ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ತಲೆಮರೆಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಅರೆಸ್ಟ್
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ದೆಹಲಿ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ, ಪ್ರಕರಣ ಬಹಿರಂಗವಾದ ನಂತರ ತಲೆಮರೆಸಿಕೊಂಡಿದ್ದನು. ಇವನ ವಿರುದ್ಧ 2009 ಮತ್ತು 2016ರಲ್ಲಿ ಸಹ ಲೈಂಗಿಕ ಕಿರುಕುಳದ ದೂರುಗಳು ದಾಖಲಾಗಿದ್ದವು. ಸ್ವಾಮೀಜಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ
ಕಳೆದ ಮೂರು ದಿನಗಳಿಂದ ಬೆನ್ನುಟ್ಟುತ್ತಿರುವ ಮಳೆರಾಯನ ಆರ್ಭಟಕ್ಕೆ ಉತ್ತರ ಕರ್ನಾಟಕ ಜನ ಕಂಗಾಲಾಗಿದ್ದಾರೆ. ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಪ್ರವಾಹ ಹಾಗೂ ಮಳೆಯಿಂದಾಗಿ ಜಾನುವಾರುಗಳ ನಷ್ಟವೂ ಸಂಭವಿಸಿದೆ.
ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಲಕ್ಷಣಗಳಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 4ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ
ನಟ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ, 30ಕ್ಕೂ ಹೆಚ್ಚು ಮಂದಿ ಸಾವು!
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ನಟ ವಿಜಯ್ ನೇತೃತ್ವದ ಬೃಹತ್ ರ‍್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು. ಜನಸಮೂಹ ನಿಯಂತ್ರಿಸಲಾಗದೆ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿದೆ. ಈ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 860 ಕೋಟಿ ಮಂಜೂರು: ದಿನೇಶ್ ಗುಂಡುರಾವ್
ಬಡವರ ಬಗ್ಗೆ ಚಿಂತಿಸುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಜಾತಿಗಳ ನಡುವೆ ವಿಷಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡುತ್ತದೆ ಮತ್ತು ಅದು ಕೆಲಸಕ್ಕೆ
ಬಿಡದಿಯಲ್ಲಿ ಭಾರತದ ಪ್ರಪ್ರಥಮ ಎಐ ಸಿಟಿ ನಿರ್ಮಾಣ: ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಹೋಬಳಿಯ 2000 ಎಕರೆ ಜಾಗದಲ್ಲಿ ದೇಶದ ಮೊದಲ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ವಿಶ್ವದರ್ಜೆಯ ಎ.ಐ ನಗರ (ಎ.ಐ ಸಿಟಿ) ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ರಾಜ್ಯ ಘಟಕ ಬೆಂಬಲ ಸೂಚಿಸಿದೆ. ಇಂದು
ಬಿಗ್ ಬಾಸ್‌ಗೆ ಸೆಲೆಕ್ಟ್ ಮಾಡದಿದ್ರೆ ಬಾಂಬ್ ಇಡುತ್ತೇನೆ ಎಂದು ಪೊಲೀಸರ ಅತಿಥಿಯಾದ ಯುವಕ!
‘ಬಿಗ್ ಬಾಸ್ ಸೀಸನ್ 12’ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದರೆ ಬಿಗ್ ಬಾಸ್ ಮನೆಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿ ರೀಲ್ಸ್ ಮಾಡಿದ್ದ ಯುವಕ ಇದೀಗ ಕುಂಬಳಗೋಡು ಪೊಲೀಸರ ವಶದಲ್ಲಿದ್ದಾನೆ. ‘Mummy-Ashok16’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ಯುವಕ ರೀಲ್ಸ್ ಪೋಸ್ಟ್ ಮಾಡಿದ್ದು,
ರಸ್ತೆ ಗುಂಡಿ ಮುಚ್ಚಲು ಗಡುವು ಕೊಟ್ಟ ಸಿಎಂ; ಸಿಟಿ ರೌಂಡ್ಸ್ ವೇಳೆ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ
ರಸ್ತೆಗಳಲ್ಲಿ ಹೆಚ್ಚುತ್ತಿರುವ ಗುಂಡಿಗಳನ್ನು ಕೂಡಲೇ ದುರಸ್ತಿಗೊಳಿಸಿ ಸಂಚಾರ ಯೋಗ್ಯವಾಗಿಸುವಂತೆ ಸೂಚನೆ ನೀಡಲಾಗಿದ್ದು, ಇದಕ್ಕಾಗಿ ಒಂದು ತಿಂಗಳ ಗಡುವು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ,
ಅಕ್ಟೋಬರ್ 1ರಿಂದ ಜಾರಿಯಾಗಲಿರುವ 7 ಪ್ರಮುಖ ನಿಯಮಗಳು
ಅಕ್ಟೋಬರ್ ತಿಂಗಳು ಕೇವಲ ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಅದರೊಂದಿಗೆ ಹಲವು ಹೊಸ ನಿಯಮಗಳು ಜಾರಿಯಾಗಲಿವೆ. ಈ ಬದಲಾವಣೆಗಳು ಜನರ ದೈನಂದಿನ ಜೀವನ, ಖರ್ಚು ಹಾಗೂ ಆರ್ಥಿಕ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಎಲ್‌ಪಿಜಿ ಗ್ಯಾಸ್ ದರದಿಂದ ಹಿಡಿದು
ಜಾತಿಗಣತಿ ವೇಳೆ ಮಾಹಿತಿ ನೀಡೋದು ಕಡ್ಡಾಯವಲ್ಲ: ಸರ್ಕಾರ ಸ್ಪಷ್ಟನೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಿದೆ. ಆಯೋಗವು ಸಮೀಕ್ಷೆಯಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದ್ದು, ಯಾವುದೇ ವ್ಯಕ್ತಿ ಅಥವಾ ಕುಟುಂಬ ಬಲವಂತದಿಂದ ಮಾಹಿತಿ ನೀಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್




