Menu

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್‌. ಅಶೋಕ

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಕಿಡಿ ಕಾರಿದ್ದಾರೆ. ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲಿಗೆ! ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದವಾಲ್ಮೀಕಿ ಅಭಿವೃದ್ಧಿ ನಿಗಮದ

ರಷ್ಯಾ, ಉಕ್ರೇನ್‌ ಸಂಘರ್ಷ ಶೀಘ್ರ ಕೊನೆಯಾಗಿ ಶಾಂತಿ ನೆಲೆಸಲಿ: ಪ್ರಧಾನಿ ಮೋದಿ

ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್‌ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ

ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಕಾರವಾರದ ಯುವಕ ಸಾವು

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಊಟ ಮಾಡುತ್ತಿರಬೇಕಾದರೆ ಅನ್ನದ ಅಗಳು ಗಂಟಲಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ನಡೆದಿದೆ. ಅಮಿತ್ ಮಾಳಸೇರ (38) ಮೃತಪಟ್ಟಿರುವ ಯುವಕ. ಅಮಿತ್ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಒಂದು ತುತ್ತು ಗಂಟಲಿನಲ್ಲಿ ಸಿಲುಕಿಕೊಂಡಿದೆ.

ನನ್ನ ಊರಿನ ಋಣ ನನ್ನ ಮೇಲೆ ಸದಾ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಅವರು  ಮಾತನಾಡಿದರು.‌ ನನ್ನ ಊರಿನ ಶಾಲೆಯಲ್ಲಿ ನಾನು

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆ 51.50 ರೂ. ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ. ಇಳಿಕೆ ಮಾಡಿರುವುದಾಗಿ ಹೇಳಿವೆ.  14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ದೆಹಲಿಯಲ್ಲಿ 19

ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ

Suicide Death- ಬಾಗಲಗುಂಟೆಯಲ್ಲಿ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದ ಕಿರುಕುಳ: ಪತ್ನಿ ಆತ್ಮಹತ್ಯೆ

ಬೆಂಗಳೂರು ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾಶ್ರೀ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೂರು ವರ್ಷದ ಹಿಂದೆ ಪೂಜಾಶ್ರೀ

ಬೇಗೂರಿನಲ್ಲಿ ಸ್ನೇಹಿತರ ನಡುವೆ ಗಲಾಟೆ: ಕೊಲೆಯಲ್ಲಿ ಅಂತ್ಯ

ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ರಾಘವೇಂದ್ರ ಲೇಔಟ್ ನಲ್ಲಿ ಸ್ನೇಹಿತರ ನಡುವೆ ಹಣಕಾಸು ವಿಚಾರಕ್ಕೆ ಉಂಟಾಗಿದ್ದ  ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಉತ್ತರಪ್ರದೇಶ ಮೂಲದ  ದೇವೇಂದ್ರ ಸಿಂಗ್ ಮೃತಪಟ್ಟವರು, ಉತ್ತರಪ್ರದೇಶದ  ಮೇವಾ  ಕೊಲೆ ಆರೋಪಿ.  ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು

ಬೆಂಗಳೂರಿನಲ್ಲಿ 26 ರ ಮಹಿಳೆ, 52 ವರ್ಷದ ಪುರುಷ ಲಿವ್‌ ಇನ್‌ ಟುಗೆದರ್‌: ಹೊಸ ಸ್ನೇಹಿತನೊಂದಿಗಿದ್ದ ಮಹಿಳೆಯ ಕೊಲೆಗೈದ ಪಾರ್ಟ್‌ನರ್‌

ಬೆಂಗಳೂರಿನಲ್ಲಿ  26 ವರ್ಷದ ಮಹಿಳೆಯ ಜೊತೆ 52 ವರ್ಷದ ಪುರುಷ ಸಹಜೀವನ ನಡೆಸುತ್ತಿದ್ದು, ಈ ಸಂಬಂಧವು ಮಹಿಳೆಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಪೆಟ್ರೊಲ್ ಎರಚಿ ಮಹಿಳೆಯನ್ನು ಸಂಗಾತಿಯಾಗಿದ್ದ ವ್ಯಕ್ತಿ ಬರ್ಬರವಾಗಿ ಸಾಯಿಸಿದ್ದಾನೆ. ವನಜಾಕ್ಷಿ ಕೊಲೆಯಾದ ಮಹಿಳೆ, ಕ್ಯಾಬ್ ಚಾಲಕ ವಿಠಲ ಕೊಲೆಗಾರನಾಗಿದ್ದು,

ಸಚಿವ ಜಮೀರ್‌ಗೆ 2.5 ಕೋಟಿ ರೂ. ಸಾಲ: ರಾಧಿಕಾ ಕುಮಾರಸ್ವಾಮಿಯ ವಿಚಾರಣೆ ನಡೆಸಿದ ಲೋಕಾಯುಕ್ತ

ವಸತಿ ಸಚಿವ ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ಜಮೀರ್‌ ಆದಾಯದ ಮೂಲಗಳನ್ನು ಪರಿಶೀಲಿಸಿದಾಗ ಪತ್ತೆಯಾಗಿರುವ