Menu

ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ

ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರ ಅಮಾನತು ಮತದಾರರಿಗೆ ಮಾಡಿದ ಅವಮಾನ. 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಮಾನತು ಹಿಂಪಡೆಯುವವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಅವಧಿಗೆ ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಬೆಂಗಳೂರಿನ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ

ಬೇಸಿಗೆಯಲ್ಲಿ  ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ 

ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ

ಮೊಳಕಾಲ್ಮೂರಿನಲ್ಲಿ ರಸ್ತೆ ಅಪಘಾತಕ್ಕೆ ತಂದೆ, ಮಕ್ಕಳಿಬ್ಬರು ಬಲಿ

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಮಜೀದ್ ಬಳಿ ಚಳ್ಳಕೆರೆ ಮತ್ತು ಬಳ್ಳಾರಿ ನಡುವಿನ ರಾಷ್ಟ್ರೀಯ ಹೆದ್ದಾರಿ-150 ಎನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು

ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್‌ ಲೋಕಾಯುಕ್ತ ದಾಳಿ ವಿಚಾರ ತಿಳಿದು ಎಸ್ಕೇಪ್‌

ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್ ಅವರ ವಿರುದ್ಧ ಲೋಕಾಯುಕ್ತ ದಾಳಿ ವಿಚಾರ ತಿಳಿಯುತ್ತಿದ್ದಂತೆ ಮನೆಯಲ್ಲೇ ಇಲಾಖೆಯ ಜೀಪ್ ಬಿಟ್ಟು ಪರಾರಿಯಾಗಿದ್ದಾರೆ. ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಕುಮಾರ್‌ ಕಿರುಕುಳ ನೀಡುತ್ತಿದ್ದ ಆರೋಪ

ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ

“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿ, ದರ ಏರಿಕೆ

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ  ದೊಡ್ಡದು: ಸಿಎಂ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ

ಮಂಗಳೂರು ಮುಡಾ ಆಯುಕ್ತರಿಗೆ ಬ್ರೋಕರ್‌ಗಳಿಂದ ವಾಮಾಚಾರದ ಬೆದರಿಕೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿರುವ ನೂರ್ ಝಹರಾ ಖಾನಂ ಅವರಿಗೆ ದಲ್ಲಾಳಿಗಳು ವಾಮಾಚಾರ ಪ್ರಯೋಗದ ಬೆದರಿಕೆ ಒಡ್ಡಿರುವುದಾಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಭ್ರಷ್ಟಾಚಾರ ಮತ್ತು ದಲ್ಲಾಳಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಕ್ಕೆ ತನಗೆ ವಾಮಾಚಾರದ ಬೆದರಿಕೆಯೊಡ್ಡಿರುವುದಾಗಿ ಆಯುಕ್ತರು ಇಬ್ಬರು ದಲ್ಲಾಳಿಗಳ

ಚಿಕ್ಕಮಗಳೂರಲ್ಲಿ ಮಗಳು ಸೇರಿ ಮೂವರಿಗೆ ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ

ಚಿಕ್ಕಮಗಳೂರು ತಾಲೂಕಿನ ಖಾಂಡ್ಯಾ ಸಮೀಪದ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಕೊಲೆಯಾದವರು. ಮಾಗಲು

ಆಲೋವೆರಾ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ ಬೆಂಗಳೂರು ಬಾಲಕಿ ಸಾವು

ಬೆಂಗಳೂರಿನ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿ ಪೋಷಕರ ನಿರ್ಲಕ್ಷ್ಯದಿಂದಾಗಿ ಬಾಲಕಿಯೊಬ್ಬಳು ಆಲೋವೆರಾ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿ ಮೃತಪಟ್ಟಿದ್ದಾಳೆ. 9ನೇ ತರಗತಿ ಓದುತ್ತಿರುವ ನಿಧಿ ಕೃಷ್ಣ (14) ಮೃತ ಬಾಲಕಿ. ಬಾಲಕಿಯು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ ಆಲೋವೆರಾ

ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ: ಎಚ್ಚರಿಕೆ ನಿಜವಾಯ್ತು ಎಂದ ಆರ್‌. ಅಶೋಕ್‌

ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ