Menu

ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣವಾಗಿ ನೆಲಸಮಗೊಂಡು, ಹಲವು ಹಳ್ಳಿಗಳಲ್ಲಿ ಭಾರೀ ಹಾನಿ ಉಂಟಾಗಿದೆ, ಒಂದೇ ಗ್ರಾಮದಲ್ಲಿ 30 ಮಂದಿ ಅಸು ನೀಗಿದ್ದಾರೆ.

Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ

ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ

ಬೇಗೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಘವೇಂದ್ರ ಲೇಔಟ್ ನಲ್ಲಿ ಸ್ನೇಹಿತರ ನಡುವೆ ಹಣಕಾಸು ವಿಚಾರಕ್ಕೆ ಉಂಟಾಗಿದ್ದ  ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಉತ್ತರಪ್ರದೇಶ ಮೂಲದ  ದೇವೇಂದ್ರ ಸಿಂಗ್ ಮೃತಪಟ್ಟವರು, ಉತ್ತರಪ್ರದೇಶದ  ಮೇವಾ  ಕೊಲೆ ಆರೋಪಿ.  ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು

ಬೆಂಗಳೂರಿನಲ್ಲಿ 26 ರ ಮಹಿಳೆ, 52 ವರ್ಷದ ಪುರುಷ ಲಿವ್‌ ಇನ್‌ ಟುಗೆದರ್‌: ಹೊಸ ಸ್ನೇಹಿತನೊಂದಿಗಿದ್ದ ಮಹಿಳೆಯ ಕೊಲೆಗೈದ ಪಾರ್ಟ್‌ನರ್‌

ಬೆಂಗಳೂರಿನಲ್ಲಿ  26 ವರ್ಷದ ಮಹಿಳೆಯ ಜೊತೆ 52 ವರ್ಷದ ಪುರುಷ ಸಹಜೀವನ ನಡೆಸುತ್ತಿದ್ದು, ಈ ಸಂಬಂಧವು ಮಹಿಳೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಪೆಟ್ರೊಲ್ ಎರಚಿ ಮಹಿಳೆಯನ್ನು ಸಂಗಾತಿಯಾಗಿದ್ದ ವ್ಯಕ್ತಿ ಬರ್ಬರವಾಗಿ ಸಾಯಿಸಿದ್ದಾನೆ. ವನಜಾಕ್ಷಿ ಕೊಲೆಯಾದ ಮಹಿಳೆ, ಕ್ಯಾಬ್ ಚಾಲಕ ವಿಠಲ ಕೊಲೆಗಾರನಾಗಿದ್ದು,

ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್‌ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ

ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ,

ಓಣಂ: ಬೆಂಗಳೂರಿನಿಂದ ಕೇರಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಓಣಂ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರು-ಕೇರಳ ಮಧ್ಯೆ ಕೆಎಸ್‌ಆರ್‌ಟಿಸಿಯಿಂದ 90 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ಮೈಸೂರು ರಸ್ತೆ ಮತ್ತು ಶಾಂತಿನಗರ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರಿನ ಪ್ರಮುಖ ಟರ್ಮಿನಲ್‌ಗಳಿಂದ ಹೊರಡಲಿವೆ. ಹಬ್ಬದ ಮುಗಿದು

ವೃತ್ತಿಪರ ಕೋರ್ಸ್‌ಗಳ ಪ್ರವೇಶ 2 ನೇ ಸುತ್ತಿನ ಸೀಟು ಪ್ರಕಟ: ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ

ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ ಗಳ ಎರಡನೇ ಸುತ್ತಿನ

ಲಕ್ನೋ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಏಳು ಮಂದಿ ಸಾವು

ಲಕ್ನೋದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ  ಕಾರ್ಖಾನೆ ಮಾಲೀಕ ಆಲಂ  ಸೇರಿ ಏಳು ಮಂದಿ ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆತೆರಳಿ  ಬೆಂಕಿಯನ್ನು ನಿಯಂತ್ರಿಸಿದ್ದಾರೆ.  ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದ ಆಲಂ, ಅವರ ಪತ್ನಿ ಮತ್ತು

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ, ಕರಾವಳಿಯಲ್ಲಿ ವ್ಯಾಪಕ ವರ್ಷಧಾರೆ

ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್ 4 ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಕರಾವಳಿ