ತುಮಕೂರಿನಲ್ಲಿ ಭ್ರಷ್ಟ ಅಧಿಕಾರಿಗಳಿಬ್ಬರು ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳಿಬ್ಬರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಜೆಡಿ ಲಿಂಗರಾಜು ಮತ್ತು ಸಹಾಯಕ ಎಸ್ ಪ್ರಸಾದ್ ಬಂಧಿತ ಭ್ರಷ್ಟ ಅಧಿಕಾರಿಗಳು. ಸಣ್ಣ ಉದ್ದಿಮೆದಾರ ಚೆನ್ನಬಸವೇಶ್ವರ ಎಂಬವರಿಂದ 1.15 ಲಕ್ಷ ರೂ. ಲಂಚ ಪಡೆಯುವಾಗ ಇವರಿಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೆನ್ನಬಸವೇಶ್ವರ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಒಂದು ವರ್ಷದಿಂದ ಎಲೆಕ್ಟ್ರಿಕಲ್ ಪ್ಯಾನೆಲ್ ತಯಾರಿಸಿ ಸಣ್ಣ
ರಾಜ್ಯದ ಆರೋಗ್ಯ ಇಲಾಖೆ ಹುದ್ದೆಗಳು ತಿಂಗಳೊಳಗೆ ಭರ್ತಿಯೆಂದ ಆರೋಗ್ಯ ಸಚಿವರು
ಸರ್ಕಾರವು ಮುಂದಿನ ಒಂದು ತಿಂಗಳೊಳಗೆ ರಾಜ್ಯದ ಆರೋಗ್ಯ ಇಲಾಖೆಯಲ್ಲಿರುವ ಎಲ್ಲ ಪ್ರಮುಖ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್
ಇನ್ಮುಂದೆ ಗ್ರಾಮಗಳಲ್ಲಿ ಮನೆಗಳಿಗೆ ನೀರು, ವಿದ್ಯುತ್ ಪಡೆಯಲು ಒಸಿ ಸಿಸಿ ರಗಳೆ ಇಲ್ಲ
ರಾಜ್ಯದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯದ 1,200 ಚದರ ಅಡಿ (30/40) ನಿವೇಶನದಲ್ಲಿ ನಿರ್ಮಿಸಲಾದ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಅವಕಾಶ ಕಲ್ಪಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಒಸಿ ಇಲ್ಲದ
ಕೇಂದ್ರ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ
ಕೇಂದ್ರ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ (91) ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು. ಅವರು ದೀರ್ಘಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ
ಬೆಂಗಳೂರಿನಲ್ಲಿ ಕೇರಳದ ವಿದ್ಯಾರ್ಥಿ ಸುಸೈಡ್‌ಗೆ ಬೆತ್ತಲೆ ಪೋಟೊ ಕಾರಣವಾಯ್ತಾ?
ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದ ಬಳಿ ಇರುವ ಖಾಸಗಿ ಕಾಲೇಜಿನ ಎಂಬಿಎ ವಿದ್ಯಾರ್ಥಿಯೊಬ್ಬ ಆತಮ್ಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಆತನ ಡೆತ್‌ನೋಟ್ ಮೂಲಕ ಬಹಿರಂಗಗೊಂಡಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಕೇರಳ ಮೂಲದ ಜಗನ್ ಮೋಹನ್ (25) ಕಾಲೇಜಿನಲ್ಲಿ ಎಂಬಿಎ ದ್ವಿತೀಯ
ಅರುಣಾಚಲದಲ್ಲಿ 1000 ಅಡಿ ಆಳದ ಪ್ರಪಾತಕ್ಕೆ ಬಸ್ ಬಿದ್ದು 21 ಕಾರ್ಮಿಕರ ದುರ್ಮರಣ ಶಂಕೆ!
ಅರುಣಾಚಲ ಪ್ರದೇಶದ ಕಡಿದಾದ ತಿರುವಿನಲ್ಲಿ ಬಸ್ 1000 ಅಡಿ ಆಳದ ಪ್ರಪಾತಕ್ಕೆ ಬಿದ್ದ ಪರಿಣಾಮ ಬಸ್ ನಲ್ಲಿದ್ದ 21 ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಡಿಸೆಂಬರ್ 8ರಂದು ತಡರಾತ್ರಿ ಅರುಣಾಚಲ ಪ್ರದೇಶದ ಹಯುಲಿಯಾಂಗ್-ಚಾಗಲಗಂ ರಸ್ತೆಯಲ್ಲಿ ಕಡಿದಾದ ತಿರುವುಗಳಲ್ಲಿ ಸಂಚರಿಸುತ್ತಿದ್ದ ಬಸ್ ನಿಯಂತ್ರಣ
ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ತಡೆ ಜಿಬಿಎ ಮಸೂದೆ ಮಂಡನೆ
ಬೆಳಗಾವಿ: ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಹಾಗೂ ಜಿಬಿಎ ಎರಡನೇ ತಿದ್ದುಪಡಿ ಮಸೂದೆಗಳನ್ನು ವಿಧಾನಸಭೆಯಲ್ಲಿ ಗುರುವಾರ ಮಂಡನೆ ಮಾಡಲಾಗಿದೆ. ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಂತವರಿಗೆ 1 ಲಕ್ಷ ರೂ. ದಂಡ ಹಾಗೂ 3 ವರ್ಷದವರೆಗಿನ
ಪೊಲೀಸ್, ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲು: ಸಿಎಂ
ಬೆಳಗಾವಿ: ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ಸರ್ಕಾರದ ಹುದ್ದೆಗಳ ನೇಮಕಾತಿಯಲ್ಲಿ ಮೀಸಲಾತಿ ನೀಡುವ ಮೂಲಕ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗುರುವಾರ ಮೇಲ್ಮನೆಯಲ್ಲಿ
ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು
ದ್ವೇಷ ಭಾಷಣದ ಕಾನೂನು ವಿರುದ್ದ ಬಿಜೆಪಿಯಿಂದ ಕಾನೂನು ಹೋರಾಟ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಇವತ್ತು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನ ವಿರುದ್ದವಿದೆ. ನಾವು ಇದನ್ನು ಖಂಡಿಸುತ್ತೇವೆ ಅಲ್ಲದೇ ಇದರ ವಿರುದ್ದ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.




