Menu

ವಿಧಾನ ಪರಿಷತ್ ಸ್ಥಾನ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು: ಡಿಕೆ ಶಿವಕುಮಾರ್

ನವದೆಹಲಿ: ವಿಧಾನಪರಿಷತ್ ನಾಮನಿರ್ದೇಶನದ ಬಗ್ಗೆ ಕೇಳಿದಾಗ, “ಪಕ್ಷದ ಕಾರ್ಯಕರ್ತರಿಗೆ ಹಾಗೂ ಪಕ್ಷದ ಪರವಾಗಿ ದನಿ ಎತ್ತುವವರಿಗೆ ನೀಡಬೇಕು ಎಂಬುದು ನನ್ನ ಅಭಿಲಾಷೆ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕು ಎಂಬುದು ನನ್ನ ಪ್ರಾಶಸ್ತ್ಯ. ಇದರ ಬಗ್ಗೆ ಮುಖ್ಯಮಂತ್ರಿಗಳು ನಾನು ಹೈಕಮಾಂಡ್ ಬಳಿ ಮಾತನಾಡಿದ್ದೇವೆ‌. ಹೈಕಮಾಂಡ್ ಇಬ್ಬರನ್ನು ಸಂಪರ್ಕಿಸುತ್ತದೆ” ಎಂದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಬಗ್ಗೆ ಪ್ರತಿ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಮನವಿ: ಡಿಕೆ ಶಿವಕುಮಾರ್

ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ

ಭಾರತದ ಮೇಲೆ ಅಮೆರಿಕ ಸುಂಕ: ಮೋದಿಗೆ ರಾಹುಲ್ ತರಾಟೆ

ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕಗಳ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತೀಯ ರಫ್ತಿನ ಮೇಲೆ ಪರಸ್ಪರ ಸುಂಕಗಳನ್ನು ವಿಧಿಸುವ ಡೊನಾಲ್ಡ್ ಟ್ರಂಪ್ ಅವರ ಕ್ರಮವು “ನಮ್ಮ ಆರ್ಥಿಕತೆಯನ್ನು ಧ್ವಂಸಗೊಳಿಸಲಿದೆ” ಎಂದು

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚಳ

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು,ಕಳೆದೆರಡು ವರ್ಷಗಳಲ್ಲಿ 9,509 ಪ್ರಕರಣ ದಾಖಲಾಗಿದೆ.  80 ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಿದೆ. ಮಾನವ ಹಕ್ಕುಗಳ ಬಗ್ಗೆ

ಬಾವಿಗೆ ಬಿದ್ದಾತನ ರಕ್ಷಣೆಗೆ ಸರದಿಯಲ್ಲಿ ಹೋದ ಏಳು ಮಂದಿಯೂ ಸಾವು

ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಒಬ್ಬರಾದ ಮೇಲೆ ಒಬ್ಬರಂತೆ ಒಟ್ಟು 7 ಜನ ಹೋಗಿದ್ದವರು ಸೇರಿ ಎಂಟು ಮಂದಿ ಉಸಿರುಕಟ್ಟಿ ಪ್ರಾಣ ಕಳೆದುಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಂಡ್ವಾದ ಕೊಂಡಾವತ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರಾದ 8 ಜನರೂ

ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಿಎಂ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ  ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು ಪತ್ರದ ವಿವರ

ತೆನ್ನೀರ ಮಹಿನ ನನ್ನ ಸಾವಿಗೆ ನೇರ ಹೊಣೆ: ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತನ ಡೆತ್‌ನೋಟ್‌

ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಡಿಕೇರಿಯ ಬಿಜೆಪಿ ಕಾರ್ಯಕರ್ತನ ಡೆತ್‌ ನೋಟ್‌ನಲ್ಲಿ, ರಾಜಕೀಯ ದ್ವೇಷಕ್ಕೆ ನಮ್ಮ ಜೀವನದ ಜೊತೆ ಆಟ ಆಡಿದ ತೆನ್ನೀರ ಮಹೀನ  Tenneera Maheena (9449156215) ನನ್ನ ಸಾವಿಗೆ ನೇರ ಹೊಣೆ ಎಂದು ಬರೆದಿರುವುದು ಪತ್ತೆ ಯಾಗಿದೆ.

ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ

1995ರ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡ ಬಳಿಕ ಶುಕ್ರವಾರ ನಸುಕಿನಲ್ಲಿ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ. ಮಸೂದೆ ಪರ ೧೨೮, ವಿರುದ್ಧ ೯೫ ಮತಗಳು ಬಂದಿವೆ. ರಾಜ್ಯಸಭೆಯಲ್ಲಿ ಮಸೂದೆಯ ಪರ-ವಿರೋಧ ಚರ್ಚೆಗಳು

ನಾಗವಾರದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬೆಂಗಳೂರಿನ ನಾಗವಾರದಲ್ಲಿ ಮಡಿಕೇರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ತನ್ನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮೊದಲುಸಾಮಾಜಿಕ ಜಾಲತಾಣಗಳಲ್ಲಿ ಡೆತ್

ಬಾಲಿವುಡ್‌ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಅವರನ್ನು ಕೆಲವು ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನೋಜ್‌ ಕುಮಾರ್‌ ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಪ್ರಸಿದ್ಧರಾಗಿದ್ದರು.