ಮುತ್ತೋಡಿ ಅರಣ್ಯದಲ್ಲಿ ವ್ಯಾಪಿಸುತ್ತಿರುವ ಕಾಡ್ಗಿಚ್ಚು: ಜೀವ ಸಂಕುಲಕ್ಕೆ ಸಂಚಕಾರ
ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಲ್ಲಿನ ಜೀವ ಸಂಕುಲಕ್ಕೆ ಸಂಚಕಾರ ಬಂದಿದೆ. ಅಪರೂಪದ ಅರಣ್ಯ ಸಂಪತ್ತು, ಜೀವರಾಶಿ ಬೆಂಕಿಗೆ ಆಹುತಿಯಾಗುವ ಅಪಾಯ ಎದುರಾಗಿದೆ. ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು, ಮುತ್ತೋಡಿ ಅರಣ್ಯ ವ್ಯಾಪ್ತಿಯ ಎಮ್ರಹಳ್ಳಿ ಮತ್ತು ಹೊಸಕಾನ್ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಿಸಿಲ ಬೇಗೆಗೆ ತರಗೆಲೆಗಳು ಮತ್ತು ಹುಲ್ಲಿನಿಂದಾಗಿ ಕ್ಷಣಾರ್ಧದಲ್ಲೇ ಕಿಲೋ ಮೀಟರ್‌ಗಳಷ್ಟು ದೂರ ಬೆಂಕಿ ವ್ಯಾಪಿಸುತ್ತಿದೆ.
ಮೀನು ಫ್ರೈ ಕದ್ದ ಇಲಿಗಳು: ಸ್ನೇಹಿತ ತಿಂದನೆಂದು ಕಲ್ಲಿಂದ ಜಜ್ಜಿ ಕೊಲೆ
ತವಾದಲ್ಲಿ ಫ್ರೈ ಮಾಡಿಟ್ಟಿದ್ದ ಮೀನನ್ನು ಇಲಿಗಳು ತಿಂದು ಮುಗಿಸಿದ್ದು, ಸ್ನೇಹಿತನೇ ತಿಂದಿದ್ದಾನೆಂದು ಭಾವಿಸಿ ಸಿಟ್ಟಿಗೆದ್ದ ಸ್ನೇಹಿತರಿಬ್ಬರು ಆತನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಘಟನೆ ಮುಂಬೈನ ಗೋರೆಗಾಂವ್ ನಲ್ಲಿ ನಡೆದಿದೆ. ಕೊಲೆಯಾದವನನ್ನು ಅಫ್ಸರ್ ಎಂದು ಗುರುತಿಸಲಾಗಿದೆ, ಆತನ ಸ್ನೇಹಿತರಾದ ಸುರೇಶ್ ಮತ್ತು
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಾಗಲಕೋಟೆಯಲ್ಲಿ ಮೆಡಿಕಲ್ ಕಾಲೇಜು ಏಕೆ ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿಯವರು ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಏಕೆ ಮಾಡಲಿಲ್ಲ. ಇದು ಗಿಮಿಕ್ ಹೇಗಾಗುತ್ತದೆ ಎಂದರು. ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ನಿಗದಿಯಾಗಿದೆ. ಕೆಲಸ ಪ್ರಾರಂಭವಾಗಬೇಕಿದ್ದು ಅದಕ್ಕೆ ಅಡಿಗಲ್ಲು ಹಾಕಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗಲಕೋಟೆಯ ನವನಗರ ಹೆಲಿ
ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ ಅಡ್ಡಿ: ರಾಜ್ಯದ ಸಂಸದರ ಜತೆ ದೆಹಲಿಯಲ್ಲಿ ಸಭೆಯೆಂದ ಡಿಸಿಎಂ
“ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟೆಯ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆಯ ವಿರುದ್ಧ ಧ್ವನಿ ಎತ್ತಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ
ಮೊಜ್ತಾಬಾ ಖಮೇನಿ ಸುಳಿವು ನೀಡಿದವರಿಗೆ 92.47 ಕೋಟಿ ರೂ.: ಅಮೆರಿಕ
ಅಮೆರಿಕ ಸೇನೆಯಿಂದ ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಬಳಿಕ ಆ ಸ್ಥಾನಕ್ಕೆ ಏರಿದ ಮೊಜ್ತಾಬಾ ಖಮೇನಿಯನ್ನು ಮುಗಿಸಲು ಮುಂದಾಗಿರುವ ಅಮೆರಿಕ ಅವರ ಸುಳಿವು ನೀಡಿದವರಿಗೆ 10 ಮಿಲಿಯನ್ ಡಾಲರ್ (92.47 ಕೋಟಿ ರೂಪಾಯಿ) ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಅಮೆರಿಕದ
ಲಿವ್ ಇನ್ ಸಂಗಾತಿಯ ಕೊಲೆಗೈದ ವಿವಾಹಿತ ಅರೆಸ್ಟ್
ವಿವಾಹಿತ ವ್ಯಕ್ತಿ ಲಿವ್ ಇನ್ ಸಂಗಾತಿಯನ್ನು ವೈರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೊಡಗಿನ ರಂಜಿತಾ (23) ಕೊಲೆಯಾದ ಮಹಿಳೆ, ಅಯ್ಯಪ್ಪ ಕೊಲೆ ಆರೋಪಿ. ಇವರಿಬ್ಬರು ಲಿವ್ ಇನ್ ಸಂಬಂಧದಲ್ಲಿದ್ದರು. ಆರೋಪಿ ಅಯ್ಯಪ್ಪನಿಗೆ ಈ ಮೊದಲೇ
ಬಾಲಕಿಯನ್ನು ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ತಾಯಿ, ಮಲತಂದೆ ಅರೆಸ್ಟ್
ಹಣಕ್ಕಾಗಿ 15 ವರ್ಷದ ಮಗಳನ್ನು ತಾಯಿ ಹಾಗೂ ಮಲತಂದೆ ಸೇರಿ ವೇಶ್ಯಾವಾಟಿಕೆಗೆ ಕಳಿಸುತ್ತಿದ್ದ ಪ್ರಕರಣವೊಂದು ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಹಿರಂಗಗೊಂಡಿದೆ. ತಾಯಿ ಮತ್ತು ಮಲತಂದೆ, ಇನ್ನೊಬ್ಬ ಮಹಿಳೆಯನ್ನುಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಂದ್ರಾಲೇಔಟ್ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಈ
ಒಡಿಶಾ ಕೈ ಶಾಸಕರಿಗೆ ಕಮಲದಿಂದ ದೊಡ್ಡ ಆಫರ್ ಗಳು ಬಂದಿವೆ: ಡಿಕೆ ಶಿವಕುಮಾರ್
“ಒಡಿಶಾ ಕಾಂಗ್ರೆಸ್ ಶಾಸಕರಿಗೆ ಕಮಲದಿಂದ ದೊಡ್ಡ ಆಫರ್ ಗಳು ಬಂದಿವೆ, ಬಿಜೆಪಿಯವರು ಆಪರೇಷನ್ ಕಮಲದ ಪಿತಾಮಹರು, ಕುದುರೆ ವ್ಯಾಪಾರಕ್ಕೆ ಹೆಸರುವಾಸಿ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹರಿಹಾಯ್ದಿದ್ದಾರೆ. ವಿಧಾನಸೌಧದ ಆವರಣದಲ್ಲಿ ಹಾಗೂ ಬಿಡದಿಯ ರೆಸಾರ್ಟ್ ಬಳಿ ಮಾಧ್ಯಮಗಳ
ಡಿಸಿ ಡಿಜಿಟಲ್ ಸಹಿ ದುರುಪಯೋಗ, ನಕಲಿ ಬಿಲ್: ಚಿತ್ರದುರ್ಗದಲ್ಲಿ ಐವರ ಬಂಧನ
ಜಿಲ್ಲಾಧಿಕಾರಿ ಮತ್ತು ಎಡಿಸಿ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಡಿ ಚಿತ್ರದುರ್ಗ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು,
ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ?: ಗಮನ ಹರಿಸುವುದು ಪತ್ರಕರ್ತರ ಜವಾಬ್ದಾರಿ ಎಂದ ಸಿಎಂ
ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ




