Thursday, November 05, 2026
Menu

“ತಿಥಿ” ಖ್ಯಾತಿಯ ಸೆಂಚುರಿ ಗೌಡ ಇನ್ನಿಲ್ಲ

ತಿಥಿ ಸಿನಿಮಾದಲ್ಲಿ ಸೆಂಚುರಿ ಗೌಡ ಪಾತ್ರ ನಿರ್ವಹಿಸಿ ಜನಮನ ಗೆದ್ದಿದ್ದ  ಪಾಂಡವಪುರ ತಾಲೂಕಿನ  ಸಿಂಗ್ರೆಗೌಡ ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. 100 ವರ್ಷ ದಾಟಿದ್ದ ಅವರು ಸಿನಿಮಾದಲ್ಲೂ ಸೆಂಚುರಿ ಗೌಡ ಪಾತ್ರದಲ್ಲಿ ಅಭಿನಯಿಸುವ ಮೂಲಕ ಪ್ರಸಿದ್ಧರಾಗಿದ್ದರು. ಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. 2015 ರಲ್ಲಿ ಬಿಡುಗಡೆಯಾಗಿದ್ದ ತಿಥಿ ಸಿನಿಮಾ ಹಲವು ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಸಿನಿಮಾ ನಿರ್ದೇಶಕರು

ಪ್ರೀತಿಸಿದ ಹುಡುಗನ ವಶೀಕರಣ: ಗುರೂಜಿ ಸೋಗಿನಲ್ಲಿ ಯುವತಿಗೆ 2.05 ಲಕ್ಷ ರೂ. ವಂಚನೆ

ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಜಿಯಲ್ಲಿ ವಾಸವಾಗಿದ್ದ ಯುವತಿಗೆ ಆನ್‌ಲೈನ್‌ ಮೂಲಕ ಭವಿಷ್ಯ ಹೇಳುವುದಾಗಿ ಗುರೂಜಿ ಸೋಗಿನಲ್ಲಿ ನಂಬಿಸಿದ ವ್ಯಕ್ತಿಯೊಬ್ಬ 2.05 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಆಡುಗೋಡಿ ನಿವಾಸಿಯಾಗಿರುವ ಯುವತಿ ಚಂದ್ರಶೇಖರ್ ಸುಗತ್ ಗುರೂಜಿ ಎಂಬಾತನ ವಿರುದ್ಧ

ಜನಾರ್ಧನ ರೆಡ್ಡಿ ಅಮೆರಿಕದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ, ಬೇಡ ಅಂದವರು ಯಾರು: ಡಿಸಿಎಂ 

ಜನಾರ್ಧನ ರೆಡ್ಡಿ ಇರಾನ್, ಅಮೆರಿಕದಿಂದಾದರೂ ಸೆಕ್ಯುರಿಟಿ ತೆಗೆದುಕೊಂಡು ಬರಲಿ.‌ ಯಾರನ್ನಾದರೂ ನೇಮಿಸಿಕೊಳ್ಳಲಿ. ಬೇಡ ಎಂದವರು ಯಾರು  ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ. ಬಳ್ಳಾರಿ ಬ್ಯಾನರ್‌ ಗಲಾಟೆ ಬಳಿಕ ಝಡ್ ಪ್ಲಸ್ ಸೆಕ್ಯುರಿಟಿ ನೀಡಿ ಎಂದು ಜನಾರ್ದನ ರೆಡ್ಡಿ ಅವರು ಪತ್ರ ಬರೆದಿರುವ

ಉಪಜಾತಿಗಳಲ್ಲಿ ವಿಭಜನೆಯಾಗದೆ ಒಂದೇ ಶಕ್ತಿಯಾಗಿ ಸಂಘಟಿತರಾಗಿ: ಮುಖ್ಯಮಂತ್ರಿ

ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ದೇವಾಂಗ ಸಂಘದಿಂದ ವತಿಯಿಂದ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ದೇವಾಂಗ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘವು ನೂರು

ಬೆಂಗಳೂರು ನಗರ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ. ಹೂಡಿಕೆ:  ಡಿಕೆ ಶಿವಕುಮಾರ್

ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪ್ರಕಟಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಶ್ರೀ

ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಮುಖ್ಯಮಂತ್ರಿ

ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ. ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಕರ್ನಾಟಕ ಚಿತ್ರಕಲಾ ಪರಿಷತ್ತು  ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23 ನೇ ಚಿತ್ರ ಸಂತೆ

ಒಡಿಶಾ ಕಲ್ಲು ಕ್ವಾರಿಯಲ್ಲಿ ಭೂಕುಸಿತ: ಇಬ್ಬರು ಬಲಿ, ಹಲವು ಕಾರ್ಮಿಕರ ಸಾವು ಶಂಕೆ

ಒಡಿಶಾದ ಧೆಂಕಾನಾಲ್ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆಯ ವೇಳೆ ಭಾರಿ ಪ್ರಮಾಣದ ಭೂ ಕುಸಿತ ಸಂಭವಿಸಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದು ಹಲವು ಕಾರ್ಮಿಕರು ಮೃತಪಟ್ಟಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ

ಮೂಡಿಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಮಗನ ಕಡಿದು ಕೊಂದ ತಂದೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪನೇ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರದೀಪ್ ಆಚಾರ್ (29) ಕೊಲೆಯಾದವರು. ರಮೇಶ್ ಆಚಾರ್ ಮಗನ ಕೊಲೆಗೈದಿರುವ ತಂದೆ. ಕ್ಷುಲಕ ಕಾರಣಕ್ಕೆ ಕುಡಿದು ಅಪ್ಪ-ಮಗ ಆಗಾಗ ಮನೆಯಲ್ಲಿ

ಬಳ್ಳಾರಿ ಬ್ಯಾನರ್‌ ಗಲಾಟೆ: ಸತೀಶ್‌ ರೆಡ್ಡಿಯ ಗನ್‌ ಮ್ಯಾನ್‌ಗಳು ಪೊಲೀಸ್‌ ವಶಕ್ಕೆ, ಪ್ರಕರಣ ಸಿಐಡಿಗೆ ಎಂದ ಗೃಹಸಚಿವ

ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಪ್ರಯುಕ್ತ ಬ್ಯಾನರ್‌ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್‌ಗೆ ಬಲಿಯಾದ ಪ್ರಕರಣದಲ್ಲಿ ಶಾಸಕ ಭರತ್‌ ರೆಡ್ಡಿ ಆಪ್ತ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ನಡುವೆ ಪ್ರಕರಣದ ತನಿಖೆಯನ್ನು

ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ; ಕಾನೂನು ಚೌಕಟ್ಟಿನಲ್ಲಿ ಕ್ರಮವೆಂದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಇತ್ತೀಚೆಗೆ ನಡೆದ ಘಟನೆಯ ಕುರಿತು ಕಾನೂನು ಚೌಕಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಬೇಕು. ಅ ಎಲ್ಲಾ ಕ್ರಮವನ್ನು ಅನುಸರಿಸುವ ಮೂಲಕ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು. ರಾಯಚೂರು ನಗರದ ಹೊರವಲಯದ ನೂತನ