ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ
ಕಾಂಗ್ರೆಸ್ನ ಹಿರಿಯ ನಾಯಕ, ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಭಾನುವಾರ ನಿಧನರಾದರು. ಅವರಿಗೆ 94 ವರ್ಷ ಆಗಿತ್ತು. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಅವರ ನಿಧನ ಪ್ರಯುಕ್ತ ಗೌರವಾರ್ಥವಾಗಿ ಡಿ. 15 ರಂದು ದಾವಣಗೆರೆ ನಗರದ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಬೆಂಗಳೂರಿನಿಂದ ಶಾಮನೂರರ ಪಾರ್ಥಿವ ಶರೀರ
ರಾಮನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ರಾಮನಗರದ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ರೈತ ಪುಟ್ಟಮಾದೇಗೌಡ (48) ಆನೆ ದಾಳಿಗೆ ಬಲಿಯಾದವರು. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಾದೇಗೌಡ ಸ್ಥಳದಲ್ಲೇ ಅಸು ನೀಗಿದ್ದಾರೆ. ಬನ್ನೇರುಘಟ್ಟ ಅರಣ್ಯ
ಮಗಳು ಮಾದಕ ವ್ಯಸನಿಯೆಂದು ತಿಳಿದ ತಾಯಿ ಆತ್ಮಹತ್ಯೆ ಯತ್ನ
ಆಂಧ್ರಪ್ರದೇಶದ ಗುಂಟೂರಿನಲ್ಲಿ ಮಗಳು ಮಾದಕ ವ್ಯಸನಿ ಎಂಬುದನ್ನು ತಿಳಿದುಕೊಂಡ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮಗಳಿಗೆ ಡ್ರಗ್ಸ್ ಕೊಡುತ್ತಿದ್ದ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ತಾಯಿ ಆಘಾತಕ್ಕೊಳಗಾಗಿದ್ದರು. ಮಗಳು ಓದುತ್ತಿದ್ದ ಕಾಲೇಜಿನಲ್ಲಿ ಓದುತ್ತಿರುವ ಹಿರಿಯ ವಿದ್ಯಾರ್ಥಿಯೊಬ್ಬ ಇನ್‌ಸ್ಟಾಗ್ರಾಮ್
ಮತಕಳವು ವಿರುದ್ಧ ಕಾಂಗ್ರೆಸ್ ಹೋರಾಟ, ವಾಹನಗಳ ದೆಹಲಿ ಪ್ರವೇಶಕ್ಕೆ ಬಿಜೆಪಿ ಸರ್ಕಾರ ತಡೆ: ಡಿಕೆ ಶಿವಕುಮಾರ್ ಆಕ್ರೋಶ
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ , ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶವನ್ನು ಬಿಜೆಪಿ ಸರ್ಕಾರ ತಡೆಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿ
ಬೇರೆ ಯುವತಿ ಜೊತೆ ಮದುವೆ: ಮಂಟಪಕ್ಕೆ ಬಂದು ತನ್ನನ್ನೇ ಮದುವೆಯಾಗುವಂತೆ ಹಠ ಹಿಡಿದ ಪ್ರೇಯಸಿ
ಚಿಕ್ಕಮಗಳೂರಿನ ದೊಡ್ಡೇಗೌಡ ಕನ್ವೆನ್ಷನ್ ಹಾಲ್‌ನಲ್ಲಿ ಯುವಕ ಮದುವೆಯಾಗುತ್ತಿದ್ದಾಗ ಮಂಟಪಕ್ಕೆ ಬಂದ ಆತನ ಪ್ರೇಯಸಿ, ನಾನು ಇವನನ್ನೇ ಮದುವೆಯಾಗಬೇಕು.ಮದುವೆ ಆಗುವವರೆಗೂ ನಾನು ಇಲ್ಲಿಂದ ಹೋಗುವುದಿಲ್ಲ, ವಿಷ ಕುಡಿದು ಸಾಯುತ್ತೇನೆ ಎಂದು ಗಲಾಟೆ ಮಾಡಿದ್ದಾಳೆ. ಈತ 10 ವರ್ಷ ಪ್ರೀತಿಸಿ ಮೋಸ ಮಾಡಿದ್ದಾನೆಂದು ಯುವತಿ
ಅಕ್ರಮ ಸಂಬಂಧ: ದೊಡ್ಡಬಳ್ಳಾಪುರದಲ್ಲಿ ಯುವಕನ ಕೊಲೆಗೆ ಯತ್ನ
ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರ ಗ್ರಾಮದಲ್ಲಿ ಅಕ್ರಮ ಸಂಬಂಧ ಹಿನ್ನೆಲೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಲು ಯತ್ನಿಸಲಾಗಿದೆ. ಹಲ್ಲೆಗೊಳಗಾದ ಕಾರ್ತಿಕ್ (26) ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಹಲ್ಲೆ ವೇಳೆ ತಡೆಯಲು ಹೋದ ಯುವಕನ
ನಾಲ್ಕು ರಾಜ್ಯ ಪೊಲೀಸ್‌ಗೆ ಬೇಕಾಗಿದ್ದ ಕಳ್ಳ ಕೊನೆಗೂ ಅರೆಸ್ಟ್
ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಜೀವದ ಹಂಗು ತೊರೆದು ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಕನಕಪುರದ ಮುಳ್ಳಳ್ಳಿ ನಿವಾಸಿ ಶಿವಕುಮಾರ್(35) ಬಂಧಿತ. ಮೂರು ಬೈಕ್ ಸೇರಿದಂತೆ 130 ಗ್ರಾಂ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ
ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ ಕಲಾವಿದೆ ಮನೆಯಿಂದ ಚಿನ್ನ ಕದ್ದವರ ಬಂಧನ
ಚಿತ್ರನಟಿ, ರಂಗಭೂಮಿ ಕಲಾವಿದೆಯ ರಾಜ್ಯ ಪ್ರಶಸ್ತಿ ಚಿನ್ನದ ಪದಕ ಸೇರಿ 90 ಗ್ರಾಂ ಚಿನ್ನ ದೋಚಿದ್ದ ಕಳ್ಳರನ್ನು ತಿಪಟೂರು ನಗರ ಪೊಲೀಸರು ಬಂಧಿಸಿದ್ದಾರೆ. ಶಂಕರ್ (26), ಗುರುರಾಜು ( 33), ಮನೋಜ್ ( 18) ಬಂಧಿತರು. ತಿಪಟೂರಿನ ವಿಜಯನಗರದಲ್ಲಿ ವಾಸವಿದ್ದ ನಟಿ, ರಂಗಭೂಮಿ
ವಿಮಾನದಲ್ಲಿ ಅಮೆರಿಕ ಯುವತಿಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್
ಗೋವಾದಿಂದ ನವದೆಹಲಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಮೆರಿಕದ ಯುವತಿಯೊಬ್ಬರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಖಾನಾಪುರದ ಮಾಜಿ ಶಾಸಕಿ ಹಾಗೂ ಗೋವಾದ ಎಐಸಿಸಿ ಕಾರ್ಯದರ್ಶಿ ಡಾ.ಅಂಜಲಿ ನಿಂಬಾಳ್ಕರ್ ವೈದ್ಯಕೀಯ ನೆರವು ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಡಾ.ಅಂಜಲಿ ನಿಂಬಾಳ್ಕರ್ ಅವರ ಮಾನವೀಯ ಸೇವೆಯನ್ನು
ಕುಡಿದ ಮತ್ತಿನಲ್ಲಿ ಬಸ್ ಕಳವು: ಆನೇಕಲ್‌ನಲ್ಲಿ ವಿದ್ಯುತ್ ಕಂಬ, ಪಾದಚಾರಿಗೆ ಗುದ್ದಿದ ಬಸ್
ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ನಾಲ್ವರು ಬಸ್ ಕದ್ದು ಪರಾರಿಯಾಗಲು ಯತ್ನಿಸಿದಾಗ ಬಸ್ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿದೆ. ಬಸ್ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ




