ಸಿಎಂ ಜೊತೆ ಚರ್ಚಿಸಿ ಹನಿಟ್ರ್ಯಾಪ್ ಪ್ರಕರಣ ತನಿಖೆ: ಜಿ.ಪರಮೇಶ್ವರ್
ಸಚಿವ ಕೆಎನ್ ರಾಜಣ್ಣ ವಿರುದ್ಧದ ಹನಿಟ್ರ್ಯಾಪ್ ಪ್ರಕರಣದ ಕುರಿತು ಸಿಎಂ ಹಾಗೂ ಕಾನೂನು ತಜ್ಞರ ಜೊತೆ ಚರ್ಚಿಸಿ ಯಾವ ರೀತಿಯ ತನಿಖೆ ನಡೆಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸಹಕಾರ ಸಚಿವ ಕೆಎನ್ ರಾಜಣ್ಣ ತನಿಖೆಗೆ ಆಗ್ರಹಿಸಿ ಸಲ್ಲಿಸಿದ ಮನವಿ ಸ್ವೀಕರಿಸಿದ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣ ವಿಧಾನಸಭೆಯಲ್ಲಿ ಚರ್ಚೆ ಆಗಿದೆ. ಸ್ಪೀಕರ್ ತನಿಖೆಗೆ ಆಗ್ರಹಿಸಿರುವುದರಿಂದ
ಏಪ್ರಿಲ್ 1ರಿಂದ ಎಟಿಎಂ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ!
2025ರ ಏಪ್ರಿಲ್ 1ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿವೆ. ಎಟಿಎಂ ಹಣ ಹಿಂಪಡೆಯಲು ಹೆಚ್ಚುವರಿ ಶುಲ್ಕದಿಂದ (ATM transaction fee) ಹಿಡಿದು ಕೆಲ ಬ್ಯಾಂಕುಗಳ ಕ್ರೆಡಿಟ್ ಕಾರ್ಡ್ ನಿಯಮಗಳವರೆಗೆ ಬದಲಾವಣೆಗಳಾಗುತ್ತಿವೆ. ಇದರಲ್ಲಿ ಪ್ರಮುಖವಾಗಿ ಎರಡು ಅಂಶಗಳು ಗಮನಾರ್ಹ ಎನಿಸಿವೆ. ಮೊದಲನೆಯದು
ಬಿಗ್ ಬಾಸ್ ಖ್ಯಾತಿಯ ವಿನಯ್, ರಜತ್ ರಾತ್ರೋರಾತ್ರಿ ಬಿಡುಗಡೆ!
ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ಬೆಂಗಳೂರಿನ ಬಸವೇಶ್ವರ ನಗರದ ಪೊಲೀಸರು ಬಂಧಿಸಿ ರಾತ್ರೋರಾತ್ರಿ ಬಿಡುಗಡೆ ಮಾಡಿದ್ದಾರೆ. ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ವಿನಯ್ ಹಾಗೂ ರಜತ್ ವಿರುದ್ಧ ಅಕ್ರಮ
ದಾವಣಗೆರೆಯಲ್ಲಿ ಕಾರು ಚಲಾಯಿಸುತ್ತಿದ್ದಾಗಲೇ ಮೃತಪಟ್ಟ ಗುತ್ತಿಗೆದಾರ
ದಾವಣಗೆರೆ ನಗರದ ಬಿಐಇಟಿ ರಸ್ತೆಯ ಈಶ್ವರ ಧ್ಯಾನ ಮಂದಿರದ ಬಳಿ ಕಾರು ಚಾಲನೆ ಮಾಡುವಾಗ ಚಾಲಕ ಹೃದಯಸ್ತಂಭನಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಏಕಾಏಕಿ ಹೃದಯಸ್ತಂಭನಗೊಂಡ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರ
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ
ಒಂದೇ ದಿನ 17 ಬಿರ್ಲಾ ಒಪಸ್ ಪೇಂಟ್ಸ್ ಹೊಸ ಫ್ರಾಂಚೈಸಿ ಆರಂಭ
ಬೆಂಗಳೂರು: ಆದಿತ್ಯ ಬಿರ್ಲಾ ಸಮೂಹದ ಅಡಿಯಲ್ಲಿ ಗ್ರಾಸಿಂ ಇಂಡಸ್ಟ್ರೀಸ್ ಭಾಗವಾಗಿರುವ ಬಿರ್ಲಾ ಒಪಸ್ ಪೇಂಟ್ಸ್ ಕರ್ನಾಟಕದಲ್ಲಿ ಒಂದು ದಿನದಲ್ಲಿ 17 ಹೊಸ ಫ್ರಾಂಚೈಸಿ ಮಳಿಗೆಗಳನ್ನು ಉದ್ಘಾಟಿಸುವ ಮೂಲಕ ಪ್ರಮುಖ ಮೈಲಿಗಲ್ಲು ಸಾಧಿಸಿದ್ದು ಇದರಿಂದ ರಾಜ್ಯದಾದ್ಯಂತ ಒಟ್ಟು 45 ಫ್ರಾಂಚೈಸಿ ಮಳಿಗೆಗಳಾಗಿವೆ. ರಾಜ್ಯದಲ್ಲಿ
ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ ಪ್ರಕರಣಗಳು
ಬೇಸಿಗೆ ಮಧ್ಯೆ ಮಳೆಯೊಂದಿಗೆ ವಾತಾವರಣ ಬದಲಾಗುತ್ತಿದ್ದಂತೆ ಬೆಂಗಳೂರು ನಗರ ಒಳಗೊಂಡಂತೆ ರಾಜ್ಯದಲ್ಲಿ ವೈರಲ್ ಜ್ವರ ಕೇಸ್‌ಗಳು ಹೆಚ್ಚುತ್ತಿವೆ. ರಾಜ್ಯ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ನಿಗಾ ಘಟಕವು ಈ ಸಂಬಂಧ ಮಾಹಿತಿ ಪ್ರಕಟಿಸಿ ಅಂಕಿ ಅಂಶಗಳನ್ನು ನೀಡಿದೆ. ಮಾರ್ಚ್ ಆರಂಭದಲ್ಲಿ ಸಂಪೂರ್ಣ
ಪಿಯುಸಿ, ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ದಂಧೆ: ಮೂವರ ಬಂಧನ
ಕರ್ನಾಟಕ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಮೂಲಕ ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ಟಡಿ ಸೆಂಟರ್ಗಳನ್ನು ತೆರೆದು ನಕಲಿ ಅಂಕಪಟ್ಟಿ ನೀಡುತ್ತಿದ್ದರು.
ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಪತ್ನಿ
ರಾಜಸ್ಥಾನದ ಝಲಾವರ್ ಜಿಲ್ಲೆಯ ಬಕಾನಿ ಪಟ್ಟಣದಲ್ಲಿ ಪತ್ನಿ ಕೋಪದಲ್ಲಿ ತನ್ನ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿ ಸಿರುವ ಸುದ್ದಿಯೊಂದು ವೈರಲ್ ಆಗ್ತಿದೆ. ಆದರೆ ಈ ಘಟನೆಯು ನಂಬಲರ್ಹವೇ ಎಂಬ ಪ್ರಶ್ನೆ ಕೂಡ ಹಲವರನ್ನು ಕಾಡಿದೆ. ಪತ್ನಿಯು ಗಂಡನ ನಾಲಗೆ ಕಚ್ಚಿ ತುಂಡರಿಸಲು
ಸಂಘಟಿತ ಅಪರಾಧ ಕೇಸ್ ದಾಖಲಿಸಲು ಅನುಮತಿ: ಎಚ್ಚರಿಕೆ ವಹಿಸಲು ಹೈಕೋರ್ಟ್ ಸೂಚನೆ
ಸಂಘಟಿತ ಅಪರಾಧ (ಬಿಎನ್ಎಸ್ ಸೆಕ್ಷನ್ 111) ಅಡಿ ಪ್ರಕರಣ ದಾಖಲಿಸಲು ತನಿಖಾಧಿಕಾರಿಗಳಿಗೆ ಅನುಮತಿ ನೀಡುವಾಗ ವಿಚಾರಣಾ ನ್ಯಾಯಾಲಯಗಳು ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಸೋಮವಾರ ಹೈಕೋರ್ಟ್ ತಿಳಿಸಿದೆ. ಮತ್ತೊಬ್ಬ ವ್ಯಕ್ತಿಯ ಎಟಿಎಂ ಕದ್ದು ಬಳಕೆ ಮಾಡಿ 1 ಲಕ್ಷ ರೂ. ಹಣ




