Menu

ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀಗಂಧ ಕಳ್ಳತನ: ಅರಣ್ಯ ಇಲಾಖೆಯ ಬಲೆಗೆ ತಮಿಳುನಾಡಿನ ಸೆಡೆಯಾನ್ ಮತ್ತು ಗ್ಯಾಂಗ್

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ವೇಷದಲ್ಲಿ ಬಂದು ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಎರಡು ಪ್ರಕರಣಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಬೆಳಕಿಗೆ ಬಂದಿವೆ. ಈ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ. ಹನೂರು ತಾಲ್ಲೂಕಿನ ಕೊಕ್ಕಬೋರೆ ಗಸ್ತು ಪ್ರದೇಶದ ದೊಡ್ಡ ಬರೇಹಳ್ಳದ ಬಳಿ ಮೂವರು ಕಳ್ಳರು ಶ್ರೀಗಂಧದ ಮರಗಳನ್ನು ಕತ್ತರಿಸುತ್ತಿದ್ದರು.

National Film Awards: ಮೋಹನ್‌ ಲಾಲ್‌, ಶಾರುಖ್ ಖಾನ್, ರಾಣಿ ಮುಖರ್ಜಿಗೆ ಪ್ರಶಸ್ತಿ ಪ್ರದಾನ

ಭಾರತೀಯ ಸಿನಿರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಇಂದು ನವದೆಹಲಿಯಲ್ಲಿ ನೆರವೇರಿತು. 2023ರಲ್ಲಿ ಬಿಡುಗಡೆಯಾದ ಅತ್ಯುತ್ತಮ ಚಿತ್ರಗಳು, ಕಲಾವಿದರು, ನಿರ್ದೇಶಕರು ಹಾಗೂ ತಾಂತ್ರಿಕ ತಜ್ಞರನ್ನು ಗುರುತಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ

ಜಾತಿ ಗಣತಿ ಭವಿಷ್ಯ: ಹೈಕೋರ್ಟ್​​ನಲ್ಲಿ ವಾದ ಪ್ರತಿವಾದ ಹೇಗಿತ್ತು?

ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿರೋಧಿಸಿ ಕರ್ನಾಟಕ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ನೇತೃತ್ವದ ಪೀಠದಲ್ಲಿ ನಡೆಯಿತು. ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ ವಾದ ಮತ್ತು ಪ್ರತಿವಾದ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ: ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ-2025

ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ: ಮಧು ಬಂಗಾರಪ್ಪ ಸ್ಪಷ್ಟನೆ

ಕರ್ನಾಟಕದಲ್ಲಿ ಜಾತಿ ಸಮೀಕ್ಷೆ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ನಡೆಯುತ್ತಿರುವ ಸಂದರ್ಭದಲ್ಲೇ, ಶಾಲಾ ರಜೆ ವಿಸ್ತರಣೆ ಕುರಿತಾಗಿ ಉದ್ಭವವಾಗಿರುವ ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವರ್ಗದವರಿಗೂ ಸಮಾನತೆ ಸೃಷ್ಟಿಸಲು ಸಾಮಾಜಿಕ,

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ

ಜಾತಿಗಣತಿ: ನೀವು ಈ ಪ್ರಶ್ನೆಗಳಿಗೆ ಉತ್ತರ ನೀಡಲು ಸಜ್ಜಾಗಿರಿ

ಕರ್ನಾಟಕ ಸರ್ಕಾರ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ, ಅಡೆತಡೆಗಳು ಹೆಚ್ಚಾಗಿರುವ ಬೆನ್ನಲ್ಲೆ ಸಮೀಕ್ಷೆಯಲ್ಲಿ ಕೇಳಲಿರುವ 60ಕ್ಕೂ ಹೆಚ್ಚು ಪ್ರಶ್ನೆಗಳು ಚರ್ಚೆಗೆ ಗ್ರಾಸವಾಗಿವೆ. ಸಾರ್ವಜನಿಕರು ಇಷ್ಟೊಂದು ಪ್ರಶ್ನೆಗಳಿಗೆ ಉತ್ತರ ನೀಡಬಹುದೇ? ಅನಕ್ಷರಸ್ಥರಿಗೆ ಈ ಪ್ರಶ್ನೆಗಳು ಹೆಚ್ಚು ಒತ್ತಡವಾಗಬಹುದೇ ಎಂಬ

KMF SHIMUL ನೇಮಕಾತಿ 2025: 27 ಹುದ್ದೆಗೆ ಅರ್ಜಿ ಆಹ್ವಾನ, ಗರಿಷ್ಠ 99,400 ವೇತನ

ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್), ತನ್ನಲ್ಲಿ ಖಾಲಿ ಇರುವ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಂದ

ವಿಪ್ರೊ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕೋರಿ ಸಿಎಂ ಪತ್ರ

ಬೆಂಗಳೂರು  ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ, ಅದರಲ್ಲೂ ಮುಖ್ಯವಾಗಿ ಇಬ್ಲೂರು ಜಂಕ್ಷನ್ ಬಳಿ ಸಂಚಾರ ದಟ್ಟಣೆ ತಗ್ಗಿಸಲು ನಿಮ್ಮ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಅವರಿಗೆ ಪತ್ರ

ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ಜಾರಿ: ಸಂಸದ ಸುಧಾಕರ್‌

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್‌ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ