ಅರಸೀಕೆರೆಯಲ್ಲಿ ವಿಷಯುಕ್ತ ಮೇವು ತಿಂದು ಕುರಿಗಳ ಸಾವು
ಅರಸೀಕೆರೆ ತಾಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ವಿಷಯುಕ್ತ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ. ತುಮಕೂರಿನ ಶಿರಾದಿಂದ 800 ಕುರಿಗಳನ್ನು ಕುರಿಗಾಹಿಗಳು ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಕುರಿಗಳು ಹೊಲಗಳ ತುಂಬೆಲ್ಲಾ ಸತ್ತು ಬಿದ್ದಿವೆ. ಮೆಕ್ಕೆಜೋಳದ ಚಿಗುರು ತಿಂದು ಕುರಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮತ್ತಷ್ಟು ಕುರಿಗಳು ತೀವ್ರ ಅಸ್ವಸ್ಥಗೊಂಡಿದ್ದು, ಚಿಕಿತ್ಸೆಗಾಗಿ ಹಾಸನದಿಂದ ಮೂವರು ಪಶು ವೈದ್ಯರ ತಂಡ ಸ್ಥಳಕ್ಕೆ
ಸಿಎಂ ಸಿದ್ದರಾಮಯ್ಯನವರಿಂದ ಸಾಲದ ಬಜೆಟ್ ಮಂಡನೆ: ಆರ್ ಅಶೋಕ
ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ 1.15 ಲಕ್ಷ ಕೋಟಿ ರೂ. ಸಾಲ ಮಾಡಿ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯೂ ಜನರ ಮೇಲೆ ತೆರಿಗೆಗಳ ಹೊರೆ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ
ಬ್ರಿಮ್ಸ್ ಫೊರೆನ್ಸಿಕ್ ಸೈನ್ಸ್ ಮುಖ್ಯಸ್ಥ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಬೀದರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಫೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುನಿಲ್ ತಾಪ್ಸೆ (58) ವಸತಿಗೃಹದ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ಕಾರಣದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಅವರು ಬರೆದಿದ್ದಾರೆ ಎನ್ನಲಾದ
ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಧ್ವಂಸ: ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ಟ್ಯಾಂಕರ್ ನಾಶ
ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ಉತ್ತರ ಪರ್ಷಿಯನ್ ಕೊಲ್ಲಿಯಲ್ಲಿ ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದೆ. ಈ ದಾಳಿಯಲ್ಲಿ ನಡೆದ ಸಾವುನೋವುಗಳ ಸಂಕ್ಯೆ ಇನ್ನೂ ದೃಢಪಟ್ಟಿಲ್ಲ. ಇರಾನ್- ಇಸ್ರೇಲ್ ಮಧ್ಯೆ ಆರಂಭಗೊಂಡ ಸಂಘರ್ಷ ಅಮೆರಿಕ ಸೇನಾ
ಇರಾನ್ ನಾಯಕರಾಗುವ ಪ್ರತಿಯೊಬ್ಬರೂ ಸಾಯ್ತಾರೆ, ದಾಳಿ ಮುಂದುವರಿಕೆ ಎಂದ ಟ್ರಂಪ್
ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯುತ್ತಾರೆ, ಸೇನಾ ಕಾರ್ಯಾಚರಣೆ ಸಮಯದಲ್ಲಿ ಇರಾನ್‌ನ ನಾಯಕತ್ವದ ವ್ಯಕ್ತಿಗಳನ್ನು ಗುರಿಯಾಗಿಸುತ್ತಿದ್ದೇವೆ. ಅಮೆರಿಕ ಈಗ ಅತ್ಯಂತ ಪ್ರಬಲ ಸ್ಥಾನದಲ್ಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಇರಾನ್ ಜೊತೆಗಿನ ಸೇನಾ
ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್‌ಐ ಅಮಾನತು
ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು
ಕಡಿಮೆ ಬೆಲೆಗೆ ಚಿನ್ನದ ಆಮಿಷ: ಉದ್ಯಮಿಯಿಂದ 20 ಲಕ್ಷ ರೂ. ದೋಚಿ ಪರಾರಿ
ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ಆಮಿಷವೊಡ್ಡಿ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನು ಕರೆಸಿಕೊಂಡ ಗುಂಪೊಂದು 20 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್‌ನ ಉದ್ಯಮಿ ವಿಶ್ವಪ್ರಸಾದ್ ರೆಡ್ಡಿಯು ಕುಮಾರ್
ಕಾರಿನಲ್ಲಿ ಸಾಗಿಸುತ್ತಿದ್ದ ಹಣ ದೋಚಿದ ಅಪರಿಚಿತರು
ಬಾಗಲಕೋಟೆಯ ಮುಧೋಳ ಸಮೀಪದ ಮಂಟೂರು ಬೈಪಾಸ್ ಬಳಿ ಭಾರೀ ಪ್ರಮಾಣದ ಹಣ ಸಾಗಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದು ಅರ್ಧದಷ್ಟು ಹಣವನ್ನು ಅಪರಿಚಿತರು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಮಹೀಂದ್ರಾ ಎಸ್ಯುವಿ 700 (MH 43 CC 9820)
ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ?
ಇಸ್ರೇಲ್ ಮತ್ತು ಇರಾನ್ ಸಂಘರ್ಷ ತೀವ್ರಗೊಂಡು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ನಿರೀಕ್ಷೆಯಂತೆ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ದೇಶನದನ್ವಯ 19 ಕೆಜಿ
ಇರಾನ್-ಇಸ್ರೇಲ್ ಕದನ ವಿರಾಮಕ್ಕೆ ಯಾವುದು ಮಾರ್ಗ
ರಕ್ತಪಾತವಿಲ್ಲದೆ ಸರ್ವಾಧಿಕಾರಿಗಳನ್ನು ಮತ್ತು ಸಾಮ್ರಾಜ್ಯಶಾಹಿ ಗಳನ್ನು ಕುರ್ಚಿಯಿಂದ ಕೆಳಗಿಳಿಸಿದ ಭಾರತಕ್ಕೆ ರಕ್ತಪಾತವನ್ನು ನಿಲ್ಲಿಸುವ ಅಹಿಂಸಾ ಪರಮೋ ಧರ್ಮದ ಮಹಾಶಕ್ತಿ ಇದೆ. ಇರಾನ್ ಮತ್ತು ಇಸ್ರೇಲ್ ನಡುವಣ ಸಮರ ಸ್ಥಗಿತಕ್ಕೆ ಇದು ಪ್ರದರ್ಶಿತವಾಗಬೇಕಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿ ನಾಲ್ಕು




