Menu

ಹಾಸನಾಂಬೆ ಜಾತ್ರೆ: ಸಾಧ್ಯವಾದರೆ ಅ.18ರೊಳಗೆ ದರ್ಶನ ಪಡೆಯಲು ಸಚಿವ ಕೃಷ್ಣ ಭೈರೇಗೌಡ ಮನವಿ

ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಶ್ಲಾಘಿಸಿದ್ದಾರೆ. ₹ 1000 ಟಿಕೆಟ್ ದರ್ಶನವು ದಿನವಿಡೀ 10 ನಿಮಿಷಕ್ಕಿಂತ ಕಡಿಮೆ ಸಮಯದಲ್ಲಿ, ₹ 300 ಟಿಕೆಟ್ ದರ್ಶನವು 10 ರಿಂದ 30 ನಿಮಿಷಗಳಲ್ಲಿ ಪೂರ್ಣಗೊಳ್ಳುತ್ತಿದೆ. ಧರ್ಮ ದರ್ಶನವು 30 ನಿಮಿಷಗಳಿಂದ ಗರಿಷ್ಠ 2 ಗಂಟೆ

ಮುನಿರತ್ನರನ್ನು ಶಾಸಕರಾಗಿ ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ:  ಡಿಕೆ ಶಿವಕುಮಾರ್

ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ  ಬೆಂಗಳೂರು ನಡಿಗೆ

ಯಲ್ಲಾಪುರದಲ್ಲಿ ಶೀಲ ಶಂಕಿಸಿ ಬೆಂಕಿ ಹಚ್ಚಿದ ಗಂಡ: ಏಳು ದಿನ ನರಳಿ ಮೃತಪಟ್ಟ ಪತ್ನಿ

ಪತ್ನಿಯ ಶೀಲ ಶಂಕಿಸಿ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಏಳು ದಿನಗಳ ಬಳಿಕ ಆಕೆ ಮೃತಪಟ್ಟಿರುವ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಕಿರವತ್ತಿ ಬೊಂಬಡಿಕೊಪ್ಪದಲ್ಲಿ ನಡೆದಿದೆ. ಪತಿ ಬಾಬು ಎಕ್ಕು ಖಾತ್ರೋಟ ಎಂಬಾತ ಪತ್ನಿ ಜನ್ನಿ ಬಾಬು ಖಾತ್ರೋಟ

ಬೆಂಗಳೂರಲ್ಲಿ ಬ್ರಾಂಡೆಡ್‌ ಕಂಪೆನಿಗಳ ಹೆಸರಲ್ಲಿ ನಕಲಿ ಷೂ ಮಾರಾಟ ದಂಧೆ

ಪಂಜಾಬ್ ನ ಲೂಧಿಯಾನದಿಂದ ನಾನಾ ಬ್ರಾಂಡೆಡ್‌ ಕಂಪೆನಿಗಳ ಹೆಸರಿನಲ್ಲಿ ಬೆಂಗಳೂರಿಗೆ ನಕಲಿ ಷೂಗಳು ಸರಬರಾಜಾಗುತ್ತಿದ್ದು, ಗ್ರಾಹಕರಿಗೆ ವಂಚಿಸಲಾಗುತ್ತಿದೆ.  50% 60% ರಿಯಾಯಿತಿ ಎಂದು ಆಫರ್ ಮುಂದಿಟ್ಟು ಐದು ಸಾವಿರದ ಷೂ ಐನೂರಕ್ಕೆ ಸೇಲ್ ಅಂತ ಗ್ರಾಹಕರನ್ನು ನಂಬಿಸಿ ನಕಲಿ ಚಪ್ಪಲಿ, ಷೂ

ಗೌರಿಬಿದನೂರಿನಲ್ಲಿ ತಂದೆಯ ಸಾವಿನಿಂದ ನೊಂದ ಮಗಳೂ‌ ಆತ್ಮಹತ್ಯೆ

ಚಿಕ್ಕಬಳ್ಳಾಪುರದ ಗೌರಿಬಿದನೂರು ನಗರದ ನಾಗಿರೆಡ್ಡಿ ಬಡಾವಣೆಯ ಯುವತಿ ಸ್ವರ್ಣ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಕೆ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮನೆಗೆ ಬಂದಿದ್ದ ಸ್ವರ್ಣರನ್ನು ತಾಯಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ

ಹಣಕಾಸು ವ್ಯವಹಾರ: ವ್ಯಕ್ತಿಯ ಕಿಡ್ನ್ಯಾಪ್ ಮಾಡಿ ದೌರ್ಜನ್ಯ

ಬೆಂಗಳೂರಿನ ಕೋರಮಂಗಲದಲ್ಲಿ ಹಣಕಾಸು ವಿಚಾರಕ್ಕೆ ಸಂಬಂಧಿಸಿದ ಮನಸ್ತಾಪ ತೀವ್ರಗೊಂಡು ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿದ ಗ್ಯಾಂಗ್ ಮರ್ಮಾಂಗಕ್ಕೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದಿದೆ. ಗ್ಯಾಂಗ್‌ನಲ್ಲಿದ್ದವರು ಇಂಜೆಕ್ಷನ್ ಚುಚ್ಚಿ ವ್ಯಕ್ತಿಗೆ ಚಿತ್ರಹಿಂಸೆ ನೀಡಿದ್ದು, ಆತ ಕಾರಿನಲ್ಲಿ ಜೋರಾಗಿ ಕೂಗಿದ ಹಿನ್ನಲೆ ಬಚಾವಾಗಿದ್ದಾನೆ.  ಸಗಾಯ್

ಜೆಪಿ ಪಾರ್ಕ್‌ನಲ್ಲಿ ನಡಿಗೆ, ಸಾರ್ವಜನಿಕ ಅಹವಾಲು ಆಲಿಸಿದ ಡಿಕೆ ಶಿವಕುಮಾರ್‌, ನನಗೆ ಆಹ್ವಾನವಿಲ್ಲವೆಂದು ಮುನಿರತ್ನ ಕಿರಿಕ್‌

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ನಾಗರಿಕರಿಗೆ ಸ್ಪಂದಿಸುವ ಉದ್ದೇಶದಿಂದ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್  “ಬೆಂಗಳೂರು ನಡಿಗೆ” ಕಾರ್ಯಕ್ರಮದಡಿ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಗೊಳಪಡುವ ಮತ್ತಿಕೆರೆಯ ಜಯಪ್ರಕಾಶ್ ನಾರಾಯಣ್ ಉದ್ಯಾನವನದಲ್ಲಿ ನಾಗರಿಕರ ಜೊತೆ ನಡಿಗೆಯಲ್ಲಿ ಪಾಲ್ಗೊಂಡರು.

ಬಸವಕಲ್ಯಾಣದಲ್ಲಿ ಆಟವಾಡುತ್ತಿದ್ದ ಮಗು ಬಾವಿಗೆ ಬಿದ್ದು ಸಾವು

ಬೀದರ್‌ನ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೊನಿಯಲ್ಲಿ ಆಟ ಆಡುವಾಗ ಬಾವಿಗೆ ಬಿದ್ದು ಆರು ವರ್ಷದ ಮಗು ಮೃತಪಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು ಶೇಖ್ ನುಸ್ತಕಿಮ್ ಅಕ್ಬರಲಿ ಎಂಬ ಮಗು ಅಸು

ಋತುಚಕ್ರ ರಜೆ ನೀತಿ: ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ

ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಹೇಳಿದರು. ಋತುಚಕ್ರ

ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರು ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ