ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ
ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ. ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು. ಉಳ್ಳಾಲದಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ
ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ
ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ
ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್
ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ
ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ: ವಿಜಯೇಂದ್ರ ಆಪ್ತರ ಎಚ್ಚರಿಕೆ
ಬೆಂಗಳೂರು-ಇನ್ನು ಮುಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಅನಗತ್ಯವಾಗಿ ಟೀಕೆ ಮಾಡುವುದನ್ನು ಮುಂದುವರೆಸಿದರೆ ಯಾವುದೇ ಕಾರಣಕ್ಕೂ ನಾವು ಸಹಿಸುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತೆ ಶಾಸಕ ರಮೇಶ್ ಜಾರಕಿಹೊಳಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರ
ರಷ್ಯಾ ಸೇನೆಯಲ್ಲಿದ್ದ 12 ಭಾರತೀಯರು ಸಾವು: ಕೇಂದ್ರ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿದ್ದ 12 ಮಂದಿ ಭಾರತೀಯರು ಮೃತಪಟ್ಟಿದ್ದು, 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ರಷ್ಯಾ ಸೇನೆಯಲ್ಲಿರುವ ಭಾರತೀಯರ ಪೈಕಿ 12 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ವಿದೇಶಾಂಗ
ಸಚಿವಾಲಯದ ಸಿಬ್ಬಂದಿಗಾಗಿ 2 ದಿನಗಳ ಇವಿ ಮೇಳ: ಇಂಧನ ಸಚಿವ ಕೆಜೆ ಜಾರ್ಜ್ ಚಾಲನೆ
ಬೆಂಗಳೂರು, ಜನವರಿ 17, 2025: ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ವಿಧಾನಸೌಧ ಬಳಿ ಹಮ್ಮಿಕೊಂಡಿರುವ ಎರಡು ದಿನಗಳ ವಿಶೇಷ ಇವಿ ಮೇಳ -2025ಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು. ಪರಿಸರ ಸ್ನೇಹಿ ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಸ್ಕಾಂ
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ
ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಸಿಎಂ ಗರಂ
ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್
ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ; 12 ಕೋಟಿ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ!
ಬೀದರ್ ಎಟಿಎಂ ದರೋಡೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಹಾಡುಹಗಲೇ ಬ್ಯಾಂಕ್ ದರೋಡೆ ನಡೆದಿದ್ದು, ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ ರಸ್ತೆಯ ಕೋಟೆಕಾರ್ ಬ್ಯಾಂಕ್ ನುಗ್ಗಿದ ಮುಸುಕುಧಾರಿ 5 ಮಂದಿ ದುಷ್ಕರ್ಮಿಗಳು ಲಾಂಗ್, ಮಚ್ಚು ತೋರಿಸಿ ಬ್ಯಾಂಕ್ ನಲ್ಲಿದ್ದ
ಯಲಹಂಕ ಸುತ್ತಮುತ್ತ ನಿರ್ಮಾಣ ಹಂತದ ಕಟ್ಟಡಗಳ ಮೇಲೆ ಕ್ರೇನ್ ಎತ್ತರ ತಗ್ಗಿಸಲು ಸೂಚನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆ (Air Force Station)ಯಲ್ಲಿ ದಿನಾಂಕ: 01.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಮಟ್ಟದ ‘ಏರ್ ಇಂಡಿಯಾ-2025 (AERO INDIA) ನಡೆಯಲಿದೆ. ಏರ್ ಶೋ-2025 ನಡೆಯುತ್ತಿರುವ ಪ್ರಯುಕ್ತ ಯಲಹಂಕ