ನಾಳೆ ಎರಡು ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ವ್ಯತ್ಯಯ
ಹಳಿ ನಿರ್ವಹಣಾ ಕಾಮಗಾರಿ ಕಾರಣಕ್ಕೆ ಜ.19 ರಂದು ಭಾನುವಾರ ನೇರಳೆ ಮಾರ್ಗದಲ್ಲಿನ ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿನ ಮೆಟ್ರೋ ಸೇವೆ ಎಂದಿನಂತೆ ಇರಲಿದೆ. ಬಿಎಂಆರ್‌ಸಿಎಲ್ ಭಾನುವಾರ ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ.
ಹಾಲಿಗೆ ನೀರು ಮಿಶ್ರ ಮಾಡಿದ ಚಿಮುಲ್ ಸಿಬ್ಬಂದಿ ವಜಾ
ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಚಿಮುಲ್ ವ್ಯಾಪ್ತಿಯ ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣದಲ್ಲಿ ಆರೋಪಿ ಸಿಬ್ಬಂದಿಯನ್ನು ಚಿಮುಲ್ ವಜಾಗೊಳಿಸಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ
ಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿಧಿ ಪ್ರಶಸ್ತಿ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ
ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ
ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ
ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ
ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು
ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ
ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ ವಿರೋಧ ಏಕೆ ಮಾಡುತ್ತಾರೆ. ವರದಿ
ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ
ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ
ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್
ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ
ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ವಿಜಯೇಂದ್ರ ಆಪ್ತರ ಎಚ್ಚರಿಕೆ
ಬೆಂಗಳೂರು-ಇನ್ನು ಮುಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಅನಗತ್ಯವಾಗಿ ಟೀಕೆ ಮಾಡುವುದನ್ನು ಮುಂದುವರೆಸಿದರೆ ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ಶಾಸಕ ರಮೇಶ್ ಜಾರಕಿಹೊಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರ
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು: ಕೇಂದ್ರ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿದ್ದ 12 ಮಂದಿ ಭಾರತೀಯರು ಮೃತಪಟ್ಟಿದ್ದು, 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿರುವ ಭಾರತೀಯರ ಪೈಕಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ವಿದೇಶಾಂಗ