ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಪ್ರಕರಣದಲ್ಲಿ ಸಿಪಿ ಯೋಗೇಶ್ವರ್ ಖುಲಾಸೆ!
ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು ಪ್ರಕಟಿಸಿದ್ದಾರೆ. ಮೆಗಾ ಸಿಟಿ ಪ್ರಾಜೆಕ್ಟ್ ವಂಚನೆ ಆರೋಪದಲ್ಲಿ 9 ಕೇಸ್‌ಗಳಿದ್ದವು. ಈ ಹಿಂದೆ 3 ಕೇಸ್‌ಗಳಲ್ಲಿ ಯೋಗೇಶ್ವರ್ ಖುಲಾಸೆ ಆಗಿದ್ದರು. ಇದೀಗ ಮತ್ತೆ ಎರಡು ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾರೆ.
ಶಿವಮೊಗ್ಗ: ಐಸಿಸ್ ಉಗ್ರ ಸಂಘಟನೆಯ ಇಬ್ಬರಿಗೆ 6 ವರ್ಷ ಜೈಲು!
ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ
ನಾವು ಡಿಸಿಎಂ ಮಾಡದೇ ಇದ್ದಿದ್ದರೆ ಸಿದ್ದರಾಮಯ್ಯ ಕಡೆ ಕಾಂಗ್ರೆಸ್ ಮೂಸಿಯೂ ನೋಡುತ್ತಿರಲಿಲ್ಲ: ಎಚ್.ಡಿ. ಕುಮಾರಸ್ವಾಮಿ
ನಾವು ಡಿಸಿಎಂ ಮಾಡದೇ ಇದಿದ್ದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳಜುರಿನ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು
ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು
ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ
ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ
ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ
ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ
ದುಬೈ ಏರ್ ಶೋನಲ್ಲಿ ಭಾರತದ ತೇಜಸ್ ವಿಮಾನ ಪತನ: ಪೈಲೆಟ್ ಸಾವು
ನವದೆಹಲಿ: ದುಬೈನಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನದ ವೇಳೆ ಆಗಸದಲ್ಲಿ ಹಾರುತ್ತಿದ್ದಾಗಲೇ ತೇಜಸ್ ಯುದ್ಧ ವಿಮಾನ ಪತನಗೊಂಡಿದ್ದು, ಪೈಲೆಟ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೆಚ್‌ಎಎಲ್ ನಿರ್ಮಿತ ಲಘು ಯುದ್ಧ ವಿಮಾನವು ಸ್ಥಳೀಯ ಕಾಲಮಾನ ಇಂದು ಮಧ್ಯಾಹ್ನ 2:10ರ ಸುಮಾರಿಗೆ ವೈಮಾನಿಕ ಪ್ರದರ್ಶನ ನೀಡುವಾಗ
ನನಗೆ ಯಾವುದೇ ಬಣ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋದ ವಿಚಾರಕ್ಕು
10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ತೀರ್ಮಾನ, ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ
ಮೆಕ್ಕೆ ಜೋಳ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಎಲ್ಲ ರೀತಿಯ ನೆರವು ಒದಗಿಸಲಿದೆ. ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಆಮದು ಮಾಡಿಕೊಳ್ಳದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತ ಸೇರಿ 3 ದೇಶಗಳಲ್ಲಿ ಭೂಕಂಪನ: ಬಾಂಗ್ಲಾದಲ್ಲಿ 6 ಸಾವು
ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ್ದು, ಬಾಂಗ್ಲಾದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು,




