ರಾಜ್ಯದ ಪ್ರತಿಷ್ಠಿತ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ
ಖಾನಾಪುರ ಕಾಡಂಚಿನ ಸಮುದಾಯಗಳ ಬದುಕು: ‘ಉದಯಕಾಲ’ ಕಳಕಳಿಗೆ ಡಿಸಿ ಮೆಚ್ಚುಗೆ, ಜ.28ಕ್ಕೆ ವಿಶೇಷ ಸಭೆ
ಖಾನಾಪುರದ ಕಾಡಂಚಿನ ಸಮುದಾಯಗಳ ಬದುಕಿಗೆ ಆಶಾಕಿರಣ ಗೋಚರಿಸಿದ್ದು, ಜನೆವರಿ 28ಕ್ಕೆ ಅಧಿಕಾರಿಗಳ ವಿಶೇಷ ಸಭೆ ನಡೆಯಲಿದೆ.ಹಕ್ಕಿ-ಪಿಕ್ಕಿ, ಕಾತಕರಿ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ, ‘ಉದಯಕಾಲ’ ದಿನಪತ್ರಿಕೆಯ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಖಾನಾಪುರ ತಾಲೂಕಿನ ನಂದಗಡ ಭಾಗದ ಕಾಡಂಚಿನಲ್ಲಿ ವಾಸಿಸುತ್ತಿರುವ ಹಕ್ಕಿ-ಪಿಕ್ಕಿ
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ರಾಜೀವ್ ಗೌಡ ಬೆದರಿಕೆ: ಎಫ್ಐಆರ್ ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಆದೇಶ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ರಾಜೀವ್ ಗೌಡ ಮತ್ತಷ್ಟು
ಗಂಡನ ಮೇಲಿನ ಕೋಪಕ್ಕೆ ಮಗುವನ್ನೇ ಕೊಂದ ಮಹಾತಾಯಿ
ಪತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಜಗಳವಾಡಿದ ತಾಯಿ 18 ತಿಂಗಳ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಲಾತೂರ್ನಲ್ಲಿ ನಡೆದಿದೆ. ಪತಿ ನೀಡಿದ ದೂರಿನ ಅನ್ವಯ ಪೊಲೀಸರು ಮಗುವನ್ನು ಕೊಂದ ಆರೋಪಿ ತಾಯಿ ಅಶ್ವಿನಿಯನ್ನು ಬಂಧಿಸಿದ್ದಾರೆ. ಪತಿ ಮನೆಗೆ
ಅಹಿಂದ ಸಮಾವೇಶಕ್ಕೆ ಬಸ್ ಕೊಡಬೇಡಿ: ಡಿಸಿಎಂ ಮೇಲಿನ ಆರೋಪ ಸುಳ್ಳೆಂದ ಕೆಎಸ್ ಶಿವರಾಮ್
ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನ ಅಹಿಂದ ಸಮಾವೇಶಕ್ಕೆ ಬಸ್ ನೀಡದಂತೆ ತಡೆದಿದ್ದಾರೆಂಬ ಆರೋಪ ಯಾರು ಸಹ ಮಾಡಬಾರದು. ಅಂತಹ ಯಾವುದೇ ಪ್ರಯತ್ನ ಅವರು ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಹೇಳಿದ್ದಾರೆ. ಮೈಸೂರಿನಲ್ಲಿ ಈ ಕುರಿತು
ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕ ಚಕ್ರಕ್ಕೆ ಸಿಲುಕಿ ಸಾವು
ಕಲಬುರಗಿಯ ಕಮಲಾಪುರ ತಾಲೂಕಿನ ಮಹಾಗಾಂವದಲ್ಲಿ ಟ್ರ್ಯಾಕ್ಟರ್ ಚಲಿಸುವಾಗ ರೀಲ್ಸ್ ಮಾಡುತ್ತಿದ್ದ ಚಾಲಕ ಅದೇ ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ. ಮಹಾಗಾಂವ ಗ್ರಾಮದ ನಿವಾಸಿ ಲೋಕೇಶ ಕಲ್ಲಪ್ಪ ಪೂಜಾರಿ (22) ಮೃತ ಚಾಲಕ ಎಂದು ಗುರುತಿಸಲಾಗಿದೆ. ಗ್ರಾಮದ ಕಬ್ಬಿನ ಗದ್ದೆಯಲ್ಲಿ ಟ್ರ್ಯಾಕ್ಟರ್ನಿಂದ
ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಕೊಲೆ: ಮದುವೆಯಾಗಬೇಕಿದ್ದ ಯುವಕನೇ ಕೊಲೆಗಾರ
ಧಾರವಾಡದ ಹೊರವಲಯದಲ್ಲಿ ಎರಡು ದಿನದ ಹಿಂದೆ ಝಕಿಯಾ ಎಂಬ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೊಲೆಯಾಗಿರುವ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಕೊಲೆಗಾರನನ್ನು ಪತ್ತೆ ಹಚ್ಚಿದ್ದಾರೆ. ಆಕೆಯನ್ನು ಮದುವೆಯಾಗಬೇಕಿದ್ದ ಸಂಬಂಧಿ ಸಾಬೀರ್ ಮುಲ್ಲಾ ಎಂಬಾತ ಮದುವೆ ವಿಚಾರವಾಗಿ ನಡೆದ ಜಗಳದಲ್ಲಿ ಆಕೆಯ ವೇಲ್ನಿಂದ ಕತ್ತು
ಕೈಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ: ಆರ್ ಅಶೋಕ
@INCKarnataka ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ. ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು
ಭಾಷಣ ಮಾಡದ ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ
ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಕರ್ನಲ್ ಸೋಫಿಯಾಗೆ ಸಚಿವ ನಿಂದನೆ: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ತಾಕೀತು ಮಾಡಿದ್ದೇನು?
ಭಾರತೀಯ ಸೇನೆಯ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ನೀಡದೆ ರಕ್ಷಣೆಗೆ ಮುಂದಾಗಿದ್ದ ಅಲ್ಲಿನ ಸರ್ಕಾರವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ವಿಜಯ್




