ಕಾರು ಬಿಟ್ಟು ಸಾರ್ವಜನಿಕ ಸಾರಿಗೆ ಬಳಸಲು ಕ್ಷೇತ್ರದ ಜನರಿಗೆ ತೇಜಸ್ವಿ ಸೂರ್ಯ ಕರೆ ನೀಡಲಿ
ಸಂಸದ ತೇಜಸ್ವಿ ಸೂರ್ಯರು ತಮ್ಮ ಕ್ಷೇತ್ರದ ಜನರಿಗೆ, ನೀವು ನಿಮ್ಮ ಕಾರುಗಳನ್ನು ಮನೆಯಲ್ಲೇ ನಿಲ್ಲಿಸಿ, ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ ಮಾಡಿ ಕರೆ ನೀಡಲಿ. ಆಗ ಯಾರು ಪಾಲನೆ ಮಾಡುತ್ತಾರೆ ನೋಡೋಣ. ಕಾರಿಲ್ಲದ ಹುಡುಗನ ಮನೆಗೆ ಹೆಣ್ಣು ನೀಡಲು ಹಿಂದೇಟು ಹಾಕುತ್ತಾರೆ. ಇಂತಹ ಸಾಮಾಜಿಕ ಬಾಧ್ಯತೆಗಳ ಬಗ್ಗೆ ಅವರಿಗೆ ಅರಿವಿಲ್ಲ ಎಂದು ಡಿಸಿಎಂ ಡಿಕೆ ಶಿಚಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಯಾವುದೇ ಕಾರಣಕ್ಕೂ ಪೊಲೀಸರು ರಾಜಕೀಯ ಹಿಂಬಾಲಕರಾಗಬೇಡಿ: ಡಿಕೆ ಶಿವಕುಮಾರ್
“ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮ ವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ
ಅಲ್ ಖೈದಾ ಸಂಪರ್ಕ ಆರೋಪ: ಪುಣೆಯಲ್ಲಿ ಟೆಕ್ಕಿ ಅರೆಸ್ಟ್
ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಪುಣೆಯ ಕೊಂಧ್ವಾದಲ್ಲಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಜುಬೈರ್ ಹಂಗರ್ಗೇಕರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು.
ಹಿಟ್ ಅಂಡ್ ರನ್: ದೊಡ್ಡಬಳ್ಳಾಪುರದಲ್ಲಿ ಯುವಕರಿಬ್ಬರು ಬಲಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಹಿಟ್ ಅಂಡ್ ರನ್‌ಗೆ ಬೈಕ್ ಸವಾರರಿಬ್ಬರು ಬಲಿಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರು.
ಆರೆಸ್ಸೆಸ್ ಚಟುವಟಿಕೆ ನಿರ್ಬಂಧ: ಹೈಕೋರ್ಟ್ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು
ಡ್ರಗ್ಸ್ ಮುಕ್ತ ಕರ್ನಾಟಕ ಸಾಧಿಸಿ ತೋರಿಸಿ: ಪೊಲೀಸ್‌ಗೆ ಸಿಎಂ ಕರೆ
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ.
ಆಂಧ್ರದತ್ತ ಚಂಡಮಾರುತ: ಕರಾವಳಿ ನಿವಾಸಿಗಳ ಸ್ಥಳಾಂತರ, ರೆಡ್ ಅಲರ್ಟ್
ಆಂಧ್ರಪ್ರದೇಶದ ಕರಾವಳಿಯತ್ತ ಮೊಂಥಾ ಚಂಡಮಾರುತವು ವೇಗವಾಗಿ ಸಾಗುತ್ತಿದ್ದು, ಸಂಜೆ ಅಥವಾ ರಾತ್ರಿ ಕಾಕಿನಾಡ ಬಳಿಯ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ ಭೂಮಿಯನ್ನು ಸ್ಪರ್ಶಿಸುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಜಾರಿ ಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕರಾವಳಿ ಪ್ರದೇಶಗಳ
ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ
ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ
ಬಾಲಕಿಯ ರೇಪ್ ಮಾಡಿ ಗರ್ಭಿಣಿಯನ್ನಾಗಿಸಿದ ಮೂವರು ಹೆಂಡತಿಯರ ಗಂಡ
ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಶಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ
ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ
ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ




