ಬಿಜೆಪಿ ಸಂಸದರು ಅನಿಲ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಮಾತನಾಡಲಿ: ಡಿಕೆ ಶಿವಕುಮಾರ್
“ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಬಿಜೆಪಿ ಸಂಸದರುಗಳು ಈ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಎಲ್ಲಾದಕ್ಕೂ ಬಹಳ ವಿಚಿತ್ರವಾಗಿ ದನಿ ಎತ್ತುತ್ತಾರೆ. ಇದರ ಬಗ್ಗೆಯೂ ಮಾತನಾಡಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಿದಾಗ, “ಚರ್ಚೆ ನಡೆಸಲು ಕೇಂದ್ರ ಸರ್ಕಾರಕ್ಕೆ ಏಕೆ ಭಯ.
ಯುದ್ಧ ನಿಲ್ಲಿಸುವುದು ಅಮೆರಿಕವಲ್ಲ, ಇರಾನ್: ಟ್ರಂಪ್‌ಗೆ ತಿರುಗೇಟು
ಯುದ್ಧ ನಿಲ್ಲಿಸುವುದು ಅಮೆರಿಕದ ನಿರ್ಧಾರವಲ್ಲ, ಅದು ನಮ್ಮ ನಿರ್ಧಾರ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಪಡೆ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ತಿರುಗೇಟು ನೀಡಿದೆ. ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂಬ ಟ್ರಂಪ್ ಹೇಳಿಕೆಗೆ ಐಆರ್‌ಜಿಸಿ ಪಡೆ ಹೀಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ.
ರಾಷ್ಟ್ರಪತಿ ಅಗ್ಗದ ಪ್ರಚಾರ ವಸ್ತುವಲ್ಲ
ರಾಜ್ಯಪಾಲ ಮತ್ತು ರಾಷ್ಟ್ರಪತಿ ಹುದ್ದೆಗಳನ್ನು ಚುನಾವಣೆಗಳ ಸಂದರ್ಭದಲ್ಲಿ ಎಳೆದು ತಂದು ಮತಗಳನ್ನು ಬಾಚಬೇಕೆಂಬ ಹಿಡನ್ ಅಜೆಂಡಾ ಯಾವ ರಾಜಕೀಯ ಪಕ್ಷಕ್ಕೂ ಶೋಭಿತವಲ್ಲ. ಸಾಂವಿಧಾನಿಕ ಹುದ್ದೆಗಳಲ್ಲಿರುವವರು, ಜಾತಿ, ಧರ್ಮ ಮತ್ತು ವಿವಿಧ ಆಮಿಷಗಳನ್ನು ಒಡ್ಡುವ ಭಾಷಣ ಮತ್ತು ಪ್ರಚಾರಗಳ ಮೇಲೆ ಚುನಾವಣೆ ಆಯೋಗವು
ಅಡ್ರೆಸ್ ಕೇಳುವ ನೆಪದಲ್ಲಿ ಸರಗಳ್ಳತನ: ಏಳು ಪ್ರಕರಣದ ಮೂರು ಆರೋಪಿಗಳು ಅರೆಸ್ಟ್
ಮಾಗಡಿ ತಾಲೂಕಿನ ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಭು (39), ವಸಂತಿ (37) ಮತ್ತು ಜ್ಯೋತಿ (32) ಬಂಧಿತ ಆರೋಪಿಗಳಾಗಿದ್ದಾರೆ. ಮಾ.3ರಂದು ಕುದೂರು ಸಮೀಪದ
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಐಎಎಸ್, ಐಪಿಎಸ್‌ಗಳಾಗಲಿ: ಸಿಎಂ ಆಶಯ
ದೊರೆತ ಅವಕಾಶಗಳನ್ನು ಪೂರ್ಣ ಸದುಪಯೋಗ ಪಡಿಸಿಕೊಂಡು, ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಸಾಧನೆ ಮಾಡುವ ವಿಚಾರದಲ್ಲಿ ಪುರುಷರಿಗಿಂತ ಮಹಿಳೆಯರೆ ಮುಂದಿದ್ದಾರೆ ಎನ್ನುವ ಅಂಶವನ್ನು ನಾವು ಒಪ್ಪಿಕೊಳ್ಳಲೇಬೇಕು. ಇತ್ತೀಚಿನ ಯುಪಿಎಸ್.ಸಿ ಪರೀಕ್ಷೆಯಲ್ಲಿ 25ಕ್ಕೂ ಹೆಚ್ಚು ಮಂದಿ ಕನ್ನಡಿಗರು ಆಯ್ಕೆಯಾಗಿದ್ದು, ಇವರಲ್ಲಿ ಮಹಿಳೆಯರು ಕೂಡ ಉತ್ತಮ ಅಂಕಗಳೊಂದಿಗೆ
ಚಲಿಸುತ್ತಿದ್ದ ಲಾರಿಗೆ ಕಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್
ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಒಬ್ಬನ ಸಾವು
ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ ಒಂಬತ್ತನೇ ತರಗತಿ ವಿದ್ಯಾರ್ಥಿಯು ರಾಡ್ನಿಂದ ಹಲ್ಲೆ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ
ಯುಪಿಎಸ್ಸಿ ಪರೀಕ್ಷೆ: ರಾಜ್ಯದ 22 ಅಭ್ಯರ್ಥಿಗಳು ಪಾಸ್, ಕಿರಣ್ ಕಮತೆಗೆ 52ನೇ ರ‍್ಯಾಂಕ್
2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ (ಯುಪಿಎಸ್ ) ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ 22 ಮಂದಿ ಆ ಬಾರಿ ಯುಪಿಎಸ್ಸಿಗೆ ಆಯ್ಕೆಯಾಗಿದ್ದಾರೆ. ಕಿರಣ್ ಕಮಟೆ ದೇಶದಲ್ಲಿ 53ನೇ ರ‍್ಯಾಂಕ್ ಗಳಿಸಿ ಕರ್ನಾಟಕದ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಒಟ್ಟು 958
ಕರ್ನಾಟಕ ಬಜೆಟ್ 2026: ಲಿಂಗತ್ವ ಅಲ್ಪಸಂಖ್ಯಾತರ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಕರ್ನಾಟಕ ಬಜೆಟ್ 2026 ಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಪ್ರಮುಖ ಮುಖಂಡರಾಗಿರುವ ಅಕ್ಕೈ ಪದ್ಮಶಾಲಿ ಬಜೆಟ್ ಅಪ್ರಬುದ್ಧ ಎಂದು ಕರೆದಿದ್ದಾರೆ. ಈ ಸರ್ಕಾರಕ್ಕೆ ದೂರದೃಷ್ಟಿಯಿಲ್ಲ, ಇವರಿಂದ ನಾವು ಏನನ್ನೂ
ಕರ್ನಾಟಕ ಬಜೆಟ್ 2026: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ನಾಗರಿಕ ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ
ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಭಾರತದ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರಗಳಲ್ಲಿ ಒಂದಾಗಿರುವ ಕರ್ನಾಟಕ, ಈಗ ಸಾರ್ವಜನಿಕ ಸೇವೆಗಳನ್ನು ಪರಿವರ್ತಿಸಲು,




