ತುಮಕೂರಿನಲ್ಲಿ ಆಟವಾಡುತ್ತಿದ್ದ ಮಗುವನ್ನು ಬಲಿ ಪಡೆದ ಟ್ರ್ಯಾಕ್ಟರ್
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಮಣ್ಣು ತುಂಬಿದ ಟ್ರ್ಯಾಕ್ಟರ್ ಹರಿದು ಐದು ವರ್ಷದ ಮಗು ಮೃತಪಟ್ಟಿದೆ. ಮನೆಯ ಮುಂದೆ ಮಗು ವರುಣ್ ಆಟವಾಡುತ್ತಿದ್ದಾಗ ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಂದು ಮಗುವಿನ ಮೇಲೆ ಹಾದು ಹೋಗಿ ಮಗು ಸ್ಥಳದಲ್ಲೇ ಮೃತಪಟ್ಟಿದೆ. ವೈಎನ್ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ
ಜೈಲಿನಲ್ಲಿ ಜಾಮರ್: ವೈದ್ಯರ ಸಂಪರ್ಕ ಸಿಗದೆ ಸಾವು ಬದುಕಿನ ಹೋರಾಟ ನಡೆಸಿದ ಚಿಕ್ಕಮಗಳೂರು ರೋಗಿ
ಮಂಗಳೂರಿನ ಜೈಲಿನಲ್ಲಿ ನೆಟ್ವರ್ಕ್ ಜಾಮರ್ ಅಳವಡಿಸಿರುವುದರಿಂದ ವೈದ್ಯರ ಸಂಪರ್ಕ ಸಾಧ್ಯವಾಗದೆ ಚಿಕ್ಕಮಗಳೂರಿನ ರೋಗಿ ಸಾವು ಬದುಕಿನ ನಡುವೆ ಹೋರಾಡಬೇಕಾಯಿತು. ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಮಂಗಳೂರಿನ ಹೃದಯ ಭಾಗ ಕೊಡಿಯಾಲಬೈಲ್ ಸುತ್ತಮುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ನೆಟ್ವರ್ಕ್ ಸಮಸ್ಯೆ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲೆಯ
ಇಂದು ಆರ್.ಆರ್ v/s ಕೆಕೆಆರ್: ಸೋತ ಚಾಂಪಿಯನ್ನರ ಮುಖಾಮುಖಿ
ಗುವಾಹಟಿ: ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮಾರ್ಚ್ 26, 2025ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್‌ನ ೬ನೇ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ. ರಾಜಸ್ಥಾನ್ ರಾಯಲ್ಸ್ ತಮ್ಮ ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮಾರ್ಚ್ 23
IPL 2025: ರನ್ ಹೊಳೆಯಲ್ಲಿ ಮುಳುಗಿದ ಗುಜರಾತ್: ಪಂಜಾಬ್ ಗೆ ಗೆಲುವಿನ `ಶ್ರೇಯಸ್’!
ಅಹಮದಾಬಾದ್: ಬೌಂಡರಿ-ಸಿಕ್ಸರ್ ಗಳ ಮೇಲಾಟದಲ್ಲಿ ಹರಿದ ರನ್ ಹೊಳೆಯಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 11 ರನ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಭರ್ಜರಿ ಆರಂಭ ಪಡೆದಿದೆ. ಅಹಮದಾಬಾದ್ ನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ
ಬಿಜೆಪಿಯ 5 ಮುಖಂಡರಿಗೆ ಶಿಸ್ತು ಸಮಿತಿಯಿಂದ ಶೋಕಾಸ್ ನೋಟೀಸ್ ಜಾರಿ
ಪಕ್ಷದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದ 5 ಮುಖಂಡರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಯಡಿಯೂರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಭಿನ್ನಮತ ತಾರಕಕ್ಕೇರಿದ್ದು, ಇತ್ತೀಚೆಗೆ ಯತ್ನಾಳ್ ಗೆ
ಅಪಘಾತದ ಗಾಯಾಳುವಿಗೆ ನೆರವಾದವರಿಗೆ 25 ಸಾವಿರ ನಗದು ಬಹುಮಾನ
ನವದೆಹಲಿ:ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತುರ್ತು ವೈದ್ಯಕೀಯ ನೆರವು ನೀಡಲು ಹಿಂದೇಟು ಹಾಕುತ್ತಿರುವುದನ್ನು ಹೋಗಲಾಡಿಸಿ, ಜನರಲ್ಲಿ ಸಹಾಯ ಮನೋಭಾವನೆ ಮೂಡಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅಪಘಾತದ ಗಾಯಾಳುವಿನ ನೆರವಿಗೆ ಮುಂದಾಗುವವರಿಗೆ 25 ಸಾವಿರ ರೂ ಬಹುಮಾನ ಘೋಷಿಸಿದ್ದಾರೆ. ಅಪಘಾತಗೊಂಡ
ಹನಿಟ್ರ್ಯಾಪ್ ತನಿಖೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಚಿವ ಕೆಎನ್ ರಾಜಣ್ಣ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಮಧುಬಲೆಯನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಸಹಕಾರ ಸಚಿವ ಕೆಎನ್ ರಾಜಣ್ಣ ಪ್ರಕರಣದ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಹನಿಟ್ರ್ಯಾಪ್ ಯತ್ನ ನಡೆದಿರುವ ಬಗ್ಗೆ ಕಳೆದ ಶುಕ್ರವಾರ ಸದನದಲ್ಲಿ ಪ್ರಸ್ತಾಪಿಸಿ
ಮೇಕೆದಾಟು ವಿಚಾರ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ ಸರಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ
32 ಲಕ್ಷ ಕುಟುಂಬಗಳಿಗೆ ಸೌಗತ್-ಎ-ಮೋದಿ ಕಿಟ್ ವಿತರಣೆ ಅಭಿಯಾನಕ್ಕೆ ಬಿಜೆಪಿ ಚಾಲನೆ!
ರಂಜಾನ್ ಹಬ್ಬದ ಪ್ರಯುಕ್ತ ‘ಸೌಗತ್-ಎ-ಮೋದಿ’ ಅಭಿಯಾನದಡಿ ದೇಶಾದ್ಯಂತ 32 ಲಕ್ಷ ಮುಸ್ಲಿಮ್ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್ ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್‌ನಲ್ಲಿ ಮುಸ್ಲಿಮ್ ಕುಟುಂಬಗಳಿಗೆ ಈದ್ ಕಿಟ್ ವಿತರಿಸುವ ಅಭಿಯಾನಕ್ಕೆ




