Menu

ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್‌ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ ಕಸ್ಟಡಿ ಅವಧಿ ಮುಗಿದಿತ್ತು, ಅವರನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ ಇ ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ

Suicide Deaths- ಕಾಸರಗೋಡಿನಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಕೇರಳದ ಗಡಿಭಾಗ ಕಾಸರಗೋಡಿಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ನಗರದ ಗೋಪಿ (58) ಪತ್ನಿ ಇಂದಿರಾ (55) ಮತ್ತು ಅಣ್ಣ ರಂಜೇಶ್ (37) ಹಾಗೂ ತಮ್ಮ ರಾಕೇಶ್ ಆತ್ಮಹತ್ಯೆ ಮಾಡಿಕೊಂಡವರು. ಆ್ಯಸಿಡ್ ಕುಡಿದ ತಕ್ಷಣವೇ ಮೂವರು

ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್‌ ಕ್ರಮ

ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು

ರಾಜ್ಯದ ಶಾಲೆಗಳಲ್ಲೂ ‘ವಾಟರ್ ಬೆಲ್’ ?

ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ಉತ್ತೇಜಿಸಲು ಕೇರಳ ರಾಜ್ಯದ ಶಾಲೆಗಳಲ್ಲಿ ದಿನಕ್ಕೆ ಎರಡು ಬಾರಿ ‘ವಾಟರ್ ಬೆಲ್’ ಜಾರಿಯಲ್ಲಿದೆ. ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಕೇರಳ

ಡಿಕೆ ಶಿವಕುಮಾರ್‌ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ: ಆರ್‌.ಅಶೋಕ

ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ “ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ.” ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ. ಈಗ “ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ” ಎಂದು ರೈತರ

ಜಾತಿ ನಿಂದನೆ: ಮೇಲ್ನೋಟಕ್ಕೆ ಅಪರಾಧ ಸಾಬೀತಾಗದಿದ್ದರಷ್ಟೇ ನಿರೀಕ್ಷಣಾ ಜಾಮೀನು ಎಂದ ಸುಪ್ರೀಂ

ಜಾತಿ ನಿಂದನೆ ಅಥವಾ ಎಸ್​ಸಿ/ಎಸ್​ಟಿ ಕಾಯ್ದೆಯಡಿ ಮೇಲ್ನೋಟಕ್ಕೆ ಅಪರಾಧ ಸಾಬೀತು ಆಗದಿದ್ದರೆ ಮಾತ್ರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಹಾರಾಷ್ಟ್ರದ ಜಾತಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್: ಸಂಪುಟ ನಿರ್ಣಯ

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ವ್ಯವಸ್ಥೆ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಬಳಕೆಗೆ ಶಿಫಾರಸ್ಸು ಮಾಡಲು ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಚುನಾವಣಾ  ಪ್ರಕ್ರಿಯೆಯಲ್ಲಿ ಅಗತ್ಯವಾದ ಕೆಲವು ಕಾನೂನು ಹಾಗೂ

ಜಿಬಿಐಟಿ ಯೋಜನೆ ಭೂ ಸಂತ್ರಸ್ತ ರಿಗೆ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿ ಪರಿಹಾರ: ಡಿಸಿಎಂ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯ ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂಡದ ಆಧಾರದ ಮೇಲೆ ಪ್ರತಿ ಎಕರೆಗೆ ₹1.50 ಕೋಟಿಯಿಂದ ₹2.50 ಕೋಟಿವರೆಗೂ ಪರಿಹಾರ ನೀಡಲು ತೀರ್ಮಾನಿಸಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ

ರಷ್ಯಾದಿಂದ ತೈಲ ಆಮದು ಮುಂದುವರಿಸಿದ್ರೆ ಮತ್ತಷ್ಟು ಸುಂಕ: ಭಾರತಕ್ಕೆ ಟ್ರಂಪ್‌ ಬೆದರಿಕೆ

ಭಾರತವು ರಷ್ಯಾದಿಂದ ತೈಲ ಆಮದು ಮುಂದುವರಿಸಿದರೆ ಮತ್ತಷ್ಟು ಸುಂಕ ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮತ್ತೊಮ್ಮೆ ಬೆದರಿಕೆ ಹಾಕಿದ್ದಾರೆ. ಚೀನಾದ ನಂತರ ಭಾರತವೇ ರಷ್ಯಾದ ತೈಲದ ಅತಿದೊಡ್ಡ ಖರೀದಿದಾರ ಎಂದು ಈ ಹಿಂದೆ ಟ್ರಂಪ್‌ ಅಸಹನೆ ಹೊರ ಹಾಕಿದ್ದರು.

ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಸೆ.7- 8 ರಂದು

ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದ್ದು, ಭಾರತದಾದ್ಯಂತ ಗೋಚರಿಸಲಿದೆ. ಇದು ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಸೆ.7ರಂದು ರಾತ್ರಿ 9:57ಕ್ಕೆ ಸ್ಪರ್ಶಕಾಲವಿದ್ದು ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56 ರವರೆಗೆ ಇರಲಿದೆ,