ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ
ಭಟ್ಕಳ ತಹಸೀಲ್ದಾರ್ ಕಚೇರಿಗೆ ಮಂಗಳವಾರ ಬೆಳಗ್ಗೆ ಪ್ರಬಲ ಬಾಂಬ್ ಸ್ಪೋಟವಾಗಲಿದೆ ಎಂದು ಹುಸಿ ಬೆದರಿಕೆ ಕರೆ ಬಂದಿದ್ದು, ಕಚೇರಿ ಆವರಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ‘ಗೈನಾ ರಮೇಶ್@ಔಟ್ಲುಕ್ ಡಾಟ್ ಕಾಂ’ ಎಂಬ ಈಮೇಲ್ ಮೂಲಕ ಸಂದೇಶ ಬಂದಿದ್ದು, ತಮಿಳರು ಹಾಗೂ ಪಾಕಿಸ್ತಾನಿಗಳ ಸೇಡು: ತಹಶೀಲ್ದಾರ್ ಕಚೇರಿಯಲ್ಲಿ ಶೀಘ್ರದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಲಿದೆ. ಎಲ್ಲರನ್ನೂ ಬೇಗ ತೆರವುಗೊಳಿ! ಎಂದು ಕನ್ನಡದಲ್ಲಿ ಎಚ್ಚರಿಕೆ ನೀಡಲಾಗಿದೆ. ಯಾವುದೇ ಅನಾಹುತವಾಗದಂತೆ ತಡೆಯಲು ತಹಶೀಲ್ದಾರ್ ಕಚೇರಿ ಹಾಗೂ
ರಜೆ ಸಿಗದೆ ಕೆನಡಾದಲ್ಲಿ ವರ, ಉಡುಪಿಯಲ್ಲಿ ವಧು: ವೀಡಿಯೊ ಕಾಲ್ನಲ್ಲೇ ನಿಶ್ಚಿತಾರ್ಥ
ಮಾಗಡಿ ತಾಲೂಕಿನ ಸುಹಾಸ್.ಎಸ್ ಮತ್ತು ಉಡುಪಿಯ ಮೇಘಾ ವೀಡಿಯೊ ಕಾಲ್ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವರ ಸುಹಾಸ್ ಕೆನಡಾದಲ್ಲಿದ್ದು, ರಜೆ ಸಿಗದ ಕಾರಣ ಉಡುಪಿ ಸರಸ್ವತಿ ಸಭಾಭವನದಲ್ಲಿ ವಧು ಮೇಘಾ ಮತ್ತು ಕುಟುಂಬದವರು ಹಾಜರಿದ್ದು ನಿಶ್ಚಿತಾರ್ಥ ನೆರವೇರಿತು. ವಧು-ವರರು ವಿಡಿಯೋ ಕಾನ್ಫರೆನ್ಸ್
ಮಲಪ್ರಭಾ ನದಿಯಲ್ಲಿ ಮರಳು ಲೂಟಿ: ಪಶ್ನಿಸಿದವರ ಮೇಲೆ ಹಲ್ಲೆ, ಅಸಹಾಯಕ ಪೊಲೀಸ್
ಶಾಸಕ ಭೀಮಸೇನ್ ಚಿಮ್ಮನಕಟ್ಟಿ ಕ್ಷೇತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ಮುಂದುವರಿದಿದ್ದು, ಮಲಪ್ರಭಾ ನದಿಯನ್ನು ರಾಜಾರೋಷವಾಗಿ ಬಗೆದು ಮರಳು ತೆಗೆಯಲಾಗುತ್ತಿದೆ. ಮರಳು ಲೂಟಿ ಪ್ರಶ್ನಿಸಿದವರ ವಿರುದ್ಧ ಪ್ರಭಾವಿಗಳು ಬೆದರಿಕೆಯೊಡ್ಡುತ್ತಿರುವುದಾಗಿ ಕನ್ನಡ ಪರ ಹೋರಾಟಗಾರ ಮಹೇಶ್ ವಡ್ಡರ್ ಆರೋಪಿಸಿದ್ದಾರೆ. ಪೊಲೀಸರ ಎದುರೇ ಮರಳು ಲೂಟಿಕೋರರು
ರಾಜ್ಯದ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ
ವಿಜಯನಗರ, ಧಾರವಾಡ, ಶಿವಮೊಗ್ಗ ಸೇರಿದಂತೆ ಕೆಲವೆಡೆ ಭ್ರಷ್ಟ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಹಣ ಗಳಿಕೆ ಹಾಗೂ ಹಲವಾರು ದೂರು ಹಿನ್ನೆಲೆ ವಿಜಯನಗರ ಆರೋಗ್ಯಾಧಿಕಾರಿ ಶಂಕರ್ ನಾಯ್ಕ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ
ಇಂದು ಬೆಳ್ತಂಗಡಿಯಲ್ಲಿ ಮಹಿಳಾ ನ್ಯಾಯ ಸಮಾವೇಶ, ಕೊಂದವರು ಯಾರು ಆಂದೋಲನ
ಮಹಿಳೆಯರ ಮೇಲಿನ ಹಿಂಸಾಚಾರ ಕೊನೆಗೊಂಡು ಎಲ್ಲ ಶೋಷಿತ, ದಮನಿತ ಮಹಿಳೆಯರಿಗೆ ನ್ಯಾಯ ಖಾತ್ರಿಪಡಿಸುವಂತೆ ಆಗ್ರಹಿಸಿ “ನಿರ್ಭಯಾ ದಿನ”ವಾದ ಇಂದು ಧರ್ಮಸ್ಥಳದ ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ’ ನಡೆಯುತ್ತಿದೆ. ಈ ಸಮಾವೇಶದಲ್ಲಿ ಮಹಿಳೆಯರು ಮಾತ್ರ ಭಾಗವಹಿಸುತ್ತಿದ್ದಾರೆ. ಧರ್ಮಸ್ಥಳ
ಶಬರಿಮಲೆಯಿಂದ ಬಂದು ಭರ್ಜರಿ ಪಾರ್ಟಿ: ಸ್ನೇಹಿತರಿಂದಲೇ ಕೊಲೆ
ಬ್ರಹ್ಮಾವರ ತಾಲೂಕು ಕೋಟ ಪಡುಕರೆಯಲ್ಲಿ ಶಬರಿಮಲೆ ಯಾತ್ರೆ ಮುಗಿಸಿಕೊಂಡು ಬಂದ ಯುವಕ ಬಳಿಕ ಸ್ನೇಹಿತರೊಂದಿಗೆ ಸೇರಿಕೊಂಡು ಭರ್ಜರಿ ಪಾರ್ಟಿ ನಡೆಸಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸ್ನೇಹಿತರಿಂದಲೇ ಕೊಲೆಯಾಗಿದ್ದಾನೆ. ಆಕ್ಸಿಸ್ ಬ್ಯಾಂಕ್ ಉದ್ಯೋಗಿಯಾಗಿದ್ದ ಸಂತೋಷ್ ಪೂಜಾರಿ (30) ಕೊಲೆಯಾದ
ಕೋಟಿ ರೂ. ವಿಮೆ ಹಣ ಪಡೆಯಲು ಅಮಾಯಕನನ್ನು ತನ್ನ ಕಾರಲ್ಲಿ ಸುಟ್ಟು ಹಾಕಿದಾತ ಅರೆಸ್ಟ್
ಮಹಾರಾಷ್ಟ್ರದ ಲಾತೂರಿನಲ್ಲಿ ಒಂದು ಕೋಟಿ ರೂ. ವಿಮೆ ಹಣ ಪಡೆಯಲು ಲಿಫ್ಟ್ ಕೊಡೋದಾಗಿ ನಂಬಿಸಿ ವ್ಯಕ್ತಿಯೊಬ್ಬನನ್ನು ಕರೆದೊಯ್ದು ಕಾರಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬ್ಯಾಂಕ್ ವಸೂಲಾತಿ ಏಜೆಂಟ್ ಗಣೇಶ್ ಚೌಹಾಣ್ ಬಂಧಿತ ಆರೋಪಿ. ಆತ ಒಂದು ಕೋಟಿ ರೂ.
ಸಿಡ್ನಿ ಬೀಚ್ ಶೂಟರ್ಸ್ ಹಣ್ಣಿನ ಅಂಗಡಿ ವ್ಯಾಪಾರಿ ಅಪ್ಪ, ನಿರುದ್ಯೋಗಿ ಮಗ!
ಆಸ್ಟ್ರೇಲಿಯಾದ ರಾಜಧಾನಿ ಸಿಡ್ನಿಯ ಬೋಂಡಿ ಕಡಲ ತೀರದಲ್ಲಿ ಯಹೂದಿ ಹನುಕ್ಕಾ ಆಚರಣೆಯ ವೇಳೆ ಯದ್ವಾತದ್ವಾ ಗುಂಡು ಹಾರಿಸಿ 15 ಮಂದಿ ಕೊಲೆಗೈದ ಶೂಟರ್ ಗಳು ತಂದೆ-ಮಗ ಆಗಿದ್ದು, ತಂದೆ ಹಣ್ಣಿನ ಅಂಗಡಿ ವ್ಯಾಪಾರಿ ಆಗಿದ್ದರೆ, ಮಗ ನಿರುದ್ಯೋಗಿ ಎಂಬುದು ತಿಳಿದು ಬಂದಿದೆ.
ವೋಟ್ ಚೋರಿ ನೆಪದಲ್ಲಿ ಸುಳ್ಳು ಕಥೆ ಸೃಷ್ಟಿ: ಪ್ರತಿಪಕ್ಷಗಳ ವಿರುದ್ಧ ಹೆಚ್.ಡಿ. ದೇವೇಗೌಡ ವಾಗ್ದಾಳಿ
ನವದೆಹಲಿ: ವೋಟ್ ಚೋರಿ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ಸುಳ್ಳಿನ ಸಂಕಥನ ಸೃಷ್ಟಿಸುತ್ತಿರುವ ಪ್ರತಿಪಕ್ಷಗಳು ಭವಿಷ್ಯದಲ್ಲಿ ಘೋರ ಪರಿಣಾಮ ಅನುಭವಿಸುತ್ತವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಗಂಭೀರ ಎಚ್ಚರಿಕೆ ನೀಡಿದರು. ರಾಜ್ಯಸಭೆಯಲ್ಲಿ
ಪತ್ನಿ ಸಮಾಧಿ ಪಕ್ಕ ಮಣ್ಣಾದ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಲಿಂಗಾಯತ- ವೀರಶೈವ ಸಂಪ್ರದಾಯದಂತೆ ನೆರವೇರಿತು. ವಯೋ ಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಕಲ್ಲೇಶ್ವರ ಮಿಲ್ ಆವರಣದಲ್ಲಿ ಪತ್ನಿ ಸಮಾಧಿ ಪಕ್ಕ ಮಣ್ಣು




