ಜಾತಿ ವಿಷಬೀಜ ಬಿತ್ತುವ ಕುತಂತ್ರಕ್ಕೆ ಇತಿಶ್ರೀ: ಬಿವೈ ವಿಜಯೇಂದ್ರ
ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರಕಾರ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರಕಾರವು ಬಹಳ ಉತ್ತಮ ನಿರ್ಧಾರ ಕೈಗೊಂಡಿದೆ. ನಿನ್ನೆಯ ಸಂಪುಟ ಸಭೆಯಲ್ಲಿ ಜನಗಣತಿ ಜೊತೆಗೆ ಜಾತಿ ಜನಗಣತಿ ಮಾಡುವ
ಜಾತಿಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ
ಉಗ್ರರಿಂದ 4 ಜಾಗದಲ್ಲಿ ದಾಳಿಗೆ ಸಂಚು: ತನಿಖೆ ವೇಳೆ ಸ್ಫೋಟಕ ವಿಷಯ ಬಯಲು
ಶ್ರೀನಗರ: ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಹತ್ಯೆಗೈಯ್ಯುವ ಮುನ್ನ ಉಗ್ರರು ಇನ್ನೂ ಮೂರು ಸ್ಥಳಗಳನ್ನು ಗುರುತಿಸಿದ್ದರು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ. ಉಗ್ರರಿಗೆ ಸಂಪರ್ಕದಲ್ಲಿದ್ದ ತಳಮಟ್ಟದ ಕಾರ್ಯಕರ್ತನೊಬ್ಬನನ್ನು ವಿಚಾರಣೆಗೊಳಪಡಿಸಿರುವ ಭಾರತೀಯ ಹಲವು ಸ್ಫೋಟಕ ವಿಷಯಗಳನ್ನು ಬಾಯಿಬಿಡಿಸಿದ್ದಾರೆ. ಜಮ್ಮು ಕಾಶ್ಮೀರದ
ಶುಚಿತ್ವದ ಇತರ ನೌಕರರನ್ನೂ ಖಾಯಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಬೆಂಗಳೂರು: ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅಮೆರಿಕ ಕನ್ನಡ ಸಂಘಟನೆ ‘ಅಕ್ಕ’ ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆ
ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಂಡ್ಯದವರಾದ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಮಧು ರಂಗಯ್ಯ ಅಕ್ಕವನ್ನು ಮುನ್ನಡೆಸಲಿದ್ದಾರೆ. ಮುಂಬರುವ ಅಕ್ಕ ಸಮ್ಮೇಳನ ಹಾಗೂ ಅಕ್ಕದ ವಿವಿಧ ಕಾರ್ಯಕ್ರಮಗಳು ನೂತನ ಪದಾದಿಕಾರಿಗಳ ತಂಡದ ನೇತೃತ್ವದಲ್ಲಿ
ರಾಹುಲ್ ಗಾಂಧಿಯ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ.ಶಿವಕುಮಾರ್
ಪ್ರತಿಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ 17 ರೂ. ಇಳಿಕೆ
ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ 17 ರೂ. ಇಳಿಕೆ ಮಾಡಿರುವುದಾಗಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದ್ದು, ಸಾಮಾನ್ಯ ಜನರ ಬಳಕೆಯ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮಂಗಳವಾರದಿಂದಲೇ ಜಾರಿಗೆ ಬರುವಂತೆ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್
ರಾಜ್ಯ ಮಟ್ಟದ ಸಮೀಕ್ಷೆ ವಿಶ್ವಾಸಾರ್ಹವಲ್ಲ, ರಾಷ್ಟ್ರೀಯ ಗಣತಿಯಿಂದ ಪಾರದರ್ಶಕ ದತ್ತಾಂಶ
ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ
ಪಹಲ್ಗಾಮ್ ದಾಳಿಯ ಸಂಚುಕೋರ ಹಫೀಜ್ ಗೆ ಬಿಗಿ ಭದ್ರತೆ ಕಲ್ಪಿಸಿದ ಪಾಕ್ ಸರ್ಕಾರ
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಆಯೋಜಿಸಿ 26 ಪ್ರವಾಸಿಗರ ಬಲಿಗೆ ಕಾರಣನಾಗಿರುವ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾದ ಲಷ್ಕರ್-ಎ-ತೈಬಾದ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಪಾಕಿಸ್ತಾನವು ಭದ್ರತೆಯನ್ನು ನಾಲ್ಕು ಪಟ್ಟು ಹೆಚ್ಚು ಮಾಡಿದೆ ಎಂದು ಮೂಲಗಳು ಹೇಳಿವೆ. ಪಾಕಿಸ್ತಾನ ಸಶಸ್ತ್ರ ಪಡೆಗಳ ಸಿಬ್ಬಂದಿಯ
ಒತ್ತಕ್ಷರದ ಒಂದು ತಪ್ಪು ಹೊಸ ಜಾತಿ ಹುಟ್ಟು ಹಾಕಬಹುದು
ವಾಸ್ತವವಾಗಿ ಜಾತಿ ಗಣತಿಯು ಸಾಮಾಜಿಕ-ರಾಜಕೀಯ ಸಾಧನವಾಗಿದ್ದು ಅದು ಅಧಿಕಾರ ರಚನೆಗಳನ್ನು ಮರುರೂಪಿಸಬಹುದು. ಕಲ್ಯಾಣ ನೀತಿಗಳನ್ನು ಹೊಸದಾಗಿ ನಿರೂಪಿಸಬೇಕಾಗಬಹುದು ಮತ್ತು ಸಮಾಜದೊಳಗಿನ ಅಸಮಾನತೆಗಳನ್ನು ಎತ್ತಿ ತೋರಿಸಬಹುದು. ಭಾರತದಲ್ಲಿ, ಸಂಪನ್ಮೂಲಗಳು, ಅವಕಾಶಗಳು ಮತ್ತು ಆರ್ಥಿಕ ಪ್ರವೇಶವನ್ನು ನಿರ್ಧರಿಸುವಲ್ಲಿ ಜಾತಿಯು ನಿರ್ಣಾಯಕ ಅಂಶವಾಗಿ ಉಳಿದಿದೆ. ಯಾರು




