Menu

ಇಂದು ಆರ್ ಸಿಬಿ- ಕೆಕೆಆರ್ ಮುಖಾಮುಖಿ: ಪ್ಲೇಆಫ್ ಮೇಲೆ ಆರ್ ಸಿಬಿ ಕಣ್ಣು!

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ವಾತಾವರಣದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಟೂರ್ನಿ ಇಂದಿನಿಂದ ಪುನರಾರಂಭವಾಗಲಿದೆ. ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಣ ಪಂದ್ಯ ನಡೆಯಲಿದೆ. ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಹೇಳಿದ ನಂತರ ಕೊಹ್ಲಿ ಆಡುತ್ತಿರುವ ಮೊದಲ ಪಂದ್ಯವಾಗಿರುವ ಕಾರಣ ಕೊಹ್ಲಿ ಪ್ರಮುಖ ಆಕರ್ಷಣೆ ಆಗಲಿದ್ದಾರೆ. ಐಪಿಎಲ್

ಭಾರತದ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಇಬ್ಬರು ಐಸಿಸ್ ಉಗ್ರರ ಬಂಧನ

ನವದೆಹಲಿ: ಮಹಾರಾಷ್ಟ್ರದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಇಬ್ಬರು ಭಯೋತ್ಪಾದಕರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಇಬ್ಬರನ್ನೂ ಇಂಡೋನೇಷ್ಯಾದಲ್ಲಿ ಬಂಧಿಸಲಾಗಿದೆ. ಇಬ್ಬರನ್ನು ಭಾರತಕ್ಕೆ ಕಳುಹಿಸಲಾಗಿದ್ದು, ಮುಂಬೈನಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ

ಸಲ್ಮಾನ್ ರಶ್ಮಿ ಮೇಲೆ ಹಲ್ಲೆ ನಡೆಸಿ ಕಣ್ಣಿಗೆ ಹಾನಿ ಮಾಡಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ!

ನ್ಯೂಯಾರ್ಕ್: ಭಾರತ ಮೂಲದ ಹಿರಿಯ ಲೇಖಕ ಸಲ್ಮಾನ್ ರಶ್ದಿ ಮೇಲೆ ಹಲ್ಲೆ ನಡೆಸಿ ಒಂದು ಕಣ್ಣು ಕಾಣದಂತೆ ಮಾಡಿದ್ದ ಆರೋಪಿಗೆ 25 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 2022ರಲ್ಲಿ ನ್ಯೂಯಾರ್ಕ್ ಲೆಕ್ಚರರ್ ವೇದಿಕೆಗೆ ತೆರಳುವಾಗ ಸಲ್ಮಾನ್ ರಶ್ದಿ ಮೇಲೆ ಚಾಕುವಿನಿಂದ ಹಲ್ಲೆ

ಬಿಡದಿ ಟೌನ್ ಶಿಪ್ ಯೋಜನೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಆರ್.ಅಶೋಕ

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಎಂಬುದು ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಮಾಡುತ್ತಿರುವ ಭೂ ಸ್ವಾಧೀನ ವಿರೋಧಿಸಿ

ʼಕಾಯಕ ಗ್ರಾಮʼ ಯೋಜನೆಯಡಿ ದುರ್ಬಲ ಗ್ರಾ.ಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಕರೆ

ಜಿಲ್ಲೆಗಳಲ್ಲಿ ಅತ್ಯಂತ ದುರ್ಬಲವಾಗಿರುವ ಗ್ರಾಮ ಪಂಚಾಯತಿಯನ್ನು ಆರಿಸಿಕೊಂಡು ಅವುಗಳ ಸಮಗ್ರ ಅಭಿವೃದ್ಧಿ ಸಲುವಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ʼಕಾಯಕ ಗ್ರಾಮʼ ಯೋಜನೆಯಡಿ ದತ್ತು ಸ್ವೀಕಾರ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ

ಕೌನ್ಸೆಲಿಂಗ್ ಆಧಾರಿತ ವರ್ಗಾವಣೆಗಳಿಗೆ ಮಾರ್ಗಸೂಚಿ ರೂಪಿಸಲು ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ

ಬೆಂಗಳೂರು: ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ ಬಗ್ಗೆ ಜಿಲ್ಲಾಧಿಕಾರಿ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ

ವಿಜಯನಗರ (ಹೊಸಪೇಟೆ): ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ

ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ

ಬೆಂಗಳೂರು ಬ್ಲಡ್‌ ಬ್ಯಾಂಕ್‌ಗಳಲ್ಲಿ ಅಕ್ರಮ: ಆರೋಗ್ಯ ಇಲಾಖೆ ತನಿಖೆ ಚುರುಕು

ಬೆಂಗಳೂರಿನ ರಕ್ತನಿಧಿ ಘಟಕಗಳಲ್ಲಿ ನಿಗದಿಗಿಂತ ಹೆಚ್ಚಿನ ಹಣ ವಸೂಲಿ, ಅನೈರ್ಮಲ್ಯ ಹಾಗೂ ಅಕ್ರಮಗಳ ಕುರಿತು ಆರೋಪಗಳು ಕೇಳಿಬಂದಿದ್ದು, ಕರ್ನಾಟಕ ಆರೋಗ್ಯ ಇಲಾಖೆ ತನಿಖೆಗೆ ಮುಂದಾಗಿದೆ. ರಕ್ತದ ಮಾದರಿಗಳನ್ನು ಸಂಗ್ರಹ, ಸ್ವಚ್ಛತೆ, ಸಂಗ್ರಹಣಾ ಕ್ರಮಮತ್ತು ಶುಚಿತ್ವದ ಮಾನದಂಡಗಳನ್ನು ಡ್ರಗ್ ಕಂಟ್ರೋಲ್ ಬೋರ್ಡ್ ತಂಡಗಳು

ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಹೆಚ್ಚಳ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ