ಯುಪಿಐ ಸರ್ವರ್ ಸ್ಥಗಿತ: ಪರದಾಡಿದ ಗೂಗಲ್, ಫೋನ್ ಪೇ ಗ್ರಾಹಕರು
ದೇಶಾದ್ಯಂತ ಯುಪಿಐ ಸರ್ವರ್ ಸ್ಥಗಿತಗೊಂಡ ಕಾರಣ ಆನ್ ಲೈನ್ ನಲ್ಲಿ ಹಣ ಪಾವತಿ ಮಾಡಲು ಆಗದೆ ಲಕ್ಷಾಂತರ ಗೂಗಲ್ ಪೇ ಮತ್ತು ಫೋನ್ ಪೇ ಗ್ರಾಹಕರು ಪರದಾಡಬೇಕಾದ ಸ್ಥತಿ ನಿರ್ಮಾಣಗೊಂಡಿತ್ತು. ಗೂಗಲ್ ಪೇ, ಫೋನ್ ಪೇ ,ಮತ್ತು ಪೇಟಿಎಂನಂತಹಪೇಮೆಂಟ್ ಆಪ್ಲಿಕೇಷನ್‌ಗಳ ಪಾವತಿ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. ಇದರಿಂದ ಸ್ಮಾರ್ಟ್ ಫೋನ್ ಮೂಲಕ ಆನ್ಲೈನ್ ನಲ್ಲಿ ಹಣವನ್ನು ಕಳುಹಿಸಲು ಸಾಧ್ಯವಾಗದೆ ಗ್ರಾಹಕರುತೊಂದರೆಗೆ ಒಳಗಾದರು. ಯುಪಿಐ ಸ್ಥಗಿತಕ್ಕೆ ಸಂಬಂಧಿಸಿದಂತೆ 2,750ಕ್ಕಿಂತ ಹೆಚ್ಚಿನ ದೂರುಗಳು
ರಾಜಸ್ಥಾನಕ್ಕೆ ಕುಕ್ಕಿದ ಕಾಕ್: ಕೆಕೆಆರ್ ಮೊದಲ ಗೆಲುವು
ಗುವಾಹತಿ: ಸಂಘಟಿತ ದಾಳಿ ಹಾಗೂ ಆರಂಭಿಕ ಕ್ವಿಂಟನ್ ಡಿ ಕಾಕ್ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಗುವಾಹತಿಯಲ್ಲಿ ಬುಧವಾರ
ಬೆಂಗಳೂರಿನಲ್ಲಿ ಬಹು ಪೀಳಿಗೆಯ ವಾಸ ಸಮುದಾಯ ಅನಾವರಣ
ಬೆಂಗಳೂರು: ಜನರು ಹೆಚ್ಚು ದೂರವಾಗುತ್ತಿರುವ ಈ ಕಾಲಘಟ್ಟದಲ್ಲಿ ಸಂಬಂಧಗಳನ್ನು ಹತ್ತಿರಕ್ಕೆ ತರುವ ಪ್ರಯತ್ನವಾಗಿ ಹಿರಿಯರ ಜೀವನದಲ್ಲಿ ಭಾರತದ ಪ್ರಮುಖ ಹೆಸರಾದ ಪ್ರೈಮಸ್ ಆರಂಭಿಸಿದ ಪ್ರೈಮಸ್ ಸಂಗಮವು ಬೆಂಗಳೂರಿನ ಮೊದಲ ಬಹು-ಪೀಳಿಗೆಯ ವಾಸ ಸಮುದಾಯ ಅಭಿವೃದ್ಧಿಪಡಿಸಿದೆ. ಮಕ್ಕಳು, ವಯಸ್ಕರು ಮತ್ತು ಹಿರಿಯರು ಸಮಾನವಾಗಿ
ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ರಿಲೀಸ್!
ಸಿನಿಮಾಗೆ ಗುಡ್ ಬೈ ಹೇಳಿ ಪಕ್ಷ ಸ್ಥಾಪಿಸುವ ಮೂಲಕ ರಾಜಕೀಯ ಪ್ರವೇಶಿಸಿರುವ ದಳಪತಿ ವಿಜಯ್ ಅಭಿನಯದ ಕೊನೆಯ ಚಿತ್ರ ಜನ ನಾಯಗನ್ ಸಂಕ್ರಾಂತಿಗೆ ಬಿಡುಗಡೆ ಆಗಲಿದೆ. ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್ ನಟಿಸಿರುವ ಕೊನೆಯ ಚಿತ್ರ ‘ಜನ ನಾಯಗನ್’ ಮೇಲೆ
ಶಾಸಕರು ಲೋಕಾಯುಕ್ತಕ್ಕೆ ಜೂ.30ರೊಳಗೆ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ
ಬೆಂಗಳೂರು: ಶಾಸಕರು ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30ರೊಳಗೆ ಲೋಕಾಯುಕ್ತರಿಗೆ ಸಲ್ಲಿಸಬೇಕಾಗಿದೆ. 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2024-25ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ಮತ್ತು ದಾಯಿತ್ವಗಳ ಪಟ್ಟಿಯನ್ನು ಲೋಕಾಯುಕ್ತರಿಗೆ
ಸತ್ಯವಂತರಿಗೆ ಕಾಲವಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು:ಸತ್ಯವಂತರಿಗಿದು ಕಾಲವಲ್ಲ ಎಂದು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಷದ ಒಳಗಿನ ಸರ್ವಾಧಿಕಾರತ್ವ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ, ಏಕವ್ಯಕ್ತಿ ಆಡಳಿತವನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು
ಅಕ್ರಮ ಮರ ಕಡಿತರೆ ದಂಡ, ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು, ಮಾ.26: ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ
ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲ
ಬೆಂಗಳೂರು: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ(ಬಿಬಿಎಂಪಿ) ವಿಭಜನೆ ಮಾಡುವ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರು ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಇದರಿಂದ ಮುಖ್ಯಮಂತ್ರಿ ನೇತೃತ್ವದ ಸರ್ಕಾರವು ಮುಖಭಂಗ ಅನುಭವಿದೆ. ಬಿಬಿಎಂಪಿ ವಿಭಜನೆ ಮಾಡುವ ಗ್ರೇಟರ್ ಬೆಂಗಳೂರು ಆಡಳಿತ
ಹಾರ್ಲೆ ಬೈಕ್, ವಿಸ್ಕಿ ಆಮದು ಸುಂಕ ಕಡಿತಕ್ಕೆ ಭಾರತ ಚಿಂತನೆ
ತೆರಿಗೆ ಸಮರ ಆರಂಭವಾದ ಹಿನ್ನೆಲೆಯಲ್ಲಿ ಅಮೆರಿಕದ ಹಾರ್ಲೆ ಡೆವಿಡ್ಸನ್ ಬೈಕ್ ಮತ್ತು ಬೌರ್ನ್ ಬಾನ್ ವಿಸ್ಕಿ ಮೇಲಿನ ಆಮದು ಸುಂಕ ಕಡಿತಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಅಮೆರಿಕ ಮತ್ತು ಭಾರತ ಆಮದು ಮತ್ತು ರಫ್ತು ಸುಂಕ ಹೇರಿಕೆ ಕುರಿತು ಮಾತುಕತೆ ನಡೆಸಲಿದ್ದು,
ಬಿಜೆಪಿಯಿಂದ 6 ವರ್ಷ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ!
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು




