Menu

ಸಿಎಂ ಮಾತ್ರವಲ್ಲ, 224 ಶಾಸಕರು ಅನರ್ಹ ಖಚಿತವೆಂದ ವಕೀಲ ದೇವರಾಜೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಖುದ್ದು ಹಾಜರಾಗಬೇಕೆಂದು ಸುಪ್ರೀಂಕೋರ್ಟ್‌ ಸಮನ್ಸ್ ಜಾರಿ ಮಾಡಿದ್ದು, 224 ಶಾಸಕರು ಅನರ್ಹರಾಗುವುದು ಖಚಿತ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್‌ ಸಮನ್ಸ್ ಜಾರಿಗೊಳಿಸಿದ ಕುರಿತು ಹಾಸನದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗ್ಯಾರಂಟಿ

ಉದ್ಯೋಗಿಗಳಿಗೆ ಋತುಚಕ್ರ ರಜೆ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಮಹಿಳಾ ಉದ್ಯೋಗಿಗಳಿಗೆ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ಬೆಂಗಳೂರು ಹೋಟೆಲ್‌ಗಳ ಸಂಘವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಂಘದ ಪರ ವಕೀಲ ಪ್ರಶಾಂತ್ ಬಿ.ಕೆ ಅವರ ವಾದ

ಶ್ರೀಶಿವರಾತ್ರಿ ಶಿವಯೋಗಿಗಳ ಜಯಂತಿ: ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಸುತ್ತೂರಿನ ಶ್ರೀಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಡಿ.17ರಂದು ಮಳವಳ್ಳಿ ಪಟ್ಟಣದಲ್ಲಿ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದಾರೆ. ರಾಷ್ಟ್ರಪತಿ ಆಗಮನದ ಹಿನ್ನೆಲೆ ಹೆಲಿಪ್ಯಾಡ್, ವೇದಿಕೆ ಹಾಗೂ ಇತರ ಸ್ಥಳಗಳನ್ನು ಮೈಸೂರು ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ

ಉತ್ತರ ಜಪಾನ್‌ನಲ್ಲಿ ಭೂಕಂಪನ, ಸುನಾಮಿ ಅಲೆ

ಉತ್ತರ ಜಪಾನ್‌ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ಸುನಾಮಿ ಅಲೆಗಳು ಅಬ್ಬರಿಸಿವೆ. ಅಮೋರಿ ಕರಾವಳಿಯಲ್ಲಿ ಭೂಕಂಪ ಮತ್ತು ಸುನಾಮಿಯಿಂದ ಜಪಾನ್‌ನಲ್ಲಿ ಸಾಕಷ್ಟು ಹಾನಿಯಾಗಿದೆ.

ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆಗೆ ಕೇಂದ್ರಕ್ಕೆ ಒತ್ತಡ ಹಾಕುವ ಬಗ್ಗೆ ಅಧಿವೇಶನದಲ್ಲಿ ಚರ್ಚೆ: ಡಿಸಿಎಂ

“ರೈತರ ಸಮಸ್ಯೆ, ಬೆಂಬಲ ಬೆಲೆ, ಬಾಕಿ ಹಣ ಬಿಡುಗಡೆ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್  ಮಾಧ್ಯಮಗಳ

ಮಂಗಳಮುಖಿಯರಿಂದ ಯುವಕನ ಅಪಹರಣ: ಮಧುರೈನಲ್ಲಿ ರಕ್ಷಿಸಿದ ಬೆಂಗಳೂರು ಪೊಲೀಸ್‌

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳಮುಖಿಯರು ಅಪಹರಿಸಿಕೊಂಡು ಹೋಗಿದ್ದ 25 ವರ್ಷದ ಯುವಕನನ್ನು ಪೊಲೀಸರು ರಕ್ಷಿಸಿದ್ದಾರೆ. ಮಂಗಳಮುಖಿಯರ ತಂಡ ಯುವಕನನ್ನು ಅಪಹರಿಸಿ ತಮಿಳುನಾಡಿನ ಮಧುರೈಗೆ ಕರೆದುಕೊಂಡು ಹೋಗಿತ್ತು. ಅಲ್ಲಿ ಯುವಕನಿಗೆ ಶಸ್ತ್ರಚಿಕಿತ್ಸೆ ನಡೆಸಿ ಲಿಂಗ ಪರಿವರ್ತನೆ ಮಾಡಿಸಲು ಮಂಗಳಮುಖಿಯರ

ಗ್ಯಾಸ್ ಗೀಸರ್ ಸೋರಿಕೆ: ಬೆಂಗಳೂರಿನಲ್ಲಿ ತಾಯಿ ಮಗು ಸಾವು

ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗು ಮೃತಪಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಇಬ್ಬರೂ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಭಿವೃದ್ಧಿ ಮ್ಯಾಜಿಕ್ ಅಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆ ಅತ್ಯಗತ್ಯ: ಡಿಕೆ ಶಿವಕುಮಾರ್ 

“ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಹೈದರಾಬಾದ್ ನಲ್ಲಿ ನಡೆದ ತೆಲಂಗಾಣ ರೈಸಿಂಗ್ ಜಾಗತಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು. “ತೆಲಂಗಾಣವು ಬೆಂಗಳೂರು ಹಾಗೂ ಕರ್ನಾಟಕದ ಜೊತೆ ಸ್ಪರ್ಧಿಸುತ್ತಿದೆಯೇನೋ

ಜನವರಿಯಿಂದ ಇಂದಿರಾ ಕಿಟ್ ವಿತರಣೆ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ:ಬಿಪಿಎಲ್ ಪಡಿತರದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯ ಬದಲಿಗೆ ಬರುವ ಜನವರಿಯಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಮೇಲ್ಮೈಯಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಸಿಟಿ ರವಿ ಅವರ ಪ್ರಶ್ನೆಗೆ ಉತ್ತರ ನೀಡಿದ

ಶೀಘ್ರದಲ್ಲೇ ನಮ್ಮ ಮೆಟ್ರೋಗೆ 96 ರೈಲುಗಳ ಸೇರ್ಪಡೆ!

ಬೆಂಗಳೂರು: ಶೀಘ್ರದಲ್ಲೇ ಹೊಸದಾಗಿ 96 ರೈಲುಗಳನ್ನು ಸೇರ್ಪಡೆಗೊಳಿಸುವ ಮೂಲಕ ನಮ್ಮ ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯೆಲ್ಲೋ ಲೈನ್​ ಆರಂಭದ ಬೆನ್ನಲ್ಲೇ ಬರೋಬ್ಬರಿ 96 ಹೊಸ ರೈಲುಗಳ ನಮ್ಮ ಮೆಟ್ರೋಗೆ ಬರುತ್ತಿದ್ದು, ಅವುಗಳು ಕಾರ್ಯಾಚರಣೆಗೆ ಇಳಿಯುತ್ತಿದ್ದಂತೆ 4