ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್: ಸಾರ್ವಜನಿಕರ ಆಕ್ರೋಶ
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಏರ್ಪೋಟ್ ಟರ್ಮಿನಲ್ 2 ರಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಸಾರ್ವಜನಿಕರ ಸ್ಥಳದಲ್ಲಿ ಸಾಮೂಹಿಕ ನಮಾಜ್ ಮಾಡಿದರೂ ಏರ್ಪೋಟ್ ಸಿಬ್ಬಂದಿ, ಭದ್ರತಾ ಪಡೆ ಸುಮ್ಮನೆ ನೋಡುಇತ್ತ ನಿಂತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು ಕಲಾಸಿಪಾಳ್ಯದಲ್ಲಿ ಬಾಲಕಿ ಆತ್ಮಹತ್ಯೆ
ಬೆಂಗಳೂರು ಕಲಾಸಿಪಾಳ್ಯ ಹೋಟೆಲ್ ಮಯೂರ ಪಕ್ಕದ ರಸ್ತೆಯ ಮನೆಯಲ್ಲಿ ಬಾಲಕಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರ್ಮಿಳಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಾಲಕಿಯ ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು
ಟೀಕೆ ಮಾಡುತ್ತಿರುವವರಿಂದಲೇ ನಮ್ಮ ಗ್ಯಾರಂಟಿ ಯೋಜನೆಗಳ ನಕಲು: ಡಿಕೆ ಶಿವಕುಮಾರ್
“ನಾವು ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಟೀಕೆ ಮಾಡುತ್ತಿದ್ದರು. ಈಗ ಹರಿಯಾಣ, ಮಹಾರಾಷ್ಟ್ರ, ಉತ್ತರಪ್ರದೇಶ, ಬಿಹಾರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನೇ ನಕಲು ಮಾಡಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ
ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ
1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ
ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತು: ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮವೆಂದ ಸಿಎಂ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದು
ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು
ಕನಕಪುರ ತಾಲೂಕಿನ ಸಾತನೂರು ಅರಣ್ಯ ವಲಯದ ವ್ಯಾಪ್ತಿಯ ಕುನ್ನೂರು ಗ್ರಾಮದ ಬಳಿ ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ. ಕಾಡಾನೆಗಳು ಹಿನ್ನೀರು ದಾಟಲು ಮುಂದಾದಾಗ ನೀರಿನೊಳಗಿದ್ದ ಜೊಂಡಿನಲ್ಲಿ ಸಿಲುಕಿ ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ಬರಲಾಗದೆ ಒದ್ದಾಡಿ ಮೃತಪಟ್ಟಿವೆ ಎನ್ನಲಾಗಿದೆ.
ಸ್ನೇಹಿತ, ಸಾರ್ವಜನಿಕರ ನಿರ್ಲಕ್ಷ್ಯ: ಬೆಂಗಳೂರಿನಲ್ಲಿ ಆಕ್ಸಿಡೆಂಟ್ ಆಗಿ ರಾತ್ರಿಯಿಡಿ ಒದ್ದಾಡಿ ಪ್ರಾಣ ಬಿಟ್ಟ ವ್ಯಕ್ತಿ
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆತನ ಸ್ನೇಹಿತ ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಸಾರ್ವಜನಿಕರು ಕೂಡ ನೆರವಿಗೆ ಧಾವಿಸದೆ ಬಿಟ್ಟ ಪರಿಣಾಮ ಆತ ರಾತ್ರಿಯಿಡೀ ಒದ್ದಾಡಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಕೋ ಲೇಔಟ್ ಸಂಚಾರಿ ಠಾಣೆ ವ್ಯಾಪ್ತಿಯ KMF ಕಚೇರಿ
ಅತ್ತಿಬೆಲೆ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು
ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಆಟವಾಡುತ್ತ ಕೆರೆ ಬಳಿ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಅನಿಕೇತ್ ಕುಮಾರ್(12), ರೆಹಮಾತ್ ಬಾಬಾ(11) ಮೃತಪಟ್ಟ ಬಾಲಕರು. ಬಾಲಕ ಅನಿಕೇತ್ ಕುಮಾರ್ ಬಿಹಾರ ಮೂಲದವ, ರೆಹಮಾತ್
ಧಾರವಾಡ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ
ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನುಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉದ್ಘಾಟಿಸಿದರು. ಕರ್ನಾಟಕ
ದಾವಣಗೆರೆಯಲ್ಲಿ ಕಾರು ಕಾಲುವೆಗೆ ಉರುಳಿ ಇಬ್ಬರ ಸಾವು
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಭದ್ರಾ ಕಾಲುವೆಗೆ ಕಾರು ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ(29) ಹಾಗೂ ಸಿದ್ದೇಶ್(38) ಮೃತಪಟ್ಟವರು. ದಾವಣಗೆರೆಯ ಆರು ಜನ ಮಂಗಳೂರು ಪ್ರವಾಸಕ್ಕೆ ಹೋಗಿ ವಾಪಸ್ ಬರುವಾಗ ಈ ದುರಂತ ನಡೆದಿದೆ. ನಿದ್ದೆ ಮಂಪರಿನಲ್ಲಿ




