Wednesday, August 12, 2026
Menu

ರೈತರಿಗೆ ವಂಚಿಸಿದ ಆರೋಪಿಗಳ ರಕ್ಷಣೆಗೆ ಜಮೀರ್‌ ಪೊಲೀಸ್‌ ಮೇಲೆ ಒತ್ತಡ ಖಂಡನೀಯ: ಆರ್‌. ಅಶೋಕ

ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ZameerAhmed ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದು ಖಂಡನೀಯ. ಸಚಿವ ಸಂಪುಟ ಸದಸ್ಯರೇ ಹೀಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವುದಾದರೆ ರಾಜ್ಯದಲ್ಲಿ ಸಂವಿಧಾನ, ಕಾನೂನು ನಿಯಮಗಳು ಇದ್ದು ಪ್ರಯೋಜನವೇನು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕಿಡಿ ಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮಾನ್ಯ @siddaramaiah ನವರೇ, ಜಮೀರ್‌ ಅವರನ್ನು ಸಂಪುಟದಲ್ಲಿ ಇರಿಸಿಕೊಂಡು ಯಾವ ಸಂದೇಶ ನೀಡುತ್ತಿದ್ದೀರಿ  ಎಂದು

ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ

ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದರು. ಶ್ರೀ ಜಚನಿ‌ ಅಧ್ಯಯನ‌ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ”

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬಿಎಂಟಿಸಿ ಬಸ್‌ಗೆ ಬಲಿ

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬೆಂಗಳೂರಿನ ವಿಜಯನಗರ ಸಮೀಪದ ಹಂಪಿನಗರದಲ್ಲಿ ಬಿಎಂಟಿಸಿ ಬಸ್‌ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಲಹಂಕದಿಂದ ಹಂಪಿನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಹಂಪಿನಗರ ಬಸ್ ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದ ವೇಳೆ ಡಿಕ್ಕಿ ಹೊಡೆದು 58 ವರ್ಷದ ಮಹಿಳೆ ಮಾಲಾ ಅಸು ನೀಗಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೋಶ್‌ಗೆ ಮಧ್ಯಂತರ ಜಾಮೀನು

ರೇಣುಕಾ ಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್​ಗೆ 20 ದಿನಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಆರೋಪಿ ಪ್ರದೋಶ್ ತಂದೆ ಸುಬ್ಬಾರಾವ್ ಇತ್ತೀಚೆಗೆ ನಿಧನರಾಗಿದ್ದು, ಅವರ ಉತ್ತರಾದಿ ಕ್ರಿಯೆಗಳಿಗಾಗಿ ಜಾಮೀನು ನೀಡಬೇಕೆಂದು ಬೆಂಗಳೂರಿನ 57 ಸಿಸಿಹೆಚ್ ಕೋರ್ಟ್​​ಗೆ ಅರ್ಜಿ ಹಾಕಲಾಗಿತ್ತು. ಪರಿಶೀಲಿಸಿದ

ಮೂಡಿಗೆರೆ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಯುವತಿ ಸಾವು

ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ

ಬಾಗಲಕೋಟೆ ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಬಾಗಲಕೋಟೆಯ ನವನಗರದ 49ನೇ ಸೆಕ್ಟರ್‌ನಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲವು ದಿನಗಳಿಂದ ನೆಲಕ್ಕೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ಸಾವು ಸಂಭವಿಸಿದೆ.

ಬೆಂಗಳೂರಿನಲ್ಲಿ ಮಹಿಳೆಯ ಕೊಂದು ಶವ ಆಟೋದಲ್ಲಿಟ್ಟು ಪ್ರಿಯಕರ ಪರಾರಿ

ಬೆಂಗಳೂರಿನ ತಿಲಕ್​ನಗರ ಮುಖ್ಯರಸ್ತೆಯಲ್ಲಿ ನಾಲ್ಕು ಮಕ್ಕಳ ತಾಯಿಯನ್ನು ಹತ್ಯೆಗೈದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿದ್ದಾನೆ. ಸಲ್ಮಾ(35) ಹತ್ಯೆಯಾದ ಮಹಿಳೆ, ಪ್ರಿಯಕರ ಸುಬ್ಬುಮಣಿ ಕೊಲೆ ಆರೋಪಿ. ಆಟೋದಲ್ಲಿ ಮೃತದೇಹ ಇರುವುದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೇಸ್ ದಾಖಲಿಸಿಕೊಂಡು ತಿಲಕ್​ನಗರ

ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಕೆ ಶಿವಕುಮಾರ್ ವಾಗ್ದಾಳಿ

“ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್  ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್

ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್

ವೈದ್ಯೆ ಆತ್ಮಹತ್ಯೆ ಪ್ರಕರಣ: ಅತ್ಯಾಚಾರಿ ಆರೋಪಿ ಪಿಎಸ್‌ಐ ಪೊಲೀಸ್‌ಗೆ ಶರಣು

ಮಹಾರಾಷ್ಟ್ರದ ಸತಾರದಲ್ಲಿ ನಡೆದಿದ್ದ ವೈದ್ಯೆಯ ಆತ್ಮಹತ್ಯೆ ಪ್ರಕರಣದ ಆರೋಪಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮತ್ತೊಬ್ಬ ಆರೋಪಿಯಾದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್‌ನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು. ವೈದ್ಯೆಗೆ ಮರಣೋತ್ತರ ಪರೀಕ್ಷೆಯ ವರದಿಗಳನ್ನು ಬದಲಾಯಿಸುವಂತೆ ರಾಜಕಾರಣಿಗಳು