ಸುಪ್ರೀಂ ತಲುಪಿದ ಕರ್ನಾಟಕದ ಹನಿ ಟ್ರ್ಯಾಪಿಂಗ್
ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಹನಿ ಟ್ರ್ಯಾಪಿಂಗ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಅರ್ಜಿದಾರರು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎದುರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದ್ದು, ಪ್ರಕರಣದಲ್ಲಿ ನ್ಯಾಯಮೂರ್ತಿಯ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ಉಲ್ಲೇಖಿಸಿದ್ದಾರೆ. ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು
ಹಾಸನದಲ್ಲಿ ಫೋಟೋಶೂಟ್ ಮಾಡುತ್ತಿದ್ದ ಯುವಕ ನೀರಿಗೆ ಬಿದ್ದು ಸಾವು
ಹಾಸನ ತಾಲೂಕಿನ ಹಾಲುವಾಗಿಲು ಗ್ರಾಮದಲ್ಲಿ ಫೋಟೋಶೂಟ್ ಮಾಡುತ್ತಿದ್ದ ವೇಳೆ ಯುವಕನೊಬ್ಬ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಾಗೇಂದ್ರ (19) ಮೃತ ಯುವಕ. ಖಾಸಗಿ ಚಿನ್ನಾಭರಣ ಮಳಿಗೆಯಲ್ಲಿ ಪ್ರಮೋಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಂದ್ರ ಹಾಗೂ ಮಂಜುನಾಥ್ ಮುಗಿಸಿ ಹಾಲುವಾಗಿಲು ಬಳಿ
ಚಿಕ್ಕಮಗಳೂರಿನಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವಾಗ ಬೆನ್ನುಮೂಳೆ ಘಾಸಿಯಾಗಿ ಯುವಕ ಸಾವು
ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಕೊಡಗಿನ ಕುಶಾಲನಗರದಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ಯುವಕ. ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ
ಅರ್ಜಿ ಕರೆಯದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ಮುಂದೆ ಅರ್ಜಿಯನ್ನು ಸ್ವೀಕರಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ
ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ!
ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ
ಐಪಿಎಲ್ 2025: ಚೆನ್ನೈಗೆ ಸುಲಭ ತುತ್ತಾದ ಮುಂಬೈ ಇಂಡಿಯನ್ಸ್!
ಸ್ಪಿನ್ನರ್ ನೂರ್ ಅಹ್ಮದ್ ಮಾರಕ ದಾಳಿ ಹಾಗೂ ರಚಿನ್ ರವೀಂದ್ರ ಅವರ ತಾಳ್ಮೆಯ ಅರ್ಧಶತಕದ ಸಹಾಯದಿಂದ ಚೆನ್ನೈ ಸೂಪರ್ ಕಿಂಗ್ಸ್ 4 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಚೆನ್ನೈನಲ್ಲಿ ಭಾನುವಾರ ನಡೆದ
ನಾನು ಸಿಎಂ ಆಗುವುದು ಹೈಕಮಾಂಡ್ ನಿರ್ಧರಿಸುತ್ತದೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ನಾನು ಮುಖ್ಯಮಂತ್ರಿ ಆಗುವ ಕುರಿತು ಹೈಕಮಾಂಡ್ ಜೊತೆ ಆಗಿರುವ ಮಾತುಕತೆಯನ್ನು ನಾನು ಬಹಿರಂಗಪಡಿಸುವುದಿಲ್ಲ. ಆದರೆ 2028ರಲ್ಲಿ ನನ್ನ ನಾಯಕತ್ವದಲ್ಲೇ ಪಕ್ಷ ಚುನಾವಣೆ ಎದುರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಖಾಸಗಿ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಮುಂದಿನ
ಐಪಿಎಲ್ 2025: ರಾಜಸ್ಥಾನ್ ವಿರುದ್ಧ ಸನ್ ರೈಸರ್ಸ್ 44 ರನ್ ಜಯ
ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ತಂಡ ಒಡ್ಡಿದ ದಾಖಲೆ ಮೊತ್ತವನ್ನು ಬೆಂಬತ್ತಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್ ನಲ್ಲಿ 44 ರನ್ ನೊಂದಿಗೆ ವೀರೋಚಿತ ಸೋಲಿನೊಂದಿಗೆ ಅಭಿಯಾನ ಆರಂಭಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್
ಬಿಜೆಪಿ, ಜೆಡಿಎಸ್ ಪಕ್ಷಗಳು ಟೂರಿಂಗ್ ಟಾಕೀಸ್ ನಂತೆ ದೇಶ ಬಿಟ್ಟು ತೊಲಗಲಿ: ಸಚಿವ ಬೈರತಿ ಸುರೇಶ್
ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ 30000ಸಾವಿರ ಜನರಿಗೆ ದಿನಸಿ ಕಿಟ್ ಗಳನ್ನು ಸಚಿವ ಬೈರತಿ ಸುರೇಶ್, ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕ, ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ವಾಜಿದ್
ಇಶಾನ್ ಕಿಶನ್ ಚೊಚ್ಚಲ ಶತಕ: 286 ಪೇರಿಸಿ ದಾಖಲೆ ಬರೆದ ಸನ್ ರೈಸರ್ಸ್ ಹೈದರಾಬಾದ್
ಭಾರತ ತಂಡದಿಂದ ಕಡೆಗಣಿಸಲ್ಪಟ್ಟ ಎಡಗೈ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ದಾಖಲೆಯ ಮೊತ್ತ ಪೇರಿಸಿದೆ. ಹೈದರಾಬಾದ್ ನಲ್ಲಿ ಭಾನುವಾರ




