Saturday, November 07, 2026
Menu

ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆಗಳಲ್ಲಿ ಮಂಗಳವಾರ ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆಯ ಅಧಿಕಾರಿ ಪುಟ್ಟಸ್ವಾಮಿ, ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯಇಂಜಿನಿಯರ್ ಪ್ರೇಮ್ ಸಿಂಗ್. ಮೈಸೂರು ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್‌ಸ್ಪೆಕ್ಟರ್ ರಾಮಸ್ವಾಮಿ ಸಿ., ಧಾರವಾಡ ಕರ್ನಾಟಕ ವಿವಿಯ ಸಹಪ್ರಾಧ್ಯಾಪಕ ಸುಭಾಶ್ ಚಂದ್ರ. ಧಾರವಾಡ- ಪ್ರಾ.ಪಶು ಕ್ಲಿನಿಕ್ ಹುಲಿಗೋಲ್‌ನ ಹಿರಿಯ ಪರೀಕ್ಷಕ

ಬೆಂಗಳೂರಿನಲ್ಲಿ ಸಹೋದ್ಯೋಗಿಯಿಂದ ಅತ್ಯಾಚಾರ: ಮಹಿಳಾ ಪೈಲಟ್‌ ಆರೋಪ

ಬೆಂಗಳೂರಿನಲ್ಲಿ ಲೇಓವರ್ ಸಮಯದಲ್ಲಿ ಪೈಲಟ್ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಚಾರ್ಟರ್ಡ್ ವಿಮಾನದ ಕರ್ತವ್ಯ ವೇಳೆ ಲೇಓವರ್‌ನಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಮೊದಲು ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಬೆಂಗಳೂ ರಿಗೆ ವರ್ಗಾಯಿಸಲಾಗಿದೆ.

ಸಿದ್ದರಾಮಯ್ಯ ಹೇಳಿದ ಮೇಲೆ ಅದೇ ವೇದವಾಕ್ಯ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ: ಡಿಕೆ ಶಿವಕುಮಾರ್

“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿಕೆ ಶಿವಕುಮಾರ್

ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್

ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು

ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.

ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಕೆ ಶಿವಕುಮಾರ್ ತಿರುಗೇಟು

ಶಿಡ್ಲಘಟ್ಟ: ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಯಾದಾಗ ಅವರು ಎಷ್ಟು ಸಾವಿರ ಕೋಟಿ

ಅಯೋಧ್ಯೆಯ ರಾಮಮಂದಿರ ಮೇಲೆ ಕೇಸರಿ ಧ್ವಜ ಹಾರಿಸಲಿರುವ ಮೋದಿ!

ನವದೆಹಲಿ/ಅಯೋಧ್ಯೆ: ಅಯೋಧ್ಯೆಯ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದೇವಾಲಯದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಲಿದ್ದಾರೆ. ಭಗವಾನ್ ರಾಮನ ತೇಜಸ್ಸು ಮತ್ತು ಶೌರ್ಯವನ್ನು ಸಂಕೇತಿಸುವ ವಿಕಿರಣ ಸೂರ್ಯನ ಚಿತ್ರವುಳ್ಳ 10 ಅಡಿ ಎತ್ತರ ಮತ್ತು

ಸ್ಮೃತಿ ಮಂದಾನ ತಂದೆ, ಭಾವಿ ಪತಿ ಆಸ್ಪತ್ರೆಗೆ ದಾಖಲು: ಮದುವೆ ಮುಂದೂಡಿಕೆ?

ಭಾರತ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಾನ ತಂದೆ ಮದುವೆ ಸಮಾರಂಭದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ವರ ಹಾಗೂ ಪ್ರಿಯಕರ ಪಾಲಾಷ್ ಮುಚ್ಚಲ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಒಂದು ವಾರದ ಮದುವೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಭಾನುವಾರ ತಡರಾತ್ರಿ

ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ

ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

2ನೇ ಟೆಸ್ಟ್: ಜಾನ್ಸೆನ್ ದಾಳಿಗೆ ಭಾರತ 201 ರನ್ ಗೆ ಆಲೌಟ್

ಗುವಾಹತಿ: ಮಧ್ಯಮ ವೇಗಿ ಮಾರ್ಕೊ ಜಾನ್ಸೆನ್ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 201 ರನ್ ಗಳ ಅಲ್ಪ ಮೊತ್ತಕ್ಕೆ ಕುಸಿದಿದೆ. ಗುವಾಹತಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಸೋಮವಾರ