಪ ಯುಧ್ವೀರ್ ಸಿಂಗ್ ಮತ್ತು ಅಜ್ಜಿ ಸಾವಿತ್ರಿ ದೇವಿ ಮೃತಪಟ್ಟವರು. ಯುಧವೀರ್
ಯತ್ನಾಳ್, ರಮೇಶ್ ಜಾರಕಿಹೊಳಿ ವಿರುದ್ಧ ಹೈಕಮಾಂಡ್‌ಗೆ ದೂರು: ರೇಣುಕಾಚಾರ್ಯ
ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ವಿರುದ್ದ ಶೀಘ್ರದಲ್ಲೇ ಹೈಕಮಾಂಡ್ ಗೆ ದೂರು ನೀಡುವುದಾಗಿ ಮಾಜಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರನ್ನು ಈ ಹಿಂದೆ ಪಕ್ಷ ಉಚ್ಚಾಟನೆ ಮಾಡಿತ್ತು. ಆಗ ಯಡಿಯೂರಪ್ಪ ಅವರ ಕಾಲಿಗೆ
ತುಂಗಭದ್ರಾ ಕಲುಷಿತ: ನೀರು ಸೇವಿಸದಂತೆ ಗ್ರಾಮಗಳಲ್ಲಿ ಜಿಲ್ಲಾಡಳಿತ ಡಂಗೂರ
ಸರ್ಕಾರಿ ಇಲಾಖೆಗಳು ನೀಡಿರುವ ವರದಿಗಳ ಪ್ರಕಾರ ಆರು ಜಿಲ್ಲೆಯ ಜನರ ಪಾಲಿನ ಜೀವ ನದಿ ತುಂಗಭದ್ರಾ ನೀರು ಈಗ ಕುಡಿಯಲು ಯೋಗ್ಯ ಇಲ್ಲ. ನದಿ ತೀರದ ಗ್ರಾಮಗಳ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಇಲಾಖೆಗಳ ವರದಿ ಬಳಿಕ ಗದಗ ಜಿಲ್ಲಾಡಳಿತ
ಬೆಳಗಾವಿ ಕಪಿಲೇಶ್ವರ ದೇಗುಲದಲ್ಲಿ ಕ್ಷೀರಾಭಿಷೇಕ ನೆರವೇರಿಸಿದ ಡಿಕೆಶಿ
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿಯಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಭಾನುವಾರ ಪೂಜೆ ಸಲ್ಲಿಸಿದರು. ಈ ವೇಳೆ ಕ್ಷೀರಾಭಿಷೇಕದ ಭಾಗವಾಗಿ ಕಪಿಲೇಶ್ವರ ದೇವರಿಗೆ 111 ಲೀಟರ್ ಹಾಲು ಸಮರ್ಪಿಸಿದರು. ಪೂಜೆ, ಪ್ರಾರ್ಥನೆ ಮುಗಿಸಿದ ಬಳಿಕ
ಜ.31ರಿಂದ ಸಂಸತ್ ಅಧಿವೇಶನ, ಫೆ.1ಕ್ಕೆ ಬಜೆಟ್ ಮಂಡನೆ
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭವಾಗಲಿದ್ದು, ಏಪ್ರಿಲ್ 4ರವರೆಗೆ ನಡೆಯಲಿದೆ. ಫೆ. 1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನ ಜನವರಿ 31ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಂಸತ್ ಸದನವನ್ನು
ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್
“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ