Menu

ರಾಜ್ಯದ ಹೆಮ್ಮೆಯ ಕೆಎಸ್‌ಆರ್‌ಟಿಸಿಗೆ 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ

ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ಆಯೋಜಿಸಿದ್ದ 15ನೇ ವಿಶ್ವ ಸಂವಹನ ಸಮಾವೇಶ ಮತ್ತು ಎಕ್ಸಲೆನ್ಸ್ ಅವಾರ್ಡ್ಸ್ 2025ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ವಿಭಾಗಗಳಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ. ಈ ಸಾಧನೆಯ ಮೂಲಕ ಕೆಎಸ್‌ಆರ್‌ಟಿಸಿ ಆಧುನಿಕ ತಂತ್ರಜ್ಞಾನ, ನವೀನ ಚಟುವಟಿಕೆಗಳು ಹಾಗೂ ಪರಿಣಾಮಕಾರಿ ಸಾರ್ವಜನಿಕ ಸಂಪರ್ಕ ಕಾರ್ಯಾಚರಣೆಗಳಲ್ಲಿ ತನ್ನ ಶ್ರೇಷ್ಠತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕೆಎಸ್‌ಆರ್‌ಟಿಸಿ ಪಡೆದ ಪ್ರಶಸ್ತಿಗಳು: ಡಿಜಿಟಲ್ ಮೀಡಿಯಾ ಇನೋವೇಶನ್ (ಚಿನ್ನದ ಪದಕ)

ಮನ್​ ಕಿ ಬಾತ್​ನಲ್ಲಿ ಎಸ್‌.ಎಲ್‌. ಭೈರಪ್ಪನವರ ಸಾಹಿತ್ಯ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ!

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 126ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಇತ್ತೀಚೆಗೆ ಅಗಲಿದ ಖ್ಯಾತ ಸಾಹಿತ್ಯಗಾರ ಡಾ. ಎಸ್‌.ಎಲ್‌. ಭೈರಪ್ಪನವರ ಸಾಹಿತ್ಯ ಕೊಡುಗೆಯನ್ನು ಸ್ಮರಿಸಿದ್ದಾರೆ. ‘ಭೈರಪ್ಪನವರ ಕೃತಿಗಳು

ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: ಕರ್ನಾಟಕ ರಾಜಕೀಯ ನಾಯಕರು ಏನಂದ್ರು?

ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಅವರ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತದಲ್ಲಿ 35ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಕರ್ನಾಟಕದಲ್ಲೂ ರಾಜಕೀಯ ಅಲೆಗಳನ್ನು ಎಬ್ಬಿಸಿದ್ದು, ಇತ್ತೀಚೆಗೆ ಕರ್ನಾಟಕದಲ್ಲೂ ನಡೆದ ಕಾಲ್ತುಳಿತದ ನೆನಪುಗಳನ್ನು ಜೀವಂತಗೊಳಿಸಿದೆ. ಈ ಹಿನ್ನೆಲೆಯಲ್ಲಿ

ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ: ಡ್ಯಾಂಗಳಲ್ಲಿ ಎಷ್ಟಿದೆ ನೀರು?

ಸತತ ಮಳೆಯ ಪರಿಣಾಮವಾಗಿ ಕರ್ನಾಟಕದ ಹಲವು ಪ್ರಮುಖ ಜಲಾಶಯಗಳು ತುಂಬಿ ಹರಿಯುವ ಹಂತಕ್ಕೇರಿವೆ. ಕೆಲವೆಡೆ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದ್ದು, ಇನ್ನೂ ಕೆಲವು ಜಲಾಶಯಗಳು ಭರ್ತಿಯ ಅಂಚಿನಲ್ಲಿ ನಿಂತಿವೆ. ಸೆಪ್ಟೆಂಬರ್ 28ರ ಪರಿಸ್ಥಿತಿಯಂತೆ ರಾಜ್ಯದ ಕೆ.ಆರ್.ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ

ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ: 5 ಪ್ರಮುಖ ಕಾರಣಗಳು

ನಟ ಹಾಗೂ ರಾಜಕಾರಣಿ ವಿಜಯ್ ಶನಿವಾರ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಜಯ್ ಭಾನುವಾರ ಸಾಮಾಜಿಕ ಮಾಧ್ಯಮದ ಮೂಲಕ ಸಂತಾಪ ವ್ಯಕ್ತಪಡಿಸಿ, ಮೃತರ ಕುಟುಂಬಗಳಿಗೆ 20 ಲಕ್ಷ

ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ತುರ್ತು ಕ್ರಮಕ್ಕೆ ಸಿಎಂ ಸೂಚನೆ

ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಹದ ಸಮಸ್ಯೆ ನಿರ್ವಹಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ

ಚಿಕ್ಕಬಳ್ಳಾಪುರದಲ್ಲಿ 274 ಅಂಗನವಾಡಿ ಹುದ್ದೆಗಳ ಭರ್ತಿ: 10ನೇ ತರಗತಿ ಪಾಸ್ ಸಾಕು

ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಸೇವೆಗೆ ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಮೂಲಕ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಅರೆಸ್ಟ್‌

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ದೆಹಲಿ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ, ಪ್ರಕರಣ ಬಹಿರಂಗವಾದ ನಂತರ ತಲೆಮರೆಸಿಕೊಂಡಿದ್ದನು.

ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ್​ ಖರ್ಗೆ ಭೇಟಿ

ಕಳೆದ ಮೂರು ದಿನಗಳಿಂದ ಬೆನ್ನುಟ್ಟುತ್ತಿರುವ ಮಳೆರಾಯನ ಆರ್ಭಟಕ್ಕೆ ಉತ್ತರ ಕರ್ನಾಟಕ ಜನ ಕಂಗಾಲಾಗಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಪ್ರವಾಹ ಹಾಗೂ ಮಳೆಯಿಂದಾಗಿ ಜಾನುವಾರುಗಳ ನಷ್ಟವೂ ಸಂಭವಿಸಿದೆ.

ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಲಕ್ಷಣಗಳಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 4ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ