ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು
ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮನೋಜ್ ಮನೆಯಿಂದ ಕಾಲೇಜಿಗೆ ವಿಶ್ವನಾಥಪುರ ಬಳಿ ಬೈಕ್ ನಲ್ಲಿ ಹೋಗುವಾಗ ದುರ್ಘಟನೆ ನಡೆದಿದ್ದು, ವಿಶ್ವನಾಥಪುರ ಪೊಲೀಸರು ಪ್ರಕರಣ
ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವನ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು. “ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ
ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನ 10 ಮಂದಿ: ಸಚಿವ ಸಂತೋಷ್ ಲಾಡ್ ಅಭಯ
ಮೈಸೂರು: ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಜಮ್ಮು ಕಾಶ್ಮೀರದಲ್ಲಿ ಮೈಸೂರಿನ 10 ಮಂದಿ ಕಾಶ್ಮೀರದಲ್ಲಿ ಸಿಲುಕಿದ್ದಾರೆ. ಸಚಿವ ಸಂತೋಷ್ ಲಾಡ್ ಕಾಶ್ಮೀರದಲ್ಲಿ ಸಿಲುಕಿರುವ ಮೈಸೂರಿನವರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಮೈಸೂರಿನ ಕೇಂದ್ರ ಅಂಚೆ ಕಚೇರಿಯ
ಉಗ್ರ ಸಂಘಟನೆಗಳನ್ನು ಸದೆಬಡಿಯಬೇಕು: ಡಿಕೆ ಶಿವಕುಮಾರ್
ಬೆಂಗಳೂರು: ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಶಿವಕುಮಾರ್
ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ.
ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಕರೆತರಲು ವಿಶೇಷ ವಿಮಾನ
ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಬ್ಬ
ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ
ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು
ಚಿನ್ನ ಪಡೆದು ಶುದ್ಧತೆ ಪರಿಶೀಲಿಸಿ ಹಣ ನೀಡುವ ಗೋಲ್ಡ್ ಎಟಿಎಂ
ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರ ಮಾಡುತ್ತಲೇ ಇರುವ ಚೀನಾ ಶಾಂಘೈನಲ್ಲಿ ಚಿನ್ನದ ಎಟಿಎಂ ಪರಿಚಯಿಸಿದೆ. ಬಳಕೆದಾರರಿಗೆ ತಮ್ಮ ಆಭರಣಗಳನ್ನು ಮಾರಾಟ ಮಾಡಲು ಮತ್ತು ತಕ್ಷಣ ಹಣ ಪಡೆಯಲು ಇದು ಅನುವು ಮಾಡಿಕೊಡುತ್ತದೆ. ಶಾಂಘೈನ ಗೋಲ್ಡ್ ಎಟಿಎಂಗಳನ್ನು ಶೆನ್ಜೆನ್ ಮೂಲದ ಕಿಂಗ್‌ಹುಡ್ ಗ್ರೂಪ್ ತಯಾರಿಸಿದೆ.
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
ಪಕ್ಷದ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಅಂತಹ ಯಾವುದೇ ವಿಚಾರ ಪಕ್ಷದ ಮುಂದೆ ಇಲ್ಲ ಮೈಸೂರಿನಲ್ಲಿ ಸಚಿವ ಸತೀಶ್ ಜಾರಕಿಹೋಳಿ ಸ್ಪಷ್ಟಪಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ಉಗ್ರರ ದಾಳಿ ಈ ಘಟನೆಯನ್ನು ನಾವು ಕೂಡ ಖಂಡಿಸುತ್ತೇವೆ. ಮುಂದೆ ಈ ರೀತಿ ಘಟನೆಗಳು
ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ
ಯುಟ್ಯೂಬ್ ಚಾನಲ್ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ




