ಕೆಎಸ್‌ಡಿಎಲ್ 451 ಕೋಟಿ ರೂ. ನಿವ್ವಳ ಲಾಭ, 21 ಹೊಸ ಉತ್ಪನ್ನ ಮಾರುಕಟ್ಟೆಗೆ
ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್), 2024-2025 ನೇ ಆರ್ಥಿಕ ವರ್ಷದಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಭಾರಿ ಲಾಭದೊಂದಿಗೆ ಮುನ್ನಡೆಯುತ್ತಿದೆ. 2024- 25ರ ಆರ್ಥಿಕ ವರ್ಷದಲ್ಲಿ 1786 ಕೋಟಿ ರೂ. ವಹಿವಾಟು ಹಾಗೂ 451 ಕೋಟಿ ರೂ. ನಿವ್ವಳ ಲಾಭ ದಾಖಲಿಸಿದೆ. ಎರಡು ವರ್ಷಗಳ ಅವಧಿಯಲ್ಲಿ (2022-23 ರ 181 ಕೋಟಿಗೆ ಹೋಲಿಸಿದರೆ) ಸಂಸ್ಥೆಯ ಲಾಭವು ದ್ವಿಗುಣಕ್ಕಿಂತ ಹೆಚ್ಚು ವೃದ್ಧಿಸಿರುವುದು
ರೈತರಿಗೆ ವಂಚಿಸಿದ ಆರೋಪಿಗಳ ರಕ್ಷಣೆಗೆ ಜಮೀರ್ ಪೊಲೀಸ್ ಮೇಲೆ ಒತ್ತಡ ಖಂಡನೀಯ: ಆರ್. ಅಶೋಕ
ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ZameerAhmed ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದು ಖಂಡನೀಯ. ಸಚಿವ ಸಂಪುಟ ಸದಸ್ಯರೇ ಹೀಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವುದಾದರೆ ರಾಜ್ಯದಲ್ಲಿ ಸಂವಿಧಾನ, ಕಾನೂನು ನಿಯಮಗಳು ಇದ್ದು ಪ್ರಯೋಜನವೇನು ಎಂದು ಪ್ರತಿಪಕ್ಷ ನಾಯಕ
ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ
ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದರು. ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ”
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬಿಎಂಟಿಸಿ ಬಸ್‌ಗೆ ಬಲಿ
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬೆಂಗಳೂರಿನ ವಿಜಯನಗರ ಸಮೀಪದ ಹಂಪಿನಗರದಲ್ಲಿ ಬಿಎಂಟಿಸಿ ಬಸ್‌ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಲಹಂಕದಿಂದ ಹಂಪಿನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಹಂಪಿನಗರ ಬಸ್ ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದ ವೇಳೆ ಡಿಕ್ಕಿ ಹೊಡೆದು 58 ವರ್ಷದ ಮಹಿಳೆ ಮಾಲಾ ಅಸು ನೀಗಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೋಶ್‌ಗೆ ಮಧ್ಯಂತರ ಜಾಮೀನು
ರೇಣುಕಾ ಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್‌ಗೆ 20 ದಿನಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಆರೋಪಿ ಪ್ರದೋಶ್ ತಂದೆ ಸುಬ್ಬಾರಾವ್ ಇತ್ತೀಚೆಗೆ ನಿಧನರಾಗಿದ್ದು, ಅವರ ಉತ್ತರಾದಿ ಕ್ರಿಯೆಗಳಿಗಾಗಿ ಜಾಮೀನು ನೀಡಬೇಕೆಂದು ಬೆಂಗಳೂರಿನ 57 ಸಿಸಿಹೆಚ್ ಕೋರ್ಟ್ಗೆ ಅರ್ಜಿ ಹಾಕಲಾಗಿತ್ತು. ಪರಿಶೀಲಿಸಿದ
ಮೂಡಿಗೆರೆ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಯುವತಿ ಸಾವು
ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ
ಬಾಗಲಕೋಟೆ ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ಬಾಗಲಕೋಟೆಯ ನವನಗರದ 49ನೇ ಸೆಕ್ಟರ್‌ನಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲವು ದಿನಗಳಿಂದ ನೆಲಕ್ಕೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ಸಾವು ಸಂಭವಿಸಿದೆ.
ಬೆಂಗಳೂರಿನಲ್ಲಿ ಮಹಿಳೆಯ ಕೊಂದು ಶವ ಆಟೋದಲ್ಲಿಟ್ಟು ಪ್ರಿಯಕರ ಪರಾರಿ
ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಾಲ್ಕು ಮಕ್ಕಳ ತಾಯಿಯನ್ನು ಹತ್ಯೆಗೈದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿದ್ದಾನೆ. ಸಲ್ಮಾ(35) ಹತ್ಯೆಯಾದ ಮಹಿಳೆ, ಪ್ರಿಯಕರ ಸುಬ್ಬುಮಣಿ ಕೊಲೆ ಆರೋಪಿ. ಆಟೋದಲ್ಲಿ ಮೃತದೇಹ ಇರುವುದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೇಸ್ ದಾಖಲಿಸಿಕೊಂಡು ತಿಲಕ್ನಗರ
ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಕೆ ಶಿವಕುಮಾರ್ ವಾಗ್ದಾಳಿ
“ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್
ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್




