Menu

ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ  ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು

ಕೆಎಸ್ ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ: ಬ್ರಿಜೇಶ್ ಪಟೇಲ್ ಬಣಕ್ಕೆ ಸೋಲು

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಜೇಶ್ ಪಟೇಲ್ ಬಣಕ್ಕೆ ಮುಖಭಂಗವಾಗಿದೆ. ಭಾನುವಾರ ನಡೆದ ಕೆಎಸ್ ಸಿಎ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಕೆ.ವೆಂಕಟೇಶ್ ಪ್ರಸಾದ್ 191 ಮತಗಳ

2017ರ ಖ್ಯಾತ ನಟಿ ಮೇಲೆ ದೌರ್ಜನ್ಯ: ನಟ ದಿಲೀಪ್ ಖುಲಾಸೆ, 6 ಮಂದಿ ದೋಷಿಗಳು!

2017ರ ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ದಿಲೀಪ್ ಸೇರಿದಂತೆ ಮೂವರನ್ನು ಕೇರಳ ನ್ಯಾಯಾಲಯ ದೋಷಮುಕ್ತಗೊಳಿಸಿ ತೀರ್ಪು ನೀಡಿದೆ. ಸರ್ಕಾರದ ಪರ ವಕೀಲರು ಸೂಕ್ತ ಸಾಕ್ಷ್ಯಗಳನ್ನು ಒದಗಿಸಲು ವಿಫಲರಾದ ಹಿನ್ನೆಲೆಯಲ್ಲಿ ದಿಲೀಪ್

ಬೆಳಗಾವಿ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದ ಸಿಎಂ

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ  ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿದ ಮುಖ್ಯಮಂತ್ರಿ,  ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು

ವರುಣಾದಿಂದ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿದ್ದ ಮೇಲ್ಮನವಿ: ಸಿಎಂ- ಇಸಿಗೆ ಸುಪ್ರೀಂ ನೋಟಿಸ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್  ಸಿಎಂ ಸಿದ್ದರಾಮಯ್ಯ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್‌ ನೀಡಿದೆ. ಸುಪ್ರೀಂಕೋರ್ಟ್‌ನ ಈ ಕ್ರಮ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. 2023ರ

ಮದುವೆಗೆ ಒಪ್ಪದ ಪ್ರಿಯಕರ: ರಾಮನಗರದಲ್ಲಿ ಯುವತಿ ಆತ್ಮಹತ್ಯೆ

ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಪ್ರೀತಿಸಿದ ಯುವಕ ಮದುವೆಯಾಗಲು ಒಪ್ಪಲಿಲ್ಲವೆಂದು ನೊಂದ ಯುವತಿ ಆತ್ನಹತ್ಯೆ ಮಾಡಿಕೊಂಡಿದ್ದಾಳೆ. ವರ್ಷಿಣಿ (22) ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ಎರಡು ವರ್ಷಗಳಿಂದ ವರ್ಷಿಣಿ ಹಾಗೂ ಯುವಕ ಪ್ರೀತಿಸುತ್ತಿದ್ದರು. ಯುವಕ ಮದುವೆಯಾಗಲು

ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ: ಡಿಕೆ ಶಿವಕುಮಾರ್

“ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು 

ನ್ಯಾಷನಲ್ ಹೆರಾಲ್ಡ್ ಕೇಸ್‌: ಡಿಸಿಎಂ ಆಪ್ತ ಇನಾಯತ್‌ ಅಲಿಗೆ ದೆಹಲಿ ಪೊಲೀಸ್‌ ನೋಟಿಸ್‌

ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಆಪ್ತ, ಮಂಗಳೂರಿನ ಕಾಂಗ್ರೆಸ್‌ ಮುಖಂಡ  ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಡಿ ನೀಡಿದ್ದ ದೂರಿನ ಅನ್ವಯ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಪ್ರಕರಣದಲ್ಲಿ

ಕೋಲಾರದಲ್ಲಿ ಏಳು ದಿನದ ಹೆಣ್ಣು ಮಗುವನ್ನು ಬಿಟ್ಟು ಅಸ್ಸಾಂ ದಂಪತಿ ಸುಸೈಡ್‌

ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿ ಗ್ರಾಮದಲ್ಲಿ ಅಸ್ಸಾಂ ಮೂಲದ ದಂಪತಿ ಏಳು ದಿನಗಳ ಹೆಣ್ಣು ಶಿಶುವನ್ನು ಬಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೆಹಮಾನ್ (28) ಮತ್ತು ಪತ್ನಿ ಫರಿಜಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ದಂಪತಿ ಅಸ್ಸಾಂನವರಾಗಿದ್ದು,

ಬಿಡಿಸಿಸಿ ಬ್ಯಾಂಕ್ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವು

ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್  ಹೇಳಿದ್ದಾರೆ. ಚಾಮರಾಜಪೇಟೆಯ ಬಿಡಿಸಿಸಿ ಬ್ಯಾಂಕ್ ನಲ್ಲಿ  ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ